AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓದುತ್ತಿದ್ದ ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ?

ಬೀದರ್‌ನ ಭೆಮಳಖೇಡ ಗ್ರಾಮದಲ್ಲಿ 16 ವರ್ಷದ ಬಾಲಕಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸಿಸಿಟಿವಿ ದೃಶ್ಯಾವಳಿಗಳು ಲಭ್ಯ ಆಗಿವೆ. ಸದ್ಯ ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದುತ್ತಿದ್ದ ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ?
ಮದಿಯಾ ನಶೀರ್ ಪಾಷಾImage Credit source: tv9 kannada
ಸುರೇಶ ನಾಯಕ
| Edited By: |

Updated on: Mar 11, 2026 | 8:47 PM

Share

ಬೀದರ್, ಮಾರ್ಚ್​ 11: ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಬೀದರ್​ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಪಾಠಿ ಲವ್ ಮಾಡುವಂತೆ ಕಿರುಕುಳ ನೀಡಿದ್ದಕ್ಕೆ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಟಿವಿ9ಗೆ ಮೃತ ಮದಿಯಾ ಚಿಕ್ಕಪ್ಪ ಎಂ.ಡಿ.ಯೂಸುಫ್ ಹೇಳಿಕೆ ನೀಡಿದ್ದಾರೆ. ಸಹಪಾಠಿ ಬಾಲಕಿಗೆ ಚುಡಾಯಿಸಿದ್ದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿವೆ.

19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ: ಇಬ್ಬರ ಬಂಧನ

ತೆಲಂಗಾಣದಿಂದ ಸಂತಪುರಕ್ಕೆ ಬೈಕ್​ನಲ್ಲಿ ಸಾಗಿಸುತ್ತಿದ್ದ 38 ಕೆಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪುರಕ್ಕೆ ಸಾಗಿಸುವಾಗ ಆರೋಪಿಗಳನ್ನು ಬಂಧಿಸಲಾಗಿದ್ದು, 19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮಕ್ಕಳ ಕಳ್ಳರು ಎಂದು ಶಂಕಿಸಿ ಸ್ವಾಮೀಜಿಗಳ ಮೇಲೆ ಹಲ್ಲೆಗೆ ಯತ್ನ

ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಮಕ್ಕಳ ಕಳ್ಳರ ವದಂತಿ ಹಿನ್ನೆಲೆ ಸ್ವಾಮೀಜಿಗಳ ಮೇಲೆ ಹಲ್ಲೆ ಯತ್ನ ನಡೆದ ಘಟನೆ ನಡೆದಿದೆ. ಭಿಕ್ಷಾಟನೆಗಾಗಿ ಗ್ರಾಮಕ್ಕೆ ಬಂದಿದ್ದ ಇಬ್ಬರು ಸ್ವಾಮೀಜಿಗಳನ್ನು ಮಕ್ಕಳ ಕಳ್ಳರು ಎಂದು ಶಂಕಿಸಿದ ಗ್ರಾಮಸ್ಥರು, ಅವರ ಕಾರನ್ನು ಸುತ್ತುವರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ವಾಮೀಜಿಗಳು ಹಾಗೂ ಅವರೊಂದಿಗೆ ಇದ್ದ ಚಾಲಕರ ಮೇಲೆ ಹಲ್ಲೆ ಮಾಡಲು ಗ್ರಾಮಸ್ಥರು ಯತ್ನಿಸಿದ್ದಾರೆ.

ಇದನ್ನೂ ಓದಿ: ಸೆಕೆಯೆಂದು ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು: ಸಾವಲ್ಲೂ ಒಂದಾದ ಆಪ್ತ ಸ್ನೇಹಿತರು

ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಬಳಿಕ ಇಬ್ಬರು ಸ್ವಾಮೀಜಿಗಳನ್ನು ತಮ್ಮ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಮನ್ನಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More