ಹಾಲು ಒಕ್ಕೂಟ ನೇಮಕಾತಿಗೆ 25 ಲಕ್ಷ, ಕೆಪಿಎಸ್​ಸಿ ನೇಮಕಾತಿ 1 ಕೋಟಿ: ಎಚ್​ಡಿಕೆ ಗಂಭೀರ ಆರೋಪ

ಭ್ರಷ್ಟಾಚಾರಕ್ಕೆ ಕಡಿವಾಣ ಬೀಳದಿದ್ದರೆ ಶ್ರಿಲಂಕಾಗೆ ಬಂದಿರುವ ಪರಿಸ್ಥಿತಿ ಭಾರತಕ್ಕೂ ಶೀಘ್ರದಲ್ಲಿ ಬರಲಿದೆ. ಎರಡು ರಾಷ್ಟ್ರೀಯ ಪಕ್ಷಗಳು ಭ್ರಷ್ಟಾಚಾರದ ಬಗ್ಗೆ ಹೋರಾಟ ಮಾಡುತ್ತಿರುವು ಕೇವಲ ನಾಟಕ ಎಂದು ಕುಮಾರಸ್ವಾಮಿ ಆರೋಪ ಮಾಡಿದರು.

ಹಾಲು ಒಕ್ಕೂಟ ನೇಮಕಾತಿಗೆ 25 ಲಕ್ಷ, ಕೆಪಿಎಸ್​ಸಿ ನೇಮಕಾತಿ 1 ಕೋಟಿ: ಎಚ್​ಡಿಕೆ ಗಂಭೀರ ಆರೋಪ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 23, 2022 | 11:07 AM

ಬೀದರ್: ಕೇವಲ ಪೊಲೀಸ್ ಸಬ್ ಇನ್​ಸ್ಪೆಕ್ಟರ್ ನೇಮಕಾತಿ (PSI Recruitment) ಮಾತ್ರವೇ ಅಲ್ಲ ಕರ್ನಾಟಕ ಹಾಲು ಒಕ್ಕೂಟ (KMF) ಮತ್ತು ಕರ್ನಾಟಕ ಲೋಕಸೇವಾ ಆಯೋಗದ (KPSC) ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. 545 ಪಿಎಸ್ಐಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಕುರಿತು ತಾಲ್ಲೂಕಿನ ಕಾಶೆಂಪುರ ಗ್ರಾಮದಲ್ಲಿ ಮಾತನಾಡಿದ ಅವರು, ಕೆಎಂಎಫ್ ಹುದ್ದೆಗಳನ್ನು ₹ 25 ಲಕ್ಷಕ್ಕೆ ಮಾರಾಟ ಮಾಡಲಾಗಿದೆ. ಕೆಪಿಎಸ್​ಸಿ ನೇಮಕಾತಿಗೆ ₹ 1 ಕೋಟಿ ತೆರಬೇಕಿದೆ. ಬಿಜೆಪಿ ಸರ್ಕಾರದಲ್ಲಿ ಕೆಲ ವ್ಯಕ್ತಿಗಳು ಗಂಟೆಗೆ ಕೋಟಿ ರೂಪಾಯಿ ಸಂಪಾದಿಸುತ್ತಿದ್ದಾರೆ ಎಂದು ಆರೋಪ ಮಾಡಿದ ಅವರು, ರಾಷ್ಟ್ರೀಯ ಪಕ್ಷಗಳನ್ನು ಬೆಂಬಲಿಸದೇ ಪ್ರಾದೇಶಿಕ ಪಕ್ಷಕ್ಕೆ ಮನ್ನಣೆ ಕೊಡಿ ಎಂದು ಮನವಿ ಮಾಡಿದರು.

ನನ್ನ ಬಳಿಯು ಕೂಡಾ ಸಾವಿರಾರು ‌ಸಂಖ್ಯೆಯಲ್ಲಿ ಅಭ್ಯರ್ಥಿಗಳು ಬಂದಿದ್ದರು. ನನ್ನ ಬಳಿ‌ ಇದೆಲ್ಲ ನಡೆಯಲ್ಲ ಅಂತಾ ಹೇಳಿ ಕಳುಹಿಸಿದ್ದೇನೆ. ಕೇವಲ ಪಿಎಸ್​ಐ ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರ ‌ಮಾತ್ರ ಬಯಲಿಗೆ ಬಂದಿದೆ. ಭ್ರಷ್ಟಾಚಾರ ಬಗ್ಗೆ ಸ್ವತಃ ಮುಖ್ಯಮಂತ್ರಿಯೇ ಮುತುವರ್ಜಿಯಿಂದ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಇಲ್ಲದೆ ಹೋದರೆ ಇದು ಹೀಗೆಯೇ ಮುಂದುವರಿಯುತ್ತದೆ. ಬಡ ವಿದ್ಯಾರ್ಥಿಗಳಿಗೆ ‌ಅನ್ಯಾಯವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಭ್ರಷ್ಟಾಚಾರಕ್ಕೆ ಕಡಿವಾಣ ಬೀಳದಿದ್ದರೆ ಶ್ರಿಲಂಕಾಗೆ ಬಂದಿರುವ ಪರಿಸ್ಥಿತಿ ಭಾರತಕ್ಕೂ ಶೀಘ್ರದಲ್ಲಿ ಬರಲಿದೆ. ಎರಡು ರಾಷ್ಟ್ರೀಯ ಪಕ್ಷಗಳು ಭ್ರಷ್ಟಾಚಾರದ ಬಗ್ಗೆ ಹೋರಾಟ ಮಾಡುತ್ತಿರುವು ಕೇವಲ ನಾಟಕ. ಕಾಂಗ್ರೆಸ್ ‌ಹಾಗೂ‌ ಬಿಜೆಪಿ ಒಂದೆ ನಾಣ್ಯದ ಎರಡು ಮುಖಗಳಿದ್ದಂತೆ. ಸರಕಾರಿ ಭೂಮಿಯನ್ನ ನುಂಗಿಹಾಕುತ್ತಿರುವ ವ್ಯಕ್ತಿಯ ಮನೆ ಮೇಲೆ ಬುಲ್ಡೋಜರ್ ಹತ್ತಿಸಬೇಕಿತ್ತು, ಬಡವರ ಮನೆಗಳ ಮೇಲೆಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಲಭೆಗೆ ಪ್ರಚೋದನೆ ಕೊಟ್ಟ ಒಬ್ಬ ಮೌಲ್ವಿಯನ್ನು ಬಂಧಿಸಲು ಸರಕಾರಕ್ಕೆ ಅಷ್ಟು ಸಮಯ ಬೇಕಿತ್ತೆ? ಯಾರೇ ನನ್ನ ಬಗ್ಗೆ ಹಗುರವಾಗಿ ಮಾತನಾಡಿದರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನರಿಗೆ ಕೊಟ್ಟ ಭರವಸೆಯನ್ನು ನಾನು ಈಡೇಸದೆ ಹೋದರೆ ಸರಕಾರವನ್ನೆ ವಿಸರ್ಜನೆ ಮಾಡುವೆ. ಒಂದು ಸಲ ಜೆಡಿಎಸ್ ಪೂರ್ಣ ಪ್ರಮಾಣದಲ್ಲಿ ಅಧಿಕಾರ ಕೊಟ್ಟರೆ ಜನರಿಗೆ‌ಕೊಟ್ಟ ಭರವಸೆ ಈಡೇರಿಸುವೆ ಎಂದು ಭರವಸೆ ನೀಡಿದರು.

ಗುತ್ತಿಗೆದಾರರು ಏಕೆ ಕೆಲಸ ಮಾಡಬೇಕು?

ಗುತ್ತಿಗೆದಾರರ ಬಳಿ ಸರ್ಕಾರ ಕಮಿಷನ್ ಪಡೆಯುತ್ತಿರುವ ಕುರಿತು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಶುಕ್ರವಾರ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದರು. ಗುತ್ತಿಗೆದಾರರ ಬಳಿ ಹಲವರು ಪರ್ಸೆಂಟೇಟ್ ಪಡೆಯುತ್ತಿದ್ದಾರೆ. ಕಾಮಗಾರಿಗಳಿಗೆ ಮಂಜೂರಾಗುವ ಶೇ 65ರಷ್ಟು ಅನುದಾನ ಮಧ್ಯವರ್ತಿಗಳ ಪಾಲಾಗುತ್ತಿದೆ. ಇಂಥ ಸನ್ನಿವೇಶದಲ್ಲಿ ಗುತ್ತಿಗೆದಾರರು ಯಾಕೆ ಕೆಲಸ ಮಾಡಬೇಕು? ಯಾಕೆ ಅವರಿವರ ಮನೆಬಾಗಿಲಿಗೆ ಹೋಗಿ ದುಂಬಾಲು ಬೀಳಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಈ ವ್ಯವಹಾರ ನಡೆದಿದೆ. ಕಾಂಗ್ರೆಸ್​ನವರು ಅಪ್ಪಟ ಚಿನ್ನ ಏನಲ್ಲ. ಈ ಹಿಂದೆಯೂ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೆ. ಆಗ ಸಿದ್ದರಾಮಯ್ಯ ಅವರ 80 ಶಾಸಕರು ಮನೆಯಲ್ಲಿ ಮಲಗಿದ್ದರು. ಅವರಿಗೆಲ್ಲಾ ಈಗ ಪರ್ಸೆಂಟೇಜ್ ವಿರುದ್ಧ ಹೋರಾಟ ನೆನಪಾಗಿದೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು. ಪಿಎಸ್​ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಪಿಎಸ್​ಐ ಅಕ್ರಮ ಪರೀಕ್ಷೆ ಕುರಿತು ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಈಶ್ವರಪ್ಪ ಅವರ ಬಂಧನದ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಿದ ಅವರು, ಈಶ್ವರಪ್ಪ ಏನೂ ನನಗೆ ನೆಂಟರಲ್ಲ. ಅವರು ರಾಜೀನಾಮೆ ನೀಡಬೇಕೆಂದು ನಅನೇ ಒತ್ತಾಯಿಸಿದ್ದೆ. ನಾನು ಬಿಜೆಪಿ ಪರವಾಗಿ ಇರುವವನಲ್ಲ. ಸತ್ಯಾಸತ್ಯತೆ ಹೊರಗೆ ಬರುವ ದೃಷ್ಟಿಯಿಂದ ಈಶ್ವರಪ್ಪ ಅವರ ರಾಜೀನಾಮೆ ಅಗತ್ಯವಿತ್ತು. ಈಗ ಅವರ ಬಂಧನ ಅಗತ್ಯವಿಲ್ಲ. ಹಗರಣಗಳ ನೇಮಕಾತಿ ಸಂಸ್ಕೃತಿಗೆ ಬಿಜೆಪಿ ಮುಂದಾಗಿದೆ ಎಂದು ಟೀಕಿಸಿದರು. ಕರ್ನಾಟಕದಲ್ಲಿಯೂ ಬುಲ್ಡೋಜರ್ ರಾಜಕಾರಣ ಆರಂಭಿಸುವ ಮಾತುಗಳ ಕುರಿತು ಪ್ರತಿಕ್ರಿಯಿಸಿದ ಅವರು, ಜನರು ಬೇಗ ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲದಿದ್ಲರೆ ಅಮಾಯಕರು ಬಲಿಪಶು ಆಗುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರಲ್ಲಿ ಅರವಿಂದ ಕೇಜ್ರಿವಾಲ್, ಅಪಾಯದ ಮುನ್ಸೂಚನೆ ಮೊದಲು ಅರ್ಥಮಾಡಿಕೊಂಡಿದ್ದು ಕುಮಾರಸ್ವಾಮಿನಾ?

ಇದನ್ನೂ ಓದಿ: ಎಸಿಬಿ ದಾಳಿಯಿಂದ ಏನು ಪ್ರಯೋಜನ ಎಂದ ಜೆಡಿಎಸ್ ನಾಯಕ ಎಚ್​ಡಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಉತ್ತರ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್