ಈಗ ಗ್ಯಾಸ್ ಸಿಲಿಂಡರ್​​ ಮೇಲೆ ಖದೀಮರ ಕಣ್ಣು: ಶಾಲೆಯಲ್ಲಿದ್ದ 6 ಸಿಲಿಂಡರ್ ಹೊತ್ತೊಯ್ದ ಕಳ್ಳರು

ಸರಗಳ್ಳತನ, ಮನೆಗಳ್ಳತನ, ಬೈಕ್‌ ಕಳ್ಳತನ ಅಂತಿದ್ದ ಖದೀಮರು ಇದೀಗ ಸಿಲಿಂಡರ್ ಕಳ್ಳತನಕ್ಕೆ ಇಳಿದಿದ್ದಾರೆ. ಗ್ಯಾಸ್ ಅಭಾವದ ನಡುವೆ ಶಾಲೆಯಲ್ಲಿದ್ದ 6 ಸಿಲಿಂಡರ್ ಖದೀಮರು ಕಳತನ ಮಾಡಿರುವಂತಹ ಘಟನೆ ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೋರ್ಟಾ ಗ್ರಾಮದ ಶಾಲೆಯೊಂದರಲ್ಲಿ ನಡೆದಿದೆ. ಸದ್ಯ ಬಸವಕಲ್ಯಾಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಈಗ ಗ್ಯಾಸ್ ಸಿಲಿಂಡರ್​​ ಮೇಲೆ ಖದೀಮರ ಕಣ್ಣು: ಶಾಲೆಯಲ್ಲಿದ್ದ 6 ಸಿಲಿಂಡರ್ ಹೊತ್ತೊಯ್ದ ಕಳ್ಳರು
ಸಿಲಿಂಡರ್ ಕಳವು
Image Credit source: tv9 kannada
Edited By:

Updated on: Mar 23, 2026 | 4:17 PM

ಬೀದರ್​​, ಮಾರ್ಚ್​​ 23: ಬೆಂಗಳೂರು ಸೇರಿ ಜಿಲ್ಲೆ ಜಿಲ್ಲೆಗಳಲ್ಲೂ ಗ್ಯಾಸ್​ ಸಿಲಿಂಡರ್ ಅಭಾವ ತಲೆದೂರಿದೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್​ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್​​ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ ಸಂಕಷ್ಟ ಹಬ್ಬವಾಗಿದೆ. ಹಾಡಹಗಲೇ ರಾಜಾರೋಷವಾಗಿ ಸಿಲಿಂಡರ್‌ ಕಳ್ಳತನ (Gas Cylinder Theft) ಮಾಡಿತ್ತಿದ್ದಾರೆ. ಬೀದರ್​​ನ ಶಾಲೆಯಲ್ಲಿದ್ದ 6 ಸಿಲಿಂಡರ್​​ ಕಳತನ ಮಾಡಿರುವಂತಹ ಘಟನೆ ನಡೆದಿದೆ.

ಅಡುಗೆಕೋಣೆ ಬೀಗ ಮುರಿದು ಸಿಲಿಂಡರ್ ಕಳ್ಳತನ

ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೋರ್ಟಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿದ್ದ 6 ಸಿಲಿಂಡರ್​​ಗಳನ್ನ ಕಳ್ಳರು ಹೊತ್ತೊಯ್ದಿದ್ದಾರೆ.​ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಪೂರೈಸಿದ್ದ ಸಿಲಿಂಡರ್​ಗಳನ್ನ ಅಡುಗೆಕೋಣೆ ಬೀಗ ಮುರಿದು ಕಳ್ಳರು ಹೊತ್ತೊಯ್ದಿದ್ದಾರೆ. ಸದ್ಯ ಈ ಕುರಿತಾಗಿ ಬಸವಕಲ್ಯಾಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗೋದಾಮಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಕದ್ದ ಅಪರಿಚಿತ ವ್ಯಕ್ತಿ

ಇನ್ನು ಇತ್ತೀಚೆಗೆ ಭಾಲ್ಕಿ ನಿವಾಸಿ ಮಲ್ಲಿಕಾರ್ಜುನ ಕಂಟೆಪ್ಪಾ ಅವರು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಖರೀದಿಸಲು ಗೋದಾಮಿಗೆ ತೆರಳಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಗ್ಯಾಸ್ ಸಿಲಿಂಡರ್ ಕದ್ದು ಪರಾರಿಯಾಗಿದ್ದ.

ಇದನ್ನೂ ಓದಿ: ಪೂರೈಕೆ ವ್ಯತ್ಯಯದ ನಡುವೆ LPG ಸಿಲಿಂಡರ್​​ಗೆ ಕಳ್ಳರ ಕಾಟ: ಮನೆಯ ಕಾಂಪೌಂಡ್​​ಗೆ ನುಗ್ಗಿ ಕದ್ದು ಎಸ್ಕೇಪ್​​!

ಮಾರ್ಚ್ 14ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿತ್ತು. ಕಳುವಾದ ಗ್ಯಾಸ್ ಸಿಲಿಂಡರ್ ಹುಡುಕಿಕೊಡುವಂತೆ ಮಲ್ಲಿಕಾರ್ಜುನ ಕಂಟೆಪ್ಪಾ ಭಾಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹಾಡಹಗಲೇ 2 ಸಿಲಿಂಡರ್‌ ಹೊತ್ತೊಯ್ದ ಖದೀಮರು

ಗ್ಯಾಸ್‌ಗೆ ಬೇಡಿಕೆ ಹೆಚ್ಚಾಗ್ತಿದ್ದಂತೆ ಸಿಲಿಂಡರ್ ಮೇಲೆ ಕಣ್‌ ಹಾಕಿದ್ದಾರೆ. ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಆರ್.ಸಿ ಲೇಔಟ್‌ನಲ್ಲಿರೋ ಸಾಯಿ ಅಪಾರ್ಟ್‌ಮೆಂಟ್‌ನಲ್ಲಿ ಹಾಡಹಗಲೇ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಇತ್ತೀಚಿಗೆ ನಡೆದಿದೆ.

ಇದನ್ನೂ ಓದಿ: Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

ಯುಗಾದಿ ಹಬ್ಬದ ದಿನವೇ ಹೆಲ್ಮೆಟ್‌ ಧರಿಸಿ ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ಖದೀಮರು, ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗೆ ನುಗ್ಗಿದ್ದಾರೆ. ಅಲ್ಲಿದ್ದ ಎರಡು ಸಿಲಿಂಡರ್‌ಗಳನ್ನ ಸ್ಕೂಟರ್‌ನಲ್ಲಿಟ್ಟುಕೊಂಡು ಎಸ್ಕೇಪ್ ಆಗಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಬೇಗೂರು ಪೊಲೀಸರು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us