AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗವಂತೆ ದುಂಬಾಲು ಬಿದ್ದ ಮಹಿಳೆ: ಬಿದರ್​ನ ಐಬಿಯಲ್ಲಿ ಯುವಕನ ಶವ ಪತ್ತೆ

ಬೀದರ್‌ನ ಹಬ್ಸಿಕೋಟ್ ಅತಿಥಿಗೃಹದಲ್ಲಿ 30 ವರ್ಷದ ಪರಮೇಶ್ವರ ಎಂಬ ಯುವಕನ ನೇಣುಬಿಗಿದ ಶವ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಪರಮೇಶ್ವರ ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಪಾರ ಮಾಡುತ್ತಿದ್ದರು.

ಮದುವೆಯಾಗವಂತೆ ದುಂಬಾಲು ಬಿದ್ದ ಮಹಿಳೆ: ಬಿದರ್​ನ ಐಬಿಯಲ್ಲಿ ಯುವಕನ ಶವ ಪತ್ತೆ
ಮೃತ ಪರಮೇಶ್ವರ
ಸುರೇಶ ನಾಯಕ
| Updated By: ವಿವೇಕ ಬಿರಾದಾರ|

Updated on: Aug 09, 2025 | 2:49 PM

Share

ಬೀದರ್, ಆಗಸ್ಟ್​ 09: ಬೀದರ್ (Bidar) ನಗರದ ಹಬ್ಸಿಕೋಟ್ ಗೆಸ್ಟ್ ಹೌಸ್​​ನಲ್ಲಿ (IB) ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ‌ ಶವ ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗೋದಿಹಿಪ್ಪರ್ಗಾ ಗ್ರಾಮದ ಯುವಕ ಪರಮೇಶ್ವರ (30) ಮೃತಪಟ್ಟಿದ್ದಾನೆ. ಹಲ್ಲೆ ಮಾಡಿ ನೇಣು ಹಾಕಿದ್ದಾರೆಂದು ಯುವಕನ‌ ಮನೆಯವರು ಆರೋಪ ಮಾಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಬೀದರ್​ನ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಮೇಶ್ವರ ಕಳೆದ ಹಲವು ವರ್ಷದಿಂದ ಬೆಂಗಳೂರಿನಲ್ಲಿ ಖಡಕ್​ ರೊಟ್ಟಿ, ಚೆಟ್ನಿ ಮಾರುವ ವ್ಯಾಪಾರ ಮಾಡಿಕೊಂಡಿದ್ದನು. ಬೆಂಗಳೂರಿನಲ್ಲಿ ಓರ್ವ ‌ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಮಹಿಳೆಗೆ ಈಗಾಗಲೆ ಒಂದು ಮಗು ಇದೆ. ಅಕ್ರಮ ಸಂಬಂಧದಿಂದ ಮಹಿಳೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ.

ಗರ್ಭಿಣಿಯಾಗಿರುವ ವಿಚಾರ ತಿಳಿದು ಮದುವೆ ಮಾಡಿಕೊಳ್ಳುವಂತೆ ಪರಮೇಶ್ವರಗೆ ಮಹಿಳೆ ದುಂಬಾಲು ಬಿದ್ದಿದ್ದಳು. ಮಹಿಳೆಯ ಕಾಟ ತಾಳಲಾರದೆ ಪರಮೇಶ್ವರ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಆಗ, ಮಹಿಳೆ ಬೆಂಗಳೂರಿನಿಂದ ಮಹಿಳಾ ಸಂಘಟನೆಯ ಓರ್ವ ಮಹಿಳೆಯನ್ನು ಕರೆದುಕೊಂಡು ಪರಮೇಶ್ವರನ ಮನೆಗೆ ಹೋಗಿದ್ದಾಳೆ. ಶುಕ್ರವಾರ ಮಹಿಳೆ ಪರಮೇಶ್ವರನ ಮನೆಗೆ ಹೋಗಿ ಗಲಾಟೆ ಮಾಡಿ ಮದುವೆ ಮಾಡಿಕೊಳ್ಳುವಂತೆ ಹಠ ಹಿಡಿದಿದ್ದಳು.

ಇದನ್ನೂ ಓದಿ: ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ: ಆಕ್ರಮ ಸಂಬಂಧಕ್ಕೆ ಒಪ್ಪದಕ್ಕೆ ಕೃತ್ಯ ಶಂಕೆ

ನಂತರ, ಪರಮೇಶ್ವರ ಮತ್ತು ಇತನ ಸ್ನೇಹಿತರು ಹಾಗೂ ಮಹಿಳೆ ಸೇರಿದಂತೆ ನಾಲ್ವರು ಐಬಿಯಲ್ಲಿದ್ದರು. ಆದರೆ, ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಪರಮೇಶ್ವರ ಶವ ಪತ್ತೆಯಾಗಿದೆ. ಪರಮೇಶ್ವರ ಮನೆಯವರು ಬೀದರ್​ನ ಮಾರ್ಕೆಟ್ ಪೊಲೀಸ್ ‌ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ