ಅಯ್ಯೋ ವಿಧಿಯೇ! ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ, ಮಗ ಸ್ಥಳದಲ್ಲೇ ಸಾವು

ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಒಂದೆ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ಬಳಿ ನಡೆದಿದೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬೀದರ್​ನ ಜಿಲ್ಲಾಸ್ಪತ್ರೆಗೆ 3 ಮೃತದೇಹಗಳನ್ನು ಸ್ಥಳಾಂತರ ಮಾಡಲಾಗಿದೆ.

ಅಯ್ಯೋ ವಿಧಿಯೇ! ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ, ಮಗ ಸ್ಥಳದಲ್ಲೇ ಸಾವು
ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ, ಮಗ ಸ್ಥಳದಲ್ಲೇ ಸಾವು
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 07, 2024 | 7:29 PM

ಬೀದರ್​, ಅ.07: ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಒಂದೆ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ದಂಪತಿ ಗಣೇಶಪುರದ ಜಗನ್ನಾಥ್(35), ಪತ್ನಿ ರೇಣುಕಾ(35) ಹಾಗೂ ಮಗ ವಿನೋದ್ ಕುಮಾರ್(14)ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಜಮೀನಿನಿಂದ ಮನೆಗೆ ಹೋಗುವಾಗ ಈ ದುರ್ಘಟನೆ ನಡೆದಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ. ಸಧ್ಯ ಬೀದರ್​ನ ಜಿಲ್ಲಾಸ್ಪತ್ರೆಗೆ 3 ಮೃತದೇಹಗಳನ್ನು ಸ್ಥಳಾಂತರ ಮಾಡಲಾಗಿದೆ.

ಸಾಲಬಾಧೆ; ಜಮೀನಿನಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಬೆಳಗಾವಿ: ಖಾನಾಪುರ ತಾಲೂಕಿನ ಜುಂಜವಾಡ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ನಿಂಗಪ್ಪ ಗೋನಶೆಟ್ಟಿ(51) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿವಿಧ ಮೈಕ್ರೋ ಫೈನಾನ್ಸ್​ನಲ್ಲಿ 5 ಲಕ್ಷಕ್ಕೂ ಹೆಚ್ಚು ಹಣ ಸಾಲ ಮಾಡಿಕೊಂಡಿದ್ದ ನಿಂಗಪ್ಪ, ಸಾಲ ತೀರಿಸಲಾಗಿದೆ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ನಂದಘಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 ಇದನ್ನೂ ಓದಿ:ಬೆಂಗಳೂರಿನಲ್ಲಿ ತಪ್ಪದ ಗುಂಡಿ ಗಂಡಾಂತರ; ಸ್ವಲ್ಪ ಯಾಮಾರಿದ್ರೂ ಅಪಘಾತ ಖಚಿತ

45 ಸಾವಿರ ರೂ. ಸಾಲ ತೀರಿಸಲಾಗದೆ ವ್ಯಕ್ತಿ ನೇಣಿಗೆ ಶರಣು

ಬೆಂಗಳೂರು ಗ್ರಾಮಾಂತರ: ನೆಲಮಂಗಲದ ರೇಣುಕಾನಗರದಲ್ಲಿ ಸಾಲಬಾಧೆಗೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 45 ಸಾವಿರ ರೂ. ಸಾಲ ತೀರಿಸಲಾಗದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಚಂದನ್​ಕುಮಾರ್(38) ಕೊನೆಯುಸಿರೆಳೆದಿದ್ದಾರೆ. ಈ ಕುರಿತು ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Mon, 7 October 24

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us