AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ: ಪೀರ್​ ಪಾಷಾ ಮಸೀದಿಯೇ ಮೂಲ ಅನುಭವ ಮಂಟಪ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ

ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆಯುತ್ತಿರುವ ಸ್ವಾಮೀಜಿಗಳ ನಡೆ ಮೂಲ ಅನುಭವ ಮಂಟಪದ ಕಡೆ ಸಮಾವೇಶದ ಹಿನ್ನಲೆಯಲ್ಲಿ ಬಸವಕಲ್ಯಾಣದಲ್ಲಿ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಬಸವಕಲ್ಯಾಣದಲ್ಲಿ ಮೂಲ ಅನುಭವ ಮಂಟಪವಿದೆ. ಅದು ಎಲ್ಲಿದೆ ಎಂದು ಎಲ್ಲರಿಗೂ ಇದೀಗ ಗೊತ್ತಾಗಿದೆ ಎಂದರು

ಬೀದರ: ಪೀರ್​ ಪಾಷಾ ಮಸೀದಿಯೇ ಮೂಲ ಅನುಭವ ಮಂಟಪ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ
ಪೀರ್​ ಪಾಷಾ ಮಸೀದಿ ವಿವಾದವಿರುವ ಮಸೀದಿ
TV9 Web
| Edited By: |

Updated on: Jun 12, 2022 | 2:31 PM

Share

ಬೀದರ: ಜಿಲ್ಲೆಯ ಬಸವಕಲ್ಯಾಣದಲ್ಲಿ (Basavakalyana) ನಡೆಯುತ್ತಿರುವ ಸ್ವಾಮೀಜಿಗಳ ನಡೆ ಮೂಲ ಅನುಭವ ಮಂಟಪದ (Anubhav Mantapa) ಕಡೆ ಸಮಾವೇಶದ ಹಿನ್ನಲೆಯಲ್ಲಿ ಬಸವಕಲ್ಯಾಣದಲ್ಲಿ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಬಸವಕಲ್ಯಾಣದಲ್ಲಿ ಮೂಲ ಅನುಭವ ಮಂಟಪವಿದೆ. ಅದು ಎಲ್ಲಿದೆ ಎಂದು ಎಲ್ಲರಿಗೂ ಇದೀಗ ಗೊತ್ತಾಗಿದೆ. ಇಂದು ಸಮಾವೇಶ ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಸರ್ಕಾರ ಪುರಾತತ್ವ ಇಲಾಖೆ ಮೂಲಕ ಪರಿಶೀಲನೆ ನಡೆಸಬೇಕು. ಮೂಲ ಅನುಭವ ಮಂಟಪದ ದರ್ಶನಕ್ಕೆ ಅವಕಾಶ ನೀಡಬೇಕು. ಪೀರ್​ ಪಾಷಾ ಮಸೀದಿಯೇ ಅನುಭವ ಮಂಟಪ ಎಂದು ಬಸವಕಲ್ಯಾಣ ಪಟ್ಟಣದ ಮಹಾಮನೆಯಲ್ಲಿ ಶ್ರೀಗಳು ಹೇಳಿದರು.

ಸ್ವಾಮೀಜಿಗಳ ನಡೆ ಮೂಲ ಅನುಭವ ಮಂಟಪದ ಕಡೆ ಸಮಾವೇಶಕ್ಕೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮತ್ತು ಶ್ರೀರಾಮಸೇನೆ ಸಂಘಟನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಗೈರಾಗಿದ್ದಾರೆ.

ಇದನ್ನು ಓದಿ: ಬೀದರ್ ಬಸವಕಲ್ಯಾಣದಲ್ಲಿ ಮಠಾಧೀಶರಿಂದ ಸಭೆ: 14 ಸ್ಥಳಗಳಲ್ಲಿ ಸಾವಿರಕ್ಕೂ ಅಧಿಕ ಪೊಲೀಸರಿಂದ ಬಿಗಿ ಭದ್ರತೆ

ಬಸವಕಲ್ಯಾಣದಲ್ಲಿ ಇಂದು (ಜೂನ್ 12) ‘ಮಠಾಧೀಶರ ನಡೆ ಮೂಲ ಅನುಭವ ಮಂಟಪ ಕಡೆ’ ಸಭೆ ನಡೆಯುತ್ತಿದ್ದು,  ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣದಿಂದ ಶ್ರೀಗಳು ಜಿಲ್ಲೆಗೆ ಆಗಮಿಸಿದ್ದಾರೆ. ಸಭೆಯಲ್ಲಿ 200ಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಬಸವಕಲ್ಯಾಣದಲ್ಲಿ ಮೂಲ ಅನುಭವ ಮಂಟಪಕ್ಕಾಗಿ ಹೋರಾಟ ನಡೆಸಲು ಶ್ರೀಗಳು ತಯಾರಿ ನಡೆಸಿಕೊಳ್ಳುತ್ತಾರೆ. ಸಭೆ ನಡೆಯುತ್ತಿರುವ ತೇರು ಮೈದಾನ ಸೇರಿದಂತೆ ಸುಮಾರು 14 ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ತೇರು ಮೈದಾನದ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಮಠಾಧೀಶರ ಸಮಾವೇಶ ಪ್ರಾರಂಭವಾಗಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮವಾಗಿ ಎಸ್​ಪಿ, ಎಎಸ್​ಪಿ, ಮೂವರು ಡಿವೈಎಸ್​ಪಿ, ಕೆಎಸ್ಆರ್​ಪಿ ತುಕಡಿ, ಡಿಎಆರ್ ತುಕಡಿ ಸೇರಿ ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನು ಸಮಾವೇಶಕ್ಕೆ ಆಗಮಿಸುವವರಿಗೆ ಮೈದಾನದಲ್ಲೇ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಹತ್ತು ಸಾವಿರ ಜನರಿಗೆ ಆಗುವಷ್ಟು ಊಟದ ವ್ಯವಸ್ಥೆ ಇದೆ. ಗೋದಿ ಹುಗ್ಗಿ, ರೊಟ್ಟಿ, ಹಿಟ್ಟಿನ ಪಲ್ಲೆ, ಅನ್ನ, ಸಾರು ಸಿದ್ಧವಾಗಿದೆ. ಐವತ್ತಕ್ಕೂ ಹೆಚ್ಚು ಸಿಬ್ಬಂದಿಯಿಂದ ಅಡುಗೆ ತಯಾರಿಯಾಗಿದೆ. ಮುಂಜಾನೆಯಿಂದ ಬಾಣಸಿಗರು ಅಡುಗೆ ಮಾಡುತ್ತಿದ್ದಾರೆ. ಮಠಾಧೀಶರ ಜೊತೆ ಸಾರ್ವಜನಿಕರು ಕೂಡಾ ಬರುತ್ತಿರುವ ಹಿನ್ನೆಲೆ ಊಟದ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್