ಬೀದರ್: ಹಳ್ಳ ದಾಟುವಾಗ ಕೊಚ್ಚಿಕೊಂಡು ಹೋಗಿದ್ದ ಒಂದೇ ಕುಟುಂಬದ ಮೂವರ ಶವ ಪತ್ತೆ

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಸಂಗಪ್ಪಾ ಲದ್ದೆ ಕುಟುಂಬದ ಮೂವರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದರು.

ಬೀದರ್: ಹಳ್ಳ ದಾಟುವಾಗ ಕೊಚ್ಚಿಕೊಂಡು ಹೋಗಿದ್ದ ಒಂದೇ ಕುಟುಂಬದ ಮೂವರ ಶವ ಪತ್ತೆ
ಹಳ್ಳ
Follow us
TV9 Web
| Updated By: ಆಯೇಷಾ ಬಾನು

Updated on:May 01, 2023 | 9:49 AM

ಬೀದರ್: ಹಳ್ಳ ದಾಟುವಾಗ ಒಂದೇ ಕುಟುಂಬದ ಮೂವರು ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿ ಸುನಂದಾ(48), ಐಶ್ವರ್ಯ(16), ಸುಮೀತ್‌(10) ಶವಗಳು ಪತ್ತೆಯಾಗಿವೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಸಂಗಪ್ಪಾ ಲದ್ದೆ ಕುಟುಂಬದ ಮೂವರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಸಂಗಪ್ಪ ಲದ್ದೆ ಅವರ ಹೆಂಡತಿ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ನಾಲ್ವರು ಒಟ್ಟಿಗೆ ಹೋಗುವಾಗ ಹಳ್ಳದ ನೀರು ಏಕಾಏಕಿ ಹೆಚ್ಚಾಗಿದೆ. ಈ ವೇಳೆ ಮೂವರು ಕೊಚ್ಚಿಕೊಂಡು ಹೋಗಿದ್ದು ಸಂಗಪ್ಪ ಲದ್ದೆ ಬಚಾವ್ ಆಗಿದ್ದರು.

ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ

ಬೆಂಗಳೂರು ಯಲಹಂಕ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಗೆ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಬ್ರೇಕ್ ಫೇಲ್ ಆದ ಕಾರಣ ಚಾಲಕ ಕೆಲವು ವಾಹನಗಳಿಗೆ ಗುದ್ದಿ ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಲಾರಿ ನಿಲ್ಲಿಸಿದ್ದಾನೆ. ಇನ್ನು ಲಾರಿ ಗುದ್ದಿದ ರಭಸಕ್ಕೆ ಮರ ಧರೆಗುರುಳಿದೆ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: ನಾಲ್ವರಿಗೆ ಗಾಯ

ಮರದ ದಿಮ್ಮಿಗಳನ್ನ ಸಾಗಾಟ ಮಾಡುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿದ್ದು ಐದಾರು ಕಾರು ಹಾಗೂ ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ. ನಂತರ ಯಲಹಂಕದ ಗ್ಯಾಲರಿಯಾ ಮಾಲ್ ಮುಂಭಾಗದ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಸಣ್ಣ ಪುಟ್ಟ ಗಾಯಗಳೊಂದಿಗೆ ಚಾಲಕರು ಪಾರಾಗಿದ್ದಾರೆ. ಘಟನೆಯಲ್ಲಿ ಸುಮಾರು ಐದು ಕಾರುಗಳು ಜಖಂ ಆಗಿವೆ. ಸದ್ಯ ಮರದ ದಿಮ್ಮಿಗಳನ್ನ ಬೇರೊಂದು ಲಾರಿಗೆ ಶಿಫ್ಟ್ ಮಾಡಲಾಗಿದೆ. ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ 1 ಕೋಟಿ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ಯುವಕರಿಗೆ ಗಾಂಜಾ ಮಾರುತ್ತಿದ್ದ ಡ್ರಗ್ ಪೆಡ್ಲರ್​ ತನ್ವೀರ್ ಎಂಬಾತನನ್ನು ಡಿ.ಜೆ.ಹಳ್ಳಿ ಪೊಲೀಸರು ಬಂಧಿಸಿದ್ದು 1 ಕೋಟಿ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:49 am, Mon, 1 May 23

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ