Bidar News: ಚಿಟಗುಪ್ಪದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಬೀದರ್​ ಜಿಲ್ಲೆಯಲ್ಲಿ ನವಜಾತ ಶಿಶುಗಳ ಶವಗಳು ಪತ್ತೆಯಾಗುತ್ತಿವೆ. ನಿನ್ನೆ ಹುಲಸೂರ ತಾಲೂಕಿನ ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿತ್ತು. ಇಂದು ಚಿಟಗುಪ್ಪ ತಾಲೂಕಿನ ಚರಂಡಿ ಪಕ್ಕದಲ್ಲೆ ಪತ್ತೆಯಾಗಿದೆ.

Bidar News: ಚಿಟಗುಪ್ಪದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ
ಬೀದರ್​ ಜಿಲ್ಲೆಯಲ್ಲಿ ಎರಡು ನವಜಾತ ಶಿಶುಗಳ ಮೃತದೇಹಗಳು ಪತ್ತೆ (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Jul 25, 2023 | 7:38 PM

ಬೀದರ್, ಜುಲೈ 25: ಜಿಲ್ಲೆಯ ಚಿಟಗುಪ್ಪ ತಾಲೂಕಿನಲ್ಲಿ ಇಂದು (ಜುಲೈ 25) ಚರಂಡಿ ಪಕ್ಕದಲ್ಲಿ ನವಜಾತು ಶಿಶುವಿನ (Newborn Baby) ಶವ ಪತ್ತೆಯಾಗಿದೆ. ಹುಲಸೂರ ತಾಲೂಕಿನಲ್ಲಿ ನಿನ್ನೆಯಷ್ಟೇ ಹೆಣ್ಣು ಶಿಶುವಿನ ಭ್ರೂಣ ಪತ್ತೆಯಾಗಿತ್ತು.

ಚಿಟಗುಪ್ಪ ತಾಲೂಕಿನ ಸಿಂಧನಕೇರಾ ಗ್ರಾಮದ ಬಸವೇಶ್ವರ ವೃತ್ತದ ಬಳಿ ಇರುವ ಚರಂಡಿ ಪಕ್ಕದಲ್ಲಿ ಪತ್ತೆಯಾಗಿದೆ. ಇದನ್ನು ನೋಡಿದ ಸ್ಥಳೀಯರು ಚಿಟಗುಪ್ಪ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Chitradurga News: 13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ; ಜಿಲ್ಲಾಸ್ಪತ್ರೆಗೆ ದಾಖಲು

ಜಿಲ್ಲೆಯ ಹುಲಸೂರ ತಾಲೂಕಿನ ಗುತ್ತಿ ಗ್ರಾಮದ ರಸ್ತೆಯೊಂದರ ಪಕ್ಕದಲ್ಲಿ ಹೆಣ್ಣು ಮಗುವಿನ ಭ್ರೂಣ ಹತ್ಯೆ ಮಾಡಿ ಎಸೆಯಲಾಗಿತ್ತು. ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗು ಹೆಣ್ಣು ಮಗು ಎಂದು ತಿಳಿದು ಭ್ರೂಣ ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಹುಲಸೂರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us