AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡುಕರ ಅಡ್ಡೆಯಾಗಿ ಮಾರ್ಪಟ್ಟ ಕಾರಂಜಾ ಜಲಾಶಯ: ಇಲ್ಲಿ ಹೇಳೋರಿಲ್ಲ, ಕೇಳೋರೂ ಇಲ್ಲ!

ಬೀದರ್‌ನ ಜೀವನಾಡಿ ಕಾರಂಜಾ ಜಲಾಶಯವು ಅಧಿಕಾರಿಗಳ ನಿರ್ಲಕ್ಷ್ಯದಿಂದ ಕುಡುಕರ ಅಡ್ಡೆಯಾಗಿ ಮಾರ್ಪಟ್ಟಿದೆ. 8 ಜನ ಭದ್ರತಾ ಸಿಬ್ಬಂದಿಯಿದ್ದರೂ ಸೂಕ್ತ ಕಾವಲಿಲ್ಲದೆ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಸಂಬಂಧಿತ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರೂ ಅವರು ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬುದು ಸ್ಥಳೀಯರ ಅಳಲು.

ಕುಡುಕರ ಅಡ್ಡೆಯಾಗಿ ಮಾರ್ಪಟ್ಟ ಕಾರಂಜಾ ಜಲಾಶಯ: ಇಲ್ಲಿ ಹೇಳೋರಿಲ್ಲ, ಕೇಳೋರೂ ಇಲ್ಲ!
ಕಾರಂಜಾ ಜಲಾಶಯ
ಸುರೇಶ್ ನಾಯಕ್
| Edited By: |

Updated on:Aug 27, 2026 | 7:11 PM

Share

ಮುಖ್ಯಾಂಶಗಳು

  • ಕುಡುಕರ ಅಡ್ಡೆಯಾಗಿ ಮಾರ್ಪಟ್ಟ ಕಾರಂಜಾ ಜಲಾಶಯ
  • ಭಾಲ್ಕಿ ತಾಲೂಕಿ ಬ್ಯಾಲಹಳ್ಳಿ ಗ್ರಾಮದ ಬಳಿಯ ಜಲಾಶಯ
  • ಡ್ಯಾಂ ಬಳಿಗೆ ಯಾರೂ ಹೇಳೋರಿಲ್ಲ, ಕೇಳೋರೂ ಇಲ್ಲ!

ಬೀದರ್​​, ಆಗಸ್ಟ್​​ 27: ಬೀದರ್ (Bidar)​​ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ (Karanja Dam) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಡ್ಯಾಂಗೆ ಯಾರು ಬೇಕಾದರೂ ಹೋಗಬಹುದು, ಏನು ಬೇಕಾದರೂ ಮಾಡಬಹುದು ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೀದರ್​​ ಜಿಲ್ಲೆ ಭಾಲ್ಕಿ ತಾಲೂಕಿ ಬ್ಯಾಲಹಳ್ಳಿ ಗ್ರಾಮದ ಬಳಿಯ ಜಲಾಶಯಕ್ಕೆ ಅಭದ್ರತೆ ಕಾಡುತ್ತಿದ್ದು, ಇದರ ಜವಾಬ್ದಾರಿ ಹೊರಬೇಕಿದ್ದ ನೀರಾವರಿ ಇಲಾಖೆ ಅಧಿಕಾರಿಗಳು ಎಲ್ಲವನ್ನೂ ಕಂಡೂ ಕಾಣದಂತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಕೆಲಸಕ್ಕೇ ಬಾರದ ಭದ್ರತಾ ಸಿಬ್ಬಂದಿ!

Karanja Dam

ಬಟ್ಟೆ ತೊಳೆದಿರುವುದು

ಡ್ಯಾಂ ಭದ್ರತೆಗೆಂದು 8 ಜನ ಸಿಬ್ಬಂದಿ ಇದ್ದರೂ ಅವರ್ಯಾರೂ ಕೆಲಸಕ್ಕೇ ಬರುತ್ತಿಲ್ಲ. ತಮ್ಮ ಕರ್ತ್ಯವ್ಯ ನಿರ್ವಹಿಸಿದೆಯೇ ಸಂಬಳ ಪಡೆಯುತ್ತಿದ್ದಾರೆ. ಹೀಗಾಗಿ ಯಾರು ಬೇಕಾದರೂ ಡ್ಯಾಂ ಪರಿಸರಕ್ಕೆ ಹೋಗಿ ಬರಬಹುದು. ಅವರನ್ನು ಕೇಳುವವರು ಅಲ್ಲಿ ಯಾರೂ ಇಲ್ಲ. ರಾತ್ರಿಯಾದರೆ ಸಾಕು ಪುಂಡಪೋಕರಿಗಳು ಡ್ಯಾಂನೊಳಗೆ ಹೋಗಿ ಮದ್ಯದ ಪಾರ್ಟಿ ಮಾಡೋದಲ್ಲದೆ ಅಲ್ಲೇ ಮಲಗಿ ಬೆಳಿಗ್ಗೆ ಹಿಂದಿರುಗುತ್ತಿದ್ದಾರೆ. ಸಾಲದ್ದಕ್ಕೆ ಡ್ಯಾಂನ ಅಕ್ಕಪಕ್ಕದಲ್ಲಿರುವ ಗ್ರಾಮಸ್ಥರು ನೀರಿಗೆ ಇಳಿದು ಬಟ್ಟೆ ತೊಳೆಯುವುದು, ಸ್ನಾನ ಮಾಡುವುದು ಮಾಡುತ್ತಿದ್ದಾರೆ.

ಇದನ್ನೂ ಓದಿ: ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ 3.14 ಕೋಟಿ ರೂ. ವೆಚ್ಚದ ಕಟ್ಟಡ

ದೂರುಗಳಿಗೆ ಅಧಿಕಾರಿಗಳು ಡೋಂಟ್​​ಕೇರ್​​!

ಬೀದರ್, ಭಾಲ್ಕಿ, ಹುಮ್ನಾಬಾದ್, ಚಿಟಗುಪ್ಪಾ ಹಾಗೂ ಔರಾದ್ ಪಟ್ಟಣಗಳು ಕುಡಿಯುವ ನೀರಿಗಾಗಿ 7.691 ಟಿಎಂಸಿ ಸಾಮರ್ಥದ ಇದೇ ಡ್ಯಾಂನ ನಂಬಿಕೊಂಡಿದ್ದಾರೆ. ಸುಮಾರು ಐದು ದಶಕದ ಹಿಂದೆ ಬೃಹತ್ ನೀರಾವರಿ ಉದ್ದೇಶದಿಂದ ನಿರ್ಮಾಣವಾಗಿರುವ ಈ ಜಲಾಶಯ, ಕುಡಿಯುವ ನೀರಿನ ಜೊತೆಗೆ 30 ಸಾವಿರಕ್ಕೂ ಹೆಚ್ಚು ಹೆಕ್ಟರ್ ಪ್ರದೇಶಕ್ಕೆ ನೀರಾವರಿ ಕಲ್ಪಿಸುತ್ತೆ. ಹೀಗಾಗಿ ಇಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಸಂಬಂಧಿತ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರೂ ಅವರು ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬುದು ಸ್ಥಳೀಯರ ಅಳಲು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:31 pm, Thu, 27 August 26

Follow Us
ಸುರೇಶ್ ನಾಯಕ್
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ವೀಕೆಂಡ್ ಎಪಿಸೋಡ್​ನಲ್ಲಿ ಮತ್ತಿಬ್ಬರು ಹೊರ ಹೋಗ್ತಾರೆ; ಬಿಗ್ ಬಾಸ್ ಸೂಚನೆ
ವೀಕೆಂಡ್ ಎಪಿಸೋಡ್​ನಲ್ಲಿ ಮತ್ತಿಬ್ಬರು ಹೊರ ಹೋಗ್ತಾರೆ; ಬಿಗ್ ಬಾಸ್ ಸೂಚನೆ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ