Vijay Sankalp Yatra: ಅಮಿತ್​ ಶಾ ರಾಜ್ಯ ಪ್ರವಾಸ: ಬೀದರನ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ ರಥ ಯಾತ್ರಗೆ ಚಾಲನೆ

ಇಂದು ಮತ್ತು ನಾಳೆ (ಮಾರ್ಚ್​ 3, 4) ಕೇಂದ್ರ ಗೃಹ ಸಚಿವ ಅಮಿತ್​ ಶಾ ಬೀದರ್, ಬೆಂಗಳೂರು​ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬಸವಕಲ್ಯಾಣದಿಂದ ಪ್ರಾರಂಭವಾಗುವ ವಿಜಯ ಸಂಕಲ್ಪ ರಥ ಯಾತ್ರಗೆ ಚಾಲನೆ ನೀಡಲಿದ್ದಾರೆ.

Vijay Sankalp Yatra: ಅಮಿತ್​ ಶಾ ರಾಜ್ಯ ಪ್ರವಾಸ: ಬೀದರನ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ ರಥ ಯಾತ್ರಗೆ ಚಾಲನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ
Follow us
ವಿವೇಕ ಬಿರಾದಾರ
|

Updated on:Mar 03, 2023 | 8:02 AM

ಬೀದರ್​: ರಾಜ್ಯದ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ತಾರಕಕ್ಕೇರಿದೆ. ಭಾರತೀಯ ಜನತಾ ಪಾರ್ಟಿ (BJP) ಕೇಂದ್ರ ಮತ್ತು ರಾಜ್ಯ ಡಬಲ್​ ಇಂಜಿನ್​ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುತ್ತಾ ಮತಗಳ ಕ್ರೋಢೀಕರಣ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದು, ಇಂದು ಮತ್ತು ನಾಳೆ (ಮಾರ್ಚ್​ 3, 4) ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಬೀದರ್ (Bidar), ಬೆಂಗಳೂರು​ (Bengaluru) ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬಸವಕಲ್ಯಾಣದಿಂದ ಪ್ರಾರಂಭವಾಗುವ ವಿಜಯ ಸಂಕಲ್ಪ ರಥ ಯಾತ್ರಗೆ ಚಾಲನೆ ನೀಡಲಿದ್ದಾರೆ.

ಅಮಿತ್​ ಶಾ ಬೀದರ್​ ಪ್ರವಾಸ ವೇಳಾಪಟ್ಟಿ

ವಿಶೇಷ ವಿಮಾನದ ಮೂಲಕ ತಡರಾತ್ರಿ 2:30 ಕ್ಕೆ ಬೀದರ್​ಗೆ ಬಂದಿರುವ ಅಮಿತ್ ಶಾ, 11:30 ಕ್ಕೆ ಗುರುನಾನಕ್​ ಝೀರಾಕ್ಕೆ ಭೇಟಿ ಕೊಡುತ್ತಾರೆ. 11:40ಕ್ಕೆ ಬೀದರ್​​ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್​ ಮೂಲಕ ಬಸವಕಲ್ಯಾಣಕ್ಕೆ ತೆರಳುವರು. ಮಧ್ಯಾಹ್ನ 12:10ಕ್ಕೆ ಬಸವಕಲ್ಯಾಣದ ಕ್ರಿಕೆಟ್​ ಸ್ಟೇಡಿಯಂನಿಂದ ಅನುಭವ ಮಂಟಪಕ್ಕೆ ಹೋಗುತ್ತಾರೆ. ಮಧ್ಯಾಹ್ನ 12:30ಕ್ಕೆ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡುತ್ತಾರೆ.

ಮಧ್ಯಾಹ್ನ 12:40ಕ್ಕೆ ಅನುಭವ ಮಂಟಪಕ್ಕೆ ಭೇಟಿ ಕೊಟ್ಟು, 12:45ಕ್ಕೆ ತೇರು ಮೈದಾನಕ್ಕೆ ತೆರಳುವರು. ಮಧ್ಯಾಹ್ನ 1:15ಕ್ಕೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3ಕ್ಕೆ ಹುಮನಾಬಾದ್​ನಲ್ಲಿ ರೋಡ್​ ಶೋ ನಡೆಯಲಿದೆ​. ಬಳಿಕ ಬೀದರ್​ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರಲಿದ್ದಾರೆ.

ಅಮಿತ್​ ಶಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸೌದಿ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಸಾಥ್​ ನೀಡಲಿದ್ದಾರೆ.

ದೇವನಹಳ್ಳಿಯ ವಿಜಯ ಸಂಕಲ್ಪ ಯಾತ್ರೆಗೆ ಅಮಿತ್​ ಶಾ ಚಾಲನೆ

ಬೆಂಗಳೂರ ದೇವನಹಳ್ಳಿಯಿಂದ ಆರಂಭವಾಗುವ ವಿಜಯ ಸಂಕಲ್ಪ ರಥ ಯಾತ್ರೆಯ 4ನೇ ರಥಕ್ಕೆ ಚುನಾವಣಾ ಚಾಣಕ್ಯ ಅಮಿತ್​ ಶಾ ಇಂದು ಚಾಲನೆ ನೀಡಲಿದ್ದಾರೆ. ಹೀಗಾಗಿ ಬೀದರ್​ನಿಂದ ಹೊರಟು ಸಂಜೆ  4 ಗ‌ಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ.  ಮೊದಲಿಗೆ ರಣಬೈರೆಗೌಡರ ಹುಟ್ಟೂರು ಆವತಿಗೆ ಭೇಟಿ ನೀಡಿ ಆವತಿಯ ಚೆನ್ನಕೇಶವ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ರಣ ಬೈರೆಗೌಡ ಪ್ರತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ 30 ಸಾವಿರ ಜನರು ಸೇರುವ ನಿರೀಕ್ಷೆ ಇದೆ.

ಬೀದರ್ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್

ಕೇಂದ್ರ ಗೃಹ ಸಚಿವ ಅಮೀತ್ ಶಾ ಬಸವಕಲ್ಯಾಣಕ್ಕೆ ಆಗಮಿಸುವ ಹಿನ್ನೆಲೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ.  2 ಸಾವಿರಕ್ಕೂ ಹೆಚ್ಚು ಪೊಲೀಸ್​​ರನ್ನು ನಿಯೋಜನೆ ಮಾಡಲಾಗಿದೆ. 2 ಜನ ಎಸ್ಪಿ 4 ಜನ ಸಹಾಯಕ ಸುಪರಿಡೆಂಟ್ ಆಫ್ ಪೋಲಿಸ್,  15 ಜನ ಡಿವೈಎಸ್ಪಿ 40 ಜನ ಸರ್ಕಲ್ ಇನ್ಸ್ ಪೆಕ್ಟರ್ 150 ಜನ ಪಿಎಸ್​ಐ 12 ಕೆಸ್ಆರ್​ಪಿ ತುಕಡಿಯನ್ನು ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 am, Fri, 3 March 23

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ