AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar: ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಬೀದರ್‌ನ ಕಾರಂಜಾ ಡ್ಯಾಂ ಕಾಲುವೆಯಲ್ಲಿ ತಂದೆ-ಮಗ ದುರಂತವಾಗಿ ಸಾವನ್ನಪ್ಪಿದ್ದಾರೆ. ನೀರಿಗೆ ಇಳಿಯುವಾಗ ಕಾಲು ಜಾರಿ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆ ಸಹ ಪ್ರಾಣ ಕಳೆದುಕೊಂಡಿದ್ದಾರೆ. ಈ ಹೃದಯವಿದ್ರಾವಕ ಘಟನೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ನಡೆದಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Bidar: ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು
ಕಾಲುವೆಯಿಂದ ಮೃತ ದೇಹ ಹೊರ ತೆಗೆಯುತ್ತಿರುವುದುImage Credit source: Tv9 Kannada
ಸುರೇಶ ನಾಯಕ
| Edited By: |

Updated on: Feb 16, 2026 | 4:42 PM

Share

ಬೀದರ್​​, ಫೆಬ್ರವರಿ 16: ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ, ಮಗ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ನಡೆದಿದೆ. ಹಳ್ಳಿಖೇಡ್(ಬಿ) ಗ್ರಾಮದ ವಿಶ್ವನಾಥ(50) ಮತ್ತು ಅಮರೇಶ(23) ಮೃತ ದುರ್ದೈವಿಗಳಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೋಲಿಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದಾರೆ. ಮೃತ ದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಕಾಲುವೆಯಿಂದ ಹೊರ ತೆಗೆದಿದ್ದಾರೆ.

ಮಗನ ಉಳಿಸಲು ಹೋಗಿ ತಂದೆಯೂ ಸಾವು!

ಬೀದರ್‌ನಲ್ಲಿ ಸಿಮೆಂಟ್ ಖಾಲಿ ಮಾಡಿ ವಾಪಸ್ ಊರಿನತ್ತ ತಂದೆ-ಮಗ ಇಬ್ಬರೂ ಪ್ರಯಾಣ ಬೆಳೆಸಿದ್ದರು. ಈ ವೇಳೆ ನೀರು ಕಂಡ ಹಿನ್ನೆಲೆ ಅಮರೇಶ್ ಕೈಕಾಲು ತೊಳೆದುಕೊಳ್ಳಲೆಂದು ಕಾಲುವೆಗೆ ಇಳಿದಿದ್ದ. ಆ ಸಂದರ್ಭ ಕಾಲು ಜಾರಿ ಕಾರಂಜಾ ಡ್ಯಾಂನ ಕಾಲುವೆಗೆ ಆತ ಬಿದ್ದಿದ್ದಾನೆ. ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ತಂದೆ ವಿಶ್ವನಾಥ ಜಮಾದಾರ್ ಕೂಡಲೇ ಆತನ ರಕ್ಷಣೆಗೆಂದು ಹೋಗಿದ್ದಾರೆ. ಆದರೆ ದುರಾದೃಷ್ಟವಶಾತ್​​ ತಂದೆ-ಮಗ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಮೂವರು ಸಾವು!

ಅಂಗಡಿ ಮುಂಭಾಗ ಶವ ಪತ್ತೆ

ಜಮಖಂಡಿ ನಗರದಲ್ಲಿ ಧನ್ವಂತರಿ ಆಸ್ಪತ್ರೆ ಸಮೀಪ ಅಂಗಡಿಯೊಂದರ ಮುಂಭಾಗ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಜಂಬಗಿ ಗ್ರಾಮದ ನಿವಾಸಿ ಉಮೇಶ್​​ ತೋಟದ(45) ಎಂದು ಗುರುತಿಸಲಾಗಿದ್ದು,ಅನಾರೋಗ್ಯದ ಹಿನ್ನೆಲೆ ರಾತ್ರಿ ಮಲಗಿದ್ದ ಸ್ಥಳದಲ್ಲೇ ಈತ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಮಖಂಡಿ ನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರ್ಯಾಕ್ಟರ್​​ಗೆ ಕಾರು ಡಿಕ್ಕಿ: ಓರ್ವ ಸಾವು

ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಮಗುಚಿ ಬಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೇರೂರು ಬ್ರೀಡ್ಜ್ ಮೇಲೆ ನಡೆದಿದೆ. ಕೆಂಪೇಗೌಡ ಮೃತ ವ್ಯಕ್ತಿಯಾಗಿದ್ದು, ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿದ್ದಾರೆ. ಮೃತದೇಹ ಕುಣಿಗಲ್ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?