ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ

ಕ್ರಾಪ್ ಸರ್ವೆ ಆ್ಯಪ್​ ಮೂಲಕ ಬೆಳೆ ನೋಂದಣಿ ಮಾಡುವ‌ ವಿಧಾನ, ಬೆಳೆಗಳ ಫೋಟೊ ಅಪಲೋಡ್ ಮಾಡುವ ವಿಧಾನ ಸೇರಿದಂತೆ ಹಲವು ಮಾಹಿತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡರು. ತಹಸೀಲ್ದಾರರು ಬೆಳೆ ಸಮೀಕ್ಷೆ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ಸೂಚನೆ ನೀಡಿದರು

ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ
ಜಿಲ್ಲಾಧಿಕಾರಿಗಳಿಂದ ಬೆಳೆ ಸಮೀಕ್ಷೆ
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 21, 2021 | 7:37 PM

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಜಿಲ್ಲೆಯ ವಿವಿಧ ಭಾಗಕ್ಕೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮಾಡಿದ್ದು, ಬೆಳೆಯ ಸಾಧಕ ಬಾಧಕದ ಬಗ್ಗೆ ರೈತರಿಂದ ಮಾಹಿತಿ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಬಸವಕಲ್ಯಾಣ ತಾಲೂಕಿನ ಪರತಾಪುರ ಗ್ರಾಮದ ರೈತ ಕರಣ್ ಅವರ ಜಮೀನಿಗೆ ಭೇಟಿ ನೀಡಿ, ಬೆಳೆ ಸಮೀಕ್ಷೆಯ ಬಗ್ಗೆ ಮಾಹಿತಿ ಪಡೆದರು.

ರೈತ ಕರಣ್ ಅವರು ಅಂದಾಜು 5 ಎಕರೆ ಜಮೀನಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆಸಿದ ಬೆಳೆಗಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ, ಈ ಬೆಳೆ ಸಮೀಕ್ಷೆ ಪ್ರಕ್ರಿಯೆಗೆ ತಮ್ಮ ಜೊತೆಗೆ ಗ್ರಾಮಕ್ಕೆ ಬಂದಿದ್ದ ಲೆಕ್ಕಾಧಿಕಾರಿಗಳೊಂದಿಗೆ ಚರ್ಚಿಸಿದರು. ಕ್ರಾಪ್ ಸರ್ವೆ ಆ್ಯಪ್​ ಮೂಲಕ ಬೆಳೆ ನೋಂದಣಿ ಮಾಡುವ‌ ವಿಧಾನ, ಬೆಳೆಗಳ ಫೋಟೊ ಅಪಲೋಡ್ ಮಾಡುವ ವಿಧಾನ ಸೇರಿದಂತೆ ಹಲವು ಮಾಹಿತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡರು.

ರೈತ ಕರಣ್ ಅವರ 5 ಎಕರೆ ಜಮೀನಿನಲ್ಲಿ ಇರುವ ಕೊತ್ತಂಬರಿ, ಪುಂಡಿ ಪಲ್ಯ, ಜೋಳ, ಕಡಲೆ ಎಲ್ಲವನ್ನು ಗುರುತಿಸಿ ಬೆಳೆ ಸಮೀಕ್ಷೆ ಆ್ಯಪ್​ನಲ್ಲಿ ನೋಂದಣಿ ಮಾಡುವ ಪ್ರಕ್ರಿಯೆಯನ್ನ ಸಮಗ್ರ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಬೆಳೆ ಸಮೀಕ್ಷೆ ಕಾರ್ಯವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರು ಗಮನ ಹರಿಸಬೇಕು ಎಂದು ಸೂಚಿಸಿದರು.

ರೈತರ ಜಮೀನಿನಲ್ಲಿ ಬೆಳೆ ಸಮೀಕ್ಷೆ

ತಹಸೀಲ್ದಾರಗೆ ಸೂಚನೆ: ಈ ಬೆಳೆ ಸಮೀಕ್ಷೆಯು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರರು ಈ ಬಗ್ಗೆ ಮುತುವರ್ಜಿ ವಹಿಸಿ, ಪ್ರತಿ ಗಂಟೆಗೊಮ್ಮೆ ಪರಿಶೀಲನೆ ನಡೆಸುತ್ತ ನೋಂದಣಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಇದೆ ವೇಳೆಯಲ್ಲಿ ಜಿಲ್ಲಾಧಿಕಾರಿಗಳು ತಹಸೀಲ್ದಾರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬಸವಕಲ್ಯಾಣ ಸಹಾಯಕ ಆಸಕ್ತರಾದ ಭುವನೇಶ ಪಟೇಲ್, ತಹಸೀಲ್ದಾರ ಸಾವಿತ್ರಿ ಸಲಗರ ಉಪಸ್ಥಿತರಿದ್ದರು.

ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಜಾರಿ, ಎಲ್ಲಿ?

Published On - 7:34 pm, Thu, 21 January 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್