ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವಂತಹ ಘಟನೆ ತಾಲೂಕಿನ ಕಂಗಟಿ ಗ್ರಾಮದಲ್ಲಿ ನಡೆದಿದೆ.

ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು
ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು
TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Sep 26, 2022 | 7:30 PM

ಬೀದರ್: ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವಂತಹ ಘಟನೆ ತಾಲೂಕಿನ ಕಂಗಟಿ ಗ್ರಾಮದಲ್ಲಿ ನಡೆದಿದೆ. ಸುನೀತಾ(32), ಪುತ್ರ ನಾಗಶೆಟ್ಟಿ(12), ತಾಯಿ ಆನಂದಾ(33), ಪುತ್ರ ಪ್ರಜ್ವಲ್‌(14) ಮೃತರು. ಕಂಗಟಿ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜನವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅದೇ ರೀತಿಯಾಗಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ದುರ್ಮರಣ ಹೊಂದಿರುವಂತಹ ಘಟನೆ ಬೀದರ್​ ತಾಲೂಕಿನ ಅಲಿಯಂಬರ್​ ಗ್ರಾಮದಲ್ಲಿ ನಡೆದಿದೆ. ವಿನಯ್(20), ವೀರೇಶ್(17) ಮೃತ ಸಹೋದರರು. ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸ್ ಠಾಣೆಯ ಪಿಎಸ್ಐ ಪ್ರೀತಮ್ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು. ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೆಲಮಂಗಲ ಟೌನ್​ ಠಾಣೆ ಆವರಣದಲ್ಲಿ ನಿಲ್ಲಿಸಿದ್ದ ಕಾರು ಭಸ್ಮ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್​​ ಠಾಣೆ ಆವರಣದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಪ್ರಕರಣವೊಂದರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ ಕಾರು ಭಸ್ಮವಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ನೆಲಮಂಗಲ ಟೌನ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣಿಗೆ ಶರಣಾದ ಗೃಹಿಣಿ

ವಿಜಯಪುರ: ಜೀವನದಲ್ಲಿ ಜಿಗುಪ್ಸೆ ಹೊಂದಿ ಗೃಹಿಣಿ ನೇಣಿಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಇಂಡಿ ಪಟ್ಟಣದ ರೇವಪ್ಪ ಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ಸಂತೋಷ ನಾವಿ (23) ನೇಣಿಗೆ ಶರಣಾದ ಗೃಹಿಣಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡಿದ್ದಾರೆ. ಕಳೆದ ಒಂದೂವರೆ ವರ್ಷದ ಹಿಂದೆ ಸಾವಿತ್ರಿ ಸಂತೋಷನನ್ನು ಮದುವೆಯಾಗಿದ್ದರು. ಪತಿ ಮನೆಯವರ ಮೇಲೆ ಅನುಮಾನವಿಲ್ಲಾ ಎಂದು ಸಾವಿತ್ರಿ ಪೋಷಕರು ಪೊಲೀಸರಿಗೆ ಹೇಳಿದ್ದಾರೆ. ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ನಿಗೂಢವಾಗಿ ನಾಪತ್ತೆಯಾಗಿದ್ದ ಬೆಂಗಳೂರಿನ 3 ವಿದ್ಯಾರ್ಥಿನಿಯರು

ಬೆಂಗಳೂರು: ನಿಗೂಢವಾಗಿ ಕಾಣೆಯಾಗಿದ್ದ ಬೆಂಗಳೂರಿನ ಮೂವರು ಬಾಲಕಿಯರು ತಮಿಳುನಾಡಿನಲ್ಲಿ ಪತ್ತೆಯಾಗಿದ್ದಾರೆ.  ನಾಪತ್ತೆಯಾಗಿ ಬರೋಬ್ಬರಿ ಇಪ್ಪತ್ತು ದಿನಗಳ ಬಳಿಕ ಚೆನ್ನೈನ ಮನೆಯೊಂದರಲ್ಲಿ ಸಿಕ್ಕಿದ್ದಾರೆ. ಇದರಿಂದ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ. ಶಕ್ತೀಶ್ವರಿ, ವೇರೋನಿಕಾ, ನಂದಿನಿ‌ಯನ್ನು ಪುಲಕೇಶಿನಗರ ಪೊಲೀಸರು ಪತ್ತೆ ಮಾಡಿ ಪೋಷಕರಿಗೆ ಒಪ್ಪಿಸಿದ್ದಾರೆ. ಇದೇ ಸೆ. 6ರಂದು ಶಾಲೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು, ಚೆನ್ನೈನ ಮನೆಯೊಂದರಲ್ಲಿ ಆಶ್ರಯ ಪಡೆದುಕೊಂಡು ಕೆಲಸಕ್ಕೆ ಹೋಗುತ್ತಿದ್ದರು. ಆದ್ರೆ, ಮನೆ ಬಿಟ್ಟು ಹೋಗಿದ್ಯಾಕೆ? ಎನ್ನುವ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada