ಬೀದರ್: ಹುಮ್ನಾಬಾದ್ ತಾಲೂಕಿನ ಗ್ರಾಮಗಳಲ್ಲಿ, ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ತಾಲೂಕಿನ ಹಿಲಾಲಪುರ ವಡ್ಡನಕೇರ ಸಕ್ಕರಗಂಜ್ ನಿಂಬೂರ್ ಗ್ರಾಮಗಳಲ್ಲಿ ಭೂಕಂಪವಾಗಿದೆ. ಭೂಮಿಯ 5 ಕಿಲೋಮೀಟರ್ ಆಳದಲ್ಲಿ ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ಈ ಹಿನ್ನೆಲೆ ಗ್ರಾಮಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಅಧಿಕಾರಿಗಳು ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ. ಕಳೆದ ವರ್ಷ ಕೂಡ ಇದೆ ಗ್ರಾಮಗಳಲ್ಲಿ ಭೂಮಿ ಕಂಪಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ