AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರ ಬಂಧನ

ರಾಜಕೀಯ ಸ್ವರೂಪ ಪಡೆದುಕೊಂಡಿರುವ ಬೀದರ್​ನ ಯುವ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು (ಜನವರಿ 10) ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿದಂತೆ ಒಟ್ಟು ಐವರನ್ನು ಬಂಧಿಸಿದ್ದಾರೆ. ಡೆತ್​ನೋಟ್​ನಲ್ಲಿ ಉಲ್ಲೇಖವಾಗಿದ್ದ 8 ಜನರ ಪೈಕಿ ಇದೀಗ ಸಿಐಡಿ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರ ಬಂಧನ
ಸಚಿನ್, ರಾಜು ಕಪನೂರು
ಸುರೇಶ್ ನಾಯಕ್
| Edited By: |

Updated on: Jan 10, 2025 | 6:28 PM

Share

ಬೀದರ್, (ಜನವರಿ 10): ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಸಿಐಡಿ ಐವರನ್ನು ಬಂಧಿಸಿದೆ. ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್ , ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಒಟ್ಟು 8 ಜನರ ಹೆಸರನ್ನು ಉಲ್ಲೇಖಿಸಿದ್ದರು. ಈ ಸಂಬಂಧ ಇಂದು (ಜನವರಿ 10) ಸಿಐಡಿ ಅಧಿಕಾರಗಳು ಬೀದರ್​ನಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜು ಕಪನೂರು, ಘೊರಕ್ ನಾಥ್, ನಂದಕುಮಾರ್ ನಾಗಬುಜಂಗಿ, ರಾಮನಗೌಡಾ ಪಾಟೀಲ್, ಸತೀಶ್ ಎನ್ನುವರನ್ನು ಬಂಧಿಸಲಾಗಿದೆ.

ಪ್ರಕರಣ ಸಂಬಂಧ ತನಿಖೆಗಾಗಿ ಬೀದರ್​ ಬಂದಿರುವ ಸಿಐಡಿ ಅಧಿಕಾರಿಗಳು, ಡೆತ್​ನೋಟ್​ನಲ್ಲಿ ಉಲ್ಲೇಖವಾಗಿದ್ದ ಹೆಸರಿನವರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿತ್ತು. ಅದರಂತೆ ಐವರು ಇಂದು ಬೀದರ್​ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಆದ್ರೆ, ವಿಚಾರಣೆಯಲ್ಲಿ ಸೂಕ್ತವಾದ ಉತ್ತರ ಬಾರದ ಹಿನ್ನೆಲೆಯಲ್ಲಿ ಸಿಐಡಿ, ಆರೋಪಿಗಳನ್ನು ಬಂಧಿಸಿದೆ.

ಇದನ್ನೂ ಓದಿ: ಬೀದರ್​ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಇಬ್ಬರು ಪೊಲೀಸರ ತಲೆದಂಡ

ಇನ್ನು ಬಂಧಿತರನ್ನು ಬೀದರ್​ ಜೆಎಂಎಫ್​ಸಿ ಕೋರ್ಟ್​​ ಜಡ್ಜ್​ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ. ಬೀದರ್ ನಗರದ ಜನವಾಡಾ ರಸ್ತೆಯ ಬಳಿ ಇರುವ ಜಡ್ಜ್ ರಾಮಮೂರ್ತಿ ಮನೆಗೆ ಕರೆದುಕೊಂಡು ಹೋಗಲಿದ್ದು, ಇನ್ನಷ್ಟು ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡುವ ಸಾಧ್ಯತೆಗಳು ಹೆಚ್ಚಿವೆ.

7 ಪುಟಗಳ ಡೆತ್​ನೋಟ್​ ಬರೆದಿಟ್ಟು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಗುತ್ತಿಗೆದಾರ ಸಚಿನ್(26) ಡಿಸೆಂಬರ್ 26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದ. 15 ಲಕ್ಷಕ್ಕೂ ಹೆಚ್ಚು ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಜೊತೆಗೆ 1 ಕೋಟಿ ರೂ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಡೆತ್​ನೋಟ್​ನಲ್ಲಿ ಗಂಭೀರ ಆರೋಪ ಮಾಡಿದ್ದ. ಹೀಗಾಗಿ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ. ಇನ್ನು ಈ ಪ್ರಕರಣ ಸಂಬಂಧ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರುತ್ತಿದ್ದಂತೆಯೇ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದ್ದು, ಇದೀಗ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಸುರೇಶ್ ನಾಯಕ್
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್