ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಹೆಚ್ಚಳ; ಬೀದರ್ ಜಿಲ್ಲೆಯ ಗಡಿಭಾಗದಲ್ಲಿ ಹೈಅಲರ್ಟ್
ಈಗಾಗಲೇ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಇದರಿಂದ ಕರ್ನಾಟಕದ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗಡಿಭಾಗದಲ್ಲಿ ಚೆಕ್ಪೋಸ್ಟ್ ನಿರ್ಮಿಸಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕು, ಕಮಲನಗರ ತಾಲೂಕು, ಬಸವಕಲ್ಯಾಣ ತಾಲೂಕು, ಔರಾದ್ ತಾಲೂಕು ಗಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಬೀದರ್: ಮಹಾರಾಷ್ಟ್ರದ ಲಾತೂರ್ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಗಡಿಭಾಗದ ತಾಲೂಕುಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಬೀದರ್ ಜಿಲ್ಲೆಯಲ್ಲಿ ಪಶು ಸಂಗೋಪನಾ ಇಲಾಖೆ ಅಲರ್ಟ್ ಘೋಷಿಸಿದ್ದು, ಮಹಾರಾಷ್ಟ್ರದಿಂದ ಕೋಳಿ ಮಾಂಸ, ಕೋಳಿ ಮೊಟ್ಟೆ ಸಾಗಣೆಯ ಮೇಲೆ ನಿಷೇಧ ಹೇರಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕು, ಕಮಲನಗರ ತಾಲೂಕು, ಬಸವಕಲ್ಯಾಣ ತಾಲೂಕು, ಔರಾದ್ ತಾಲೂಕು ಗಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಈ ಭಾಗದಲ್ಲಿ ಪಶುಸಂಗೋಪನಾ ಸಿಬ್ಬಂದಿಯಿಂದ ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ.
ಮಹಾರಾಷ್ಟ್ರದಿಂದ ಬೀದರ್ ಜಿಲ್ಲೆಗೆ ಕೋಳಿ ಉತ್ಪನ್ನ ಸಾಗಣೆಗೆ ನಿರ್ಬಂಧ ಹೇರಲಾಗಿದೆ ಎಂದು ಟಿವಿ9ಗೆ ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ನರಸಪ್ಪ ಮಾಹಿತಿ ನೀಡಿದ್ದಾರೆ. ಬೀದರ್ ಜಿಲ್ಲೆಯ ಗಡಿಯಲ್ಲಿರುವ ಮಹಾರಾಷ್ಟ್ರದ ಲಾತೂರ್ ತಾಲೂಕಿನಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ, ಪಶು ಸಂಗೋಪನೆ ಇಲಾಖೆಯ ಸಿಬ್ಬಂದಿಯಿಂದ ಹಗಲು ಚೆಕ್ ಪೋಸ್ಟ್ ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ 5 ತಾಲೂಕಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಮಹಾರಾಷ್ಟ್ರದಿಂದ ಬರುವ ಕೋಳಿ, ಮೊಟ್ಟೆ, ಮಾಂಸವನ್ನು ಬೀದರ್ಗೆ ಸಾಗಿಸಲು ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Bird Flu: ಭಾರತದಲ್ಲಿ 5 ವರ್ಷಗಳ ಬಳಿಕ ಮಾನವನಲ್ಲಿ ಪತ್ತೆಯಾಯ್ತು ಹಕ್ಕಿಜ್ವರ, ಇದು ಎರಡನೇ ಪ್ರಕರಣ
ಈಗಾಗಲೇ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಇದರಿಂದ ಕರ್ನಾಟಕದ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕವು ಗಡಿ ಕಣ್ಗಾವಲು ಮತ್ತು ಮೇಲ್ವಿಚಾರಣೆಯನ್ನು ಹೆಚ್ಚಿಸಿದೆ. ರಾಜ್ಯದ ಪಶುಸಂಗೋಪನಾ ಇಲಾಖೆಯು ಈ ರಾಜ್ಯಗಳಿಂದ ಪ್ರವೇಶಿಸುವ ಕೋಳಿಗಳ ಲಾರಿಗಳ ತಪಾಸಣೆಯನ್ನು ಹೆಚ್ಚಿಸಿದೆ ಎಂದು ವರದಿಯಾಗಿದೆ. ನಿರ್ದಿಷ್ಟವಾಗಿ ಬೀದರ್, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳ ಮೇಲೆ ಗಮನಹರಿಸಲಾಗಿದೆ.
ಕರ್ನಾಟಕದಲ್ಲಿ ಯಾವುದೇ ಹಕ್ಕಿಜ್ವರದ ಪ್ರಕರಣಗಳು ವರದಿಯಾಗಿಲ್ಲದಿದ್ದರೂ, ರಾಜ್ಯದ ಗಡಿಗಳನ್ನು ದಾಟುವ ಪ್ರತಿಯೊಂದು ಕೋಳಿ ಲಾರಿಯನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ