Prajadwani Samavesha: ಇಂದಿನಿಂದ ಬೀದರ್​ನಲ್ಲಿ ಕಾಂಗ್ರೆಸ್​ ಪ್ರಜಾಧ್ವನಿ ಸಮಾವೇಶ, ಸಿದ್ದರಾಮಯ್ಯರಿಂದ ಚಾಲನೆ

| Updated By: ಆಯೇಷಾ ಬಾನು

Updated on: Feb 03, 2023 | 7:45 AM

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಪ್ರಜಾಧ್ವನಿ ಕಾರ್ಯಕ್ರಮವನ್ನ ಬೀದರ್ ಜಿಲ್ಲೆಯ ಆರು ವಿಧಾನ ‌ಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದೆ.

Prajadwani Samavesha: ಇಂದಿನಿಂದ ಬೀದರ್​ನಲ್ಲಿ ಕಾಂಗ್ರೆಸ್​ ಪ್ರಜಾಧ್ವನಿ ಸಮಾವೇಶ, ಸಿದ್ದರಾಮಯ್ಯರಿಂದ ಚಾಲನೆ
ಸಿದ್ದರಾಮಯ್ಯ
Follow us on

ಬೀದರ್: ಬೀದರ್​​ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ಕಾಂಗ್ರೆಸ್​ ಪ್ರಜಾಧ್ವನಿ ಸಮಾವೇಶ(Congress Prajadwani Samavesha) ನಡೆಯಲಿದೆ. ಹೀಗಾಗಿ ಬೀದರ್ ಗಣೇಶ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ(Siddaramaiah) ನೇತೃತ್ವದಲ್ಲಿ ಪ್ರಜಾಧ್ವನಿ ಕಾರ್ಯಕ್ರಮವನ್ನ ಬೀದರ್ ಜಿಲ್ಲೆಯ ಆರು ವಿಧಾನ ‌ಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದೆ.

ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ‌ ಇಂದು ಮುಂಜಾನೆ 11:30ಕ್ಕೆ ಬಸವಕಲ್ಯಾಣಕ್ಕೆ ಸಿದ್ದರಾಮಯ್ಯ ಆಗಮಿಸಿ ಮೊದಲು ಅನುಭವ ಮಂಟಪಕ್ಕೆ ಭೇಟಿ ನೀಡಿ ನಂತರ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರಜಾಧ್ವನಿ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಸವಕಲ್ಯಾಣ ಕಾರ್ಯಕ್ರಮ ಮುಗಿದ ನಂತರ ಬಸವಕಲ್ಯಾಣದಿಂದ ರಸ್ತೆ ಮೂಲಕ ಭಾಲ್ಕಿ ಪಟ್ಟಣಕ್ಕೆ ಆಗಮಿಸಲಿರುವ ಸಿದ್ಧರಾಮಯ್ಯನವರು ಭೀಮಣ್ಣ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯುವ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ನಂತರ ಭಾಲ್ಕಿ ಪಟ್ಟಣದಲ್ಕಿಯೇ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ಓದಿ: ಜೀವನದ ಜತೆಗಿತ್ತು, ಈಗ ಅದಾನಿ ಜತೆಗಿದೆ; ಎಲ್ಐಸಿಯ ಘೋಷಣೆಯನ್ನು ಬದಲಿಸುವ ಸಮಯ ಬಂದಿದೆ: ಕಾಂಗ್ರೆಸ್

ಫೆಬ್ರವರಿ 04ರಂದು ಮುಂಜಾನೆ 11 ಗಂಟೆಗೆ ಔರಾದ್ ಪಟ್ಟಣದಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ಭಾಗಿಯಾಗಲಿರುವ ಸಿದ್ದರಾಮಯ್ಯ ಮಧ್ಯಾಹ್ನ 3 ಗಂಟೆಗೆ ಬೀದರ್ ಪಟ್ಟಣದ ಗಣೇಶ ಮೈದಾನದಲ್ಲಿ ಬೃಹತ್ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೀದರ್ ಉತ್ತರ- ದಕ್ಷಿಣ ವಿಧಾನ ಸಭಾ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6 ಗಂಟೆಗೆ ಹುಮ್ನಾಬಾದ್ ಪಟ್ಟಣದಲ್ಲಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ‌ಸಿದ್ದರಾಮಯ್ಯ ಭಾಗಿಯಾಗಿ ಹುಮ್ನಾಬಾದ್ ‌ನಿಂದಾ ರಾತ್ರಿ ಕಲ್ಬುರ್ಗಿಗೆ ಪ್ರಯಾಣ ಮಾಡಿ ಕಲ್ಬುರ್ಗಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಪೆಬ್ರವರಿ 3 ರಿಂದ 16 ರವರಗೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರಜಾಧ್ವನಿ ಯಾತ್ರೆ

ಇನ್ನು ಇಂದು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಮಧ್ಯಾಹ್ನ 12ಕ್ಕೆ ಪ್ರಜಾಧ್ವನಿ ಯಾತ್ರೆಗೆ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಬಳಿಕ ಬೀದರ್​​, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಸಾಗಲಿದೆ. ಪ್ರತಿದಿನ 2-3 ಕ್ಷೇತ್ರಗಳಲ್ಲಿ ಸಮಾವೇಶ ನಡೆಯಲಿದೆ. ಹಾಗೂ ಪ್ರತಿ ದಿನ ಎರಡರಿಂದ ಮೂರು ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಸಾರ್ವಜನಿಕ ಸಭೆ ಆಯೋಜನೆ ಮಾಡಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳ ಮೇಲೆ ಕಾಂಗ್ರೆಸ್ ಕಣ್ಣೀಟ್ಟಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಲೆಕ್ಕಾಚಾರ ಹಾಕಿಕೊಂಡಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ