ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಅವಕಾಶ ನಿರಾಕರಣೆ; ಬೀದರ್‌ನ ಬ್ರಿಮ್ಸ್ ಕಾಲೇಜಿನ ವಿಡಿಯೋ ವೈರಲ್
ಬೀದರ್ನಲ್ಲಿ ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ಅವಕಾಶ ಕಲ್ಪಿಸದ ಘಟನೆ ಬೆಳಕಿಗೆ ಬಂದಿದೆ. ಬೀದರ್‌ನ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಿನ್ನೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೀದರ್: ರಾಜ್ಯದಲ್ಲಿ ಹಿಜಾಬ್- ಕೇಸರಿ ಶಾಲು (Hijab Row) ವಿವಾದ ಜೋರಾಗಿದೆ. ಈ ನಡುವೆ ಬೀದರ್ನಲ್ಲಿ (Bidar) ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ಅವಕಾಶ ಕಲ್ಪಿಸದ ಘಟನೆ ಬೆಳಕಿಗೆ ಬಂದಿದೆ. ಬೀದರ್‌ನ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಿನ್ನೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿನ್ನೆ ಬಿಎಸ್ಸಿ ನರ್ಸಿಂಗ್ ಪರೀಕ್ಷೆ ವೇಳೆ ಹಿಜಾಬ್ ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ. ನಿನ್ನೆ ನಡೆದ ಹಿಜಾಬ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಎಸ್ಸಿ ನರ್ಸಿಂಗ್ ಪರೀಕ್ಷಾ ಕೊಠಡಿಯಲ್ಲಿ ಮೇಲ್ವಿಚಾರಕರು ಪ್ರವೇಶ ನಿರಾಕರಿಸಿದ್ದಾರೆ. ಈ ಕುರಿತು ಪರೀಕ್ಷಾ ಮೇಲ್ವಿಚಾರಕ ಡಾ.ಪ್ರದೀಪ್ ರಾಠೋಡ ಸ್ಪಷ್ಟನೆ ನೀಡಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷೆ ಬರೆದರೆ ನಕಲು ಸಾಧ್ಯತೆ ಹಿನ್ನೆಲೆಯಲ್ಲಿ ಹಿಜಾಬ್ ಗೆ ಅನುಮತಿ ಕೊಟ್ಟಿಲ್ಲ ಎಂದು ಅವರು ತಿಳಿಸಿದ್ದಾರೆ. ಹಾಲ್ ಟಿಕೇಟ್ ನೋಡಿ ಪರೀಕ್ಷೆ ಬರೆಯೋ ಅಭ್ಯರ್ಥಿ ಎಂದು ಖಚಿತ ಪಡಿಸಿಕೊಂಡ ಬಳಿಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಲಾ- ಕಾಲೇಜುಗಳಲ್ಲಿ ಮೊಬೈಲ್ ನಿಷೇಧಕ್ಕೆ ಚರ್ಚೆ:
ಹಿಜಾಬ್- ಕೇಸರಿ ಶಾಲು ಕದನದ ನಂತರ ಎಚ್ಚೆತ್ತ ಶಿಕ್ಷಣ ಇಲಾಖೆ, ಸ್ಕೂಲ್ ಕಾಲೇಜು ಆವರಣದಲ್ಲಿ ಮೊಬೈಲ್‌ಬಳಕೆ ಸಂಪೂರ್ಣ ನಿಷೇಧಕ್ಕೆ ಚರ್ಚೆ ನಡೆಸುತ್ತಿದೆ. ಸ್ಕೂಲ್ ಕಾಲೇಜಿನಲ್ಲಿ ನಡೆಯುವ ಸಣ್ಣ ಪುಟ್ಟ ಘಟನೆಗಳನ್ನ ಚಿತ್ರೀಕರಿಸಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ಅಗತ್ಯವಿಲ್ಲದ ವಿಡಿಯೋ ವೈರಲ್ ಮಾಡುತ್ತಿದ್ದಾರೆ. ಹಾಗಾಗಿ ಶಾಲಾ ಕಾಲೇಜು ಆವರಣದಲ್ಲಿ ಮೊಬೈಕ್ ಬಳಕೆ ನಿಷೇಧ ಮಾಡಲು ತಜ್ಞರ ಸಲಹೆ ನೀಡಿದ್ದು, ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಈಗಾಗಲೇ ತರಗತಿ ಒಳಗೆ ಮೊಬೈಲ್ ನಿಷೇಧವಿದ್ದು, ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಚರ್ಚೆ ಮಾಡಲಾಗುತ್ತಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳನ್ನ ಪರಿಶೀಲನೆ ಮಾಡುವ ಹಾಗೆ, ಇನ್ನು ಮುಂದೆ ತಪಾಸಣೆ ಮಾಡಿ ಒಳ ಬಿಡುವುದರ ಬಗ್ಗೆ ಕೂಡ ಚರ್ಚೆ ಮಾಡಲಾಗುವುದು.
ತುರ್ತು ಮಧ್ಯಪ್ರವೇಶಕ್ಕೆ ಸುಪ್ರೀಂ ನಕಾರ:
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಮತ್ತು ಇತರ ಧಾರ್ಮಿಕ ಉಡುಪುಗಳನ್ನು ನಿಷೇಧಿಸುವ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶದ ವಿರುದ್ಧದ ಮೇಲ್ಮನವಿಗಳನ್ನು ತುರ್ತಾಗಿ ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಸೂಕ್ತ ಸಂದರ್ಭದಲ್ಲಿ ಮಾತ್ರ ಮಧ್ಯ ಪ್ರವೇಶಿಸುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ. ಈ ವಿಷಯಗಳನ್ನು ರಾಷ್ಟ್ರ ಮಟ್ಟಕ್ಕೆ ಹರಡಬೇಡಿ. ಸೂಕ್ತ ಸಮಯದಲ್ಲಿ ಮಾತ್ರ ನಾವು ಹಸ್ತಕ್ಷೇಪ ಮಾಡುತ್ತೇವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ಇದನ್ನೂ ಓದಿ:
Published On - 2:29 pm, Fri, 11 February 22




