ಜನಿವಾರ ವಿವಾದ; ಬೀದರ್​ನ ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು

ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸಿಇಟಿ ಪರೀಕ್ಷಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡದ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಬೀದರ್​ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ್ ಜಿಲ್ಲಾಧಿಕಾರಿ ಈ ಘಟನೆಯಲ್ಲಿ ಅಧಿಕಾರದ್ದೇ ತಪ್ಪು ಎಂದು ವರದಿ ಸಲ್ಲಿಸಿದ್ದರು.

ಜನಿವಾರ ವಿವಾದ; ಬೀದರ್​ನ ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು
Bidar Cet Student
Edited By:

Updated on: Apr 19, 2025 | 10:41 PM

ಬೆಂಗಳೂರು, ಏಪ್ರಿಲ್ 19: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿದ್ದಾನೆಂಬ ಕಾರಣಕ್ಕೆ ಆತನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಬೀದರ್​ನಲ್ಲಿ ನಡೆದಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ್ ಜಿಲ್ಲಾಧಿಕಾರಿ ಈ ಘಟನೆಯಲ್ಲಿ ಅಧಿಕಾರದ್ದೇ ತಪ್ಪು ಎಂದು ವರದಿ ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಈ ಘಟನೆ ನಡೆದ ಬೀದರ್​ನ ಖಾಸಗಿ ಕಾಲೇಜಿನ ಪ್ರಾಂಶುಪಾಲ ಮತ್ತು ಆ ಕಾಲೇಜಿನ ಕೆಲವು ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಪರೀಕ್ಷಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡದ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್​ ಆದೇಶ ಹೊರಡಿಸಿದ್ದಾರೆ. ಬೀದರ್​ ಜಿಲ್ಲಾಧಿಕಾರಿಯಿಂದ ವರದಿ ಸಲ್ಲಿಕೆ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ. ಬೀದರ್​ನಲ್ಲಿರುವ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್​ ಚಂದ್ರಶೇಖರ ಬಿರಾದಾರ್ ಹಾಗೂ ಆ ಕಾಲೇಜಿನ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಸಿಇಟಿ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣ; ಅಧಿಕಾರಿಗಳದ್ದೇ ತಪ್ಪೆಂದು ವರದಿ ಸಲ್ಲಿಸಿದ ಡಿಸಿ

ಇದನ್ನೂ ಓದಿ
ಬಿಜೆಪಿ ಭದ್ರಕೋಟೆಯೇ ಡಿಕೆ ಶಿವಕುಮಾರ್ ಟಾರ್ಗೆಟ್: ಸಾಫ್ಟ್​ ಹಿಂದುತ್ವ ಮಂತ್ರ
ಕರ್ನಾಟಕ ಸಿಇಟಿ ಪರೀಕ್ಷೆ, ಜನಿವಾರ ವಿವಾದ: ನಿಜಕ್ಕೂ ಈವರೆಗೆ ನಡೆದಿದ್ದೇನು?
ಜನಿವಾರ ತೆಗೆಸಿದ್ದೇ ಆದರೆ ಅತಿರೇಕ, ಕಠಿಣ ಕ್ರಮ ಕೈಗೊಳ್ತೇವೆ: ಸಚಿವ ಸುಧಾಕರ್
CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು

ಬೀದರ್​​ನ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಖಾಸಗೀ ಕಾಲೇಜಾಗಿರುವುದರಿಂದ ಹಾಗೂ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಈ ಆದೇಶ ಹೊರಡಿಸಲಾಗಿದೆ. ಚಂದ್ರಶೇಖರ ಬಿರಾದಾರ್, ಪ್ರಾಂಶುಪಾಲರು ಮತ್ತು ಕಾಲೇಜಿನ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಇವರುಗಳನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸಲು ಆಡಳಿತ ಮಂಡಳಿಗೆ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ.

ಬೀದರ್ ಜಿಲ್ಲಾಧಿಕಾರಿಯ ವರದಿಯಲ್ಲೇನಿತ್ತು?:

ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೀದರ್ ಜಿಲ್ಲಾಧಿಕಾರಿ ಸಂಪೂರ್ಣ ವರದಿ ಸಲ್ಲಿಕೆ ಮಾಡಿದ್ದರು. ಈ ವರದಿಯಲ್ಲಿ ಅಧಿಕಾರಿಗಳದ್ದೇ ತಪ್ಪು ಎಂದು ಉಲ್ಲೇಖಿಸಲಾಗಿತ್ತು. ಪರೀಕ್ಷಾ ವೀಕ್ಷಕರಾಗಿದ್ದ ಔರಾದ್​ ಆರ್​ಎಫ್ಒ ಮೊದ್ದಶೀರ್ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ. ಪರೀಕ್ಷಾರ್ಥಿ ಪರೀಕ್ಷೆಗೆ ಕಾದು ನಿಂತರೂ ಅವಕಾಶ ಸಿಕ್ಕಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿಯಮ ಪಾಲಿಸದೆ ಮೊದ್ದಶೀರ್ ಎಡವಟ್ಟು ಮಾಡಿದ್ದಾರೆ ಎಂದು ವರದಿಯಲ್ಲಿ ಡಿಸಿ ತಿಳಿಸಿದ್ದರು.

ಇದನ್ನೂ ಓದಿ: ಸಿಇಟಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಜನರ ನಂಬಿಕೆ ಮೇಲಿನ ದಾಳಿ; ಪ್ರಲ್ಹಾದ್ ಜೋಶಿ

ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರ ಮತ್ತು ಕೈಗೆ ಕಟ್ಟಿದ್ದ ಕಾಶಿ ದಾರವನ್ನು ತೆಗೆಸಿ ಅಧಿಕಾರಿಗಳು ಕಸದ ಬುಟ್ಟಿಗೆ ಎಸೆದಿದ್ದರು. ಬೀದರ್‌ನಲ್ಲಿ ಜನಿವಾರ ಹಾಕಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿರಲಿಲ್ಲ. ಅಧಿಕಾರಿಗಳ ಈ ಕ್ರಮದ ವಿರುದ್ಧ ಬ್ರಾಹ್ಮಣ ಮಹಾಸಭಾ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಬೀದರ್​ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು:

ಜನಿವಾರ ತೆಗೆಯದ್ದಕ್ಕೆ ಪರೀಕ್ಷೆಗೆ ಅವಕಾಶ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಬೀದರ್​ನ ಖಾಸಗಿ ಕಾಲೇಜಿನಲ್ಲಿ ನಿನ್ನೆ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಳ್ಳಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:28 pm, Sat, 19 April 25

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us