AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಮಾನಗಳೇ ಕಳೆದರೂ ಗುಪ್ತಲಿಂಗ ಬೆಟ್ಟದಲ್ಲಿ ನೀರಿನ ಝರಿ ಬತ್ತಿಲ್ಲ- ಈ ನೀರು ಅನೇಕ ರೋಗಗಳಿಗೆ ರಾಮಬಾಣ

Panacea for many diseases: ಗುಹೆಯಲ್ಲಿರುವ ಶಿವಲಿಂಗದ ಮೂಲಕವೂ ನೀರು ಹರಿದು ಬರುವುದು ಇಲ್ಲಿನ ವಿಶೇಷವಾಗಿದೆ. ಇಲ್ಲಿನ ನೀರಿನ ಝರಿ ದಿನದ 24 ಗಂಟೆಯೂ ನೀರು ಧುಮ್ಮಿಕ್ಕುತ್ತದೆ. ಇಲ್ಲಿ ಬೆಟ್ಟದ ಅಂಚಿನಿಂದ ಬರುವ ನೀರು ನಂದಿ ಬಾಯಿಯಿಂದ ಕಿರು ಕಲ್ಯಾಣಿಗೆ ಬಂದು ಬೀಳುತ್ತದೆ. ನೀರಿನ ಹರಿವು ಸದಾ ಒಂದೇ ಸಮನಾಗಿರುತ್ತದೆ.

ಶತಮಾನಗಳೇ ಕಳೆದರೂ ಗುಪ್ತಲಿಂಗ ಬೆಟ್ಟದಲ್ಲಿ ನೀರಿನ ಝರಿ ಬತ್ತಿಲ್ಲ- ಈ ನೀರು ಅನೇಕ ರೋಗಗಳಿಗೆ ರಾಮಬಾಣ
ಶತಮಾನಗಳಷ್ಟು ಪುರಾತನವಾಗಿದ್ದರೂ ಗುಪ್ತಲಿಂಗ ಬೆಟ್ಟದಲ್ಲಿ ನೀರಿನ ಝರಿ ನಿಂತಿಲ್ಲ
ಸುರೇಶ ನಾಯಕ
| Edited By: |

Updated on: Feb 19, 2024 | 12:51 PM

Share

ಬೇಸಿಗೆ ಬಂದರೆ ಸಾಕು ಆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವಾಡುತ್ತದೆ. ಬಾವಿ, ಬೋರ್ ವೆಲ್ ನಲ್ಲಿಯೂ ನೀರು ಖಾಲಿಯಾಗಿ ಜನ ಪ್ರಾಣಿ ಪಕ್ಷಿಗಳು ನೀರಿಗಾಗಿ ಹಾಹಾಕಾರ ಪಡುತ್ತವೆ. ಆದರೆ ಆ ದೇವಸ್ಥಾನದಲ್ಲಿ ಶತಮಾನಗಳಿಂದಲೂ ನೀರು (Drinking water) ಬರುವುದು ನಿಂತಿಲ್ಲ… ಈ ನೀರಿಗೆ ಔಷಧಿಯ ಗುಣವಿದ್ದು ನೀರಿನಲ್ಲಿ ಸ್ನಾನ ಮಾಡಿದರೆ ಚರ್ಮ ರೋಗ ವಾಸಿಯಾಗುತ್ತದೆಂಬ (panacea for many diseases) ಭಾವನೆ ಭಕ್ತರಲ್ಲಿದೆ. ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದ (Khanapur, Bhalki) ಬಳಿಯ ಬೆಟ್ಟದಲ್ಲಿ ಸುಕ್ಷೇತ್ರ ಗಾಯಮುಖ ಗುಪ್ತಲಿಂಗೇಶ್ವರ ದೇವಾಲಯವಿದೆ. ಈ ದೇವಾಲಯ ಐದಾರು ಶತಮಾನದಷ್ಟು ಪುರಾತನವಾಗಿದ್ದು ಈ ಗುಪ್ತಲಿಂಗವಿರುವ ಬೆಟ್ಟ ಹಲವಾರು ವಿಸ್ಮಯಗಳನ್ನೊಳಗೊಂಡಿದೆ. ಪಕ್ಕದ ಆಂಧ್ರ, ತೆಲಂಗಾಣ ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಇಲ್ಲಿಗೆ ಭಕ್ತರು ಬರುತ್ತಾರೆ. ಅಮಾವಾಸ್ಯೆ ಹಾಗೂ ಹುಣ್ಣಿಯಂದು ಭಾರೀ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬಂದು ದೇವರ ದರ್ಶನ ಪಡೆದು ಹೋಗುತ್ತಾರೆ.

ಇಂತಹ ಗುಪ್ತಲಿಂಗ ದೇವಸ್ಥಾನದ ಸುತ್ತಮುತ್ತ ಬಹಳಷ್ಟು ಪ್ರಮಾಣದಲ್ಲಿ ಅರಣ್ಯ ಪ್ರದೇಶವಿದ್ದು ದೇವಸ್ಥಾನದಲ್ಲಿ ನೀರಿನ ಝರಿ ಇದುವರೆಗೂ ಬತ್ತಿರುವ ಉದಾಹರಣೆಯೇ ಇಲ್ಲ. ಇಲ್ಲಿಗೆ ಬರುವ ಭಕ್ತರು ಈ ನೀರಿನಲ್ಲಿ ಸ್ನಾನ ಮಾಡುತ್ತಾರೆ. ಜೊತೆಗೆ ನೀರನ್ನ ಔಷಧಿ ರೂಪದಲ್ಲಿಯೂ ಪ್ರತಿನಿತ್ಯ ಕುಡಿಯುವುದರಿಂದ ನಮ್ಮ ದೇಹದಲ್ಲಿರುವ ಖಾಲಿಗಳು ವಾಸಿಯಾಗುತ್ತದೆ. ಜೊತೆಗೆ ಇಲ್ಲಿನ ನೀರು ಚರ್ಮರೋಗದ ನಿವಾರಣೆಗೆ ಈ ನೀರು ರಾಮಬಾಣದಂತೆ ಕೆಲಸ ಮಾಡುತ್ತದೆ. ಇಲ್ಲಿನ ನೀರನ್ನು ಕುಡಿದರೆ ಮತ್ತು ಸ್ನಾನ ಮಾಡಿದರೆ ರೋಗ ವಾಸಿಯಾಗುತ್ತದೆ ಎಂದು ಭಕ್ತರು ನಂಬಿದ್ದಾರೆ. ಇಲ್ಲಿಗೆ ಬಂದು ಭಕ್ತಿಯಿಂದ ದೇವರಲ್ಲಿ ಪ್ರಾರ್ಥನೆ ಮಾಡಿದರೆ ಎಲ್ಲವೂ ಒಳ್ಳೆಯದೆ ಆಗುತ್ತದೆಂಬ ಭಾವನೆ ಇಲ್ಲಿನ ಭಕ್ತರಲ್ಲಿ ಮನೆ ಮಾಡಿದೆ.

ಗುಹೆಯಲ್ಲಿರುವ ಶಿವಲಿಂಗದ ಮೂಲಕವೂ ನೀರು ಹರಿದು ಬರುವುದು ಇಲ್ಲಿನ ವಿಶೇಷವಾಗಿದೆ. ಇಲ್ಲಿನ ನೀರಿನ ಝರಿ ದಿನದ 24 ಗಂಟೆಯೂ ನೀರು ಧುಮ್ಮಿಕ್ಕುತ್ತದೆ. ಇಲ್ಲಿ ಬೆಟ್ಟದ ಅಂಚಿನಿಂದ ಬರುವ ನೀರು ನಂದಿ ಬಾಯಿಯಿಂದ ಕಿರು ಕಲ್ಯಾಣಿಗೆ ಬಂದು ಬೀಳುತ್ತದೆ. ನೀರಿನ ಹರಿವು ಸದಾ ಒಂದೇ ಸಮನಾಗಿರುತ್ತದೆ. ಶುದ್ಧ ಕುಡಿಯುವ ನೀರಿನ ಘಟಕಗಳು ಇರದ ಕಾಲದಲ್ಲಿ ಹೆಚ್ಚಿನವರು ವಾಹನಗಳಲ್ಲಿ ಸುತ್ತಮುತ್ತಲಿನ ಗ್ರಾಮದ ಜನರು ಇಲ್ಲಿಗೆ ಬಂದು ನೀರು ತುಂಬಿಕೊಂಡು ಹೋಗುತ್ತಿದ್ದರು ಎಂದು ಇಂದಿನ ಕಾಲದ ಹಿರಿಯರು ಹೇಳುತ್ತಾರೆ.

ಆದರೀಗ ಮನೆ ಮನೆಗೆ ನೀರು ಬರುತ್ತಿರುವುದರಿಂದ ದೇವಸ್ಥಾನದಿಂದ ನೀರು ತೆಗೆದುಕೊಂಡು ಹೋಗುವುದು ಈಗ ನಿಂತಿದೆ. ದೇವಸ್ಥಾನಕ್ಕೆ ಬರುವವರು, ಇಲ್ಲಿಂದ ನೀರು ತೆಗೆದುಕೊಂಡು ಹೋಗುತ್ತಾರೆ. ಪ್ರಾಣಿ–ಪಕ್ಷಿಗಳ ನೀರಿನ ದಾಹ ಕೂಡ ಈ ಸ್ಥಳ ತಣಿಸುತ್ತಿದೆ. ಇನ್ನೂ ಬೆಸಿಗೆ, ಮಳೆಗಾಲ, ಚಳಿಗಾಲ ಯಾವುದೆ ಋತುವಿನಲ್ಲಿಯೂ ಇಲ್ಲಿಗೆ ಬಂದರೆ ಸಾಕು ಇಲ್ಲಿ ನೀರು ನಿರಂತರವಾಗಿ ಹರಯುತ್ತಲೇ ಇದೆ ಹೀಗಾಗಿ ಈ ದೇವಾಲಯ ಭಕ್ತರನ್ನ ಸೆಳೆಯುತ್ತಿದೆ.

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಗುಪ್ತಲಿಂಗನ ದರ್ಶನ ಪಡೆಯಲು ಪ್ರತಿವರ್ಷ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇಲ್ಲಿನ ಐತಿಹಾಸಿಕ ದೇಸ್ಥಾನದ ನೀರು ಇಲ್ಲಿನ ಭಕ್ತರನ್ನ ಸೆಳೆಯುತ್ತಿರುವುದರ ಜೊತೆಗೆ ಭಕ್ತರ ಅನೇಕ ರೋಗಗಳನ್ನ ರಾಮಬಾಣದಂತೆ ಕೆಲಸ ಮಾಡುತ್ತಿದೆ ಎಂದು ಇಲ್ಲಿಗೆ ಬರುವ ಭಕ್ತರು ಹೇಳುತ್ತಾರೆ. ಆದರೆ ಈ ದೇವಸ್ಥಾನ ಇಲ್ಲಿದೆ ಅನ್ನೋದು ಅದೆಷ್ಟೋ ಭಕ್ತರಿಗೆ ಗೊತ್ತಿಲ್ಲ.

ಇದನ್ನೂ ಓದಿ: ಕಾಡಿನಲ್ಲೂ ಮೇವಿಲ್ಲ, ಹೈನುಗಾರಿಕೆಯನ್ನೇ ಅವಲಂಬಿಸಿರುವ 18 ಗೌಳಿ ಗ್ರಾಮಗಳ ನೂರಾರು ಕುಟುಂಬಗಳು ಸಂಕಷ್ಟದಲ್ಲಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!