ಬೀದರ್: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ದುರ್ಮರಣ ಹೊಂದಿರುವಂತಹ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದಲ್ಲಿ ನಡೆದಿದೆ. ವಿನಯ್(20), ವೀರೇಶ್(17) ಮೃತ ಸಹೋದರರು. ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸ್ ಠಾಣೆಯ ಪಿಎಸ್ಐ ಪ್ರೀತಮ್ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು. ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಆವರಣದಲ್ಲಿನ ಮರ ಕಡಿಯುವಾಗ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ಹೊನ್ನಿಕೇರಿ ಸರ್ಕಾರಿ ಮಾದರಿ ಶಾಲೆಯಲ್ಲಿ ನಡೆದಿದೆ. ಹೊನ್ನಿಕೇರಿ ಗ್ರಾಮದ ಸಿದ್ಧಪ್ಪ (42) ಮರಬಿದ್ದು ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಳಿಯಿಂದ ಶಾಲಾ ಆವರಣಲ್ಲಿನ ಮರ ನೆಲ್ಲಕ್ಕೆ ಬಿದ್ದಿತ್ತು. ಆ ಮರ ಕಡಿಯುವಾಗ ರೆಂಬೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರ್ ಭೇಟಿ ಮರಣೋತ್ತರ ಪರೀಕ್ಷೆಗೆ ಶವ ಸಾಗಿಸಲಾಗಿದೆ. ಜನವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಮರಕ್ಕೆ ಕಾರು ಡಿಕ್ಕಿ, ಮಹಾರಾಷ್ಟ್ರದ ಮೂಲದ ವ್ಯಕ್ತಿ ದುರ್ಮರಣ
ಬೆಳಗಾವಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಾರಾಷ್ಟ್ರ ಮೂಲದ ವ್ಯಕ್ತಿ ದುರ್ಮರಣ ಹೊಂದಿರುವಂತಹ ಘಟನೆ
ತಾಲೂಕಿನ ಉಕ್ಕಡ ಗ್ರಾಮದ ಬಳಿ ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಮಿರಜ್ ನಿವಾಸಿ ಸುಲ್ತಾನ್ ಖಾಜಿ(30) ಮೃತ ವ್ಯಕ್ತಿ.
ಕೆಲಸ ನಿಮಿತ್ತ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವಾಗ ಅಪಘಾತವಾಗಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ಮಾಡಿದರು.
ಅನುಮಾನಾಸ್ಪದ ರೀತಿಯಲ್ಲಿ ಗರ್ಭಿಣಿ ಶವ ಪತ್ತೆ
ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಬೈನಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗರ್ಭಿಣಿ ಶವ ಪತ್ತೆಯಾಗಿದೆ. ಕುಟಂಬಸ್ಥರೇ ಗರ್ಭಿಣಿಯನ್ನು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಆಂದ್ರ ಮೂಲದ ಅನಿತಾ (28) ಎಂಬುವರ ಶವ ಪತ್ತೆಯಾಗಿದೆ. ಪತ್ನಿ ಅನಿತಾಳನ್ನು ಪತಿ ಆನಂದ್ ಕುಮಾರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆನಂದ್ ಹಾಗೂ ಅನಿತಾ ಕಳೆದ ಒಂಬತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು.
ಮದುವೆಯಾಗಿ ದಂಪತಿಗಳು ಆಂದ್ರದಿಂದ ಬೈನಹಳ್ಳಿ ಗ್ರಾಮದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಆದರೆ ತಡರಾತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದೆ. ಗಂಡನೆ ಕೊಲೆ ಮಾಡಿದ್ದಾನೆ ಅಂತ ಅನಿತಾ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ಈ ನಡುವೆ ತೋಟದ ಮಾಲೀಕರು ಕಿರುಕುಳ ನೀಡ್ತಿದ್ದರು ಅಂತ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೊಲೆ ಆರೋಪ ಹೊತ್ತಿರೋ ಆನಂದನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಜಯಪುರದಲ್ಲಿ ಮಟ್ಕಾ ಬುಕ್ಕಿಗಳ ಹಾವಳಿ
ವಿಜಯಪುರ ಜಿಲ್ಲೆಯಲ್ಲಿ ಮಟ್ಕಾ ಬುಕ್ಕಿಗಳ ಹಾವಳಿ ಹೆಚ್ಚಾಗಿದೆ. ದೇವರಹಿಪ್ಪರಗಿ ಪಟ್ಟಣದ ಗಲ್ಲಿಗಳಲ್ಲಿ ಮಟ್ಕಾ ದಂಧೆ ಹೆಚ್ಚಿದೆ. ಕಿಂಗ್ಪಿನ್ ಅಶೋಕ ದಾದರ್ ಮನೆಯಲ್ಲಿ ಮಟ್ಕಾ ದಂಧೆ ನಡೆದಿದ್ದು ಇಡೀ ಕುಟುಂಬವೇ ಅದರಲ್ಲಿ ಭಾಗಿಯಾಗಿದೆ. ಮಟ್ಕಾ ಬರೆಯಲು ಹತ್ತಾರು ಏಜೆಂಟ್, ಬುಕ್ಕಿಗಳನ್ನು ನೇಮಕ ಮಾಡಿಕೊಂಡಿದ್ದಾರೆ. ತಾಲೂಕಿನ ಹಳ್ಳಿಗಳಲ್ಲಿ ಏಜೆಂಟ್ಗಳಿಂದ ಮಟ್ಕಾ ದಂಧೆ ನಡೆಯುತ್ತಿದ್ದು ಮಟ್ಕಾ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ಪೊಲೀಸರ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.