Vidhan Parishad Election 2021: ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಭೀಮರಾವ್​ ಪಾಟೀಲ್​ ಗೆಲುವು

ಬಿಜೆಪಿ ಇಲ್ಲಿ ಗೆಲುವು ಸಾಧಿಸಲು ವಿಫಲವಾಗಿದೆ. ಆದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಚಾಣಾಕ್ಷ ರಾಜಕಾರಣದ ಮೂಲಕ ಭೀಮರಾವ್​ ಪಾಟೀಲ್ ಅವರಿಗೆ ಗೆಲುವು ಸಾಧಿಸುವಂತೆ ಮಾಡಿದ್ದಾರೆ.

Vidhan Parishad Election 2021: ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಭೀಮರಾವ್​ ಪಾಟೀಲ್​ ಗೆಲುವು
ಭೀಮರಾವ್​ ಪಾಟೀಲ್
Follow us
TV9 Web
| Updated By: preethi shettigar

Updated on:Dec 14, 2021 | 1:09 PM

ಬೀದರ್​: ಕಾಂಗ್ರೆಸ್ ಪಕ್ಷವನ್ನು ಸೋಲಿಸಲೇಬೇಕು ಎಂದು ಪಣತೊಟ್ಟಿದ್ದ ಬಿಜೆಪಿಗೆ ಮುಖಭಂಗವಾಗಿದೆ. ಇದಕ್ಕೆ ಕಾರಣ ವಿಧಾನ ಪರಿಷತ್​ ಚುನಾವಣೆಯಲ್ಲಿ ( vidhan parishad election results) ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಭೀಮರಾವ್​ ಪಾಟೀಲ್​ ಜಯಗಳಸಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಬೀದರ್​ ಪ್ರತಿಷ್ಠೆಯ ಕಣವಾಗಿತ್ತು. ಸದ್ಯ ಇಲ್ಲಿ ಎಕಾಂಗಿ ಹೋರಾಟ ಮಾಡಿ, ಆ ಮೂಲಕ ಈಶ್ವರ ಖಂಡ್ರೆ ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ. 

ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಬೀದರ್​ ಕ್ಷೇತ್ರದಲ್ಲಿನ ತಮ್ಮ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ  ಪ್ರಚಾರ ಮಾಡಿದ್ದರು. ಕೇಂದ್ರ ಸಚಿವ ಭಗವಂತ ಖೂಬಾ ಕೂಡ ಪ್ರಚಾರ ಮಾಡಿದ್ದರು. ಆದರೆ ಬಿಜೆಪಿ ಇಲ್ಲಿ ಗೆಲುವು ಸಾಧಿಸಲು ವಿಫಲವಾಗಿದೆ. ಆದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಚಾಣಾಕ್ಷ ರಾಜಕಾರಣದ ಮೂಲಕ ಭೀಮರಾವ್​ ಪಾಟೀಲ್ ಅವರಿಗೆ ಗೆಲುವು ಸಾಧಿಸುವಂತೆ ಮಾಡಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗೆ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನ 20 ಕ್ಷೇತ್ರಗಳಲ್ಲಿ 25 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 90 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗೆ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿ ಬದಲಾಗಿದೆ. ಮೂರೂ ಪಕ್ಷಗಳ ನಾಯಕರು ಹೆಚ್ಚು ಸ್ಥಾನ ಗೆಲ್ಲಿಸಲು ಮಿಂಚಿನಂತೆ ಕಾದಾಡಿದ್ದಾರೆ. ಅಖಾಡದಲ್ಲಿ ಧೂಳೆಬ್ಬಿಸಿದ್ದಾರೆ. ಈ ಹೋರಾಟಕ್ಕೆ ಮತದಾರ ಮತದಾನದ ಮುದ್ರೆ ಒತ್ತಿದ್ದು, ಇಂದು ತೀರ್ಪು ಬಹಿರಂಗವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ. ಈಗಾಗಲೆ 25 ಕ್ಷೇತ್ರಗಳ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ ನಡೆದಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮತಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ ಕೌಟಿಂಗ್ ಶುರುವಾಗಿದೆ. ಇದರ ಜೊತೆಗೆ ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.  ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೋಲಾರ, ಕೊಡಗು ಹಾಗೂ ಮೈಸೂರು ಕೇಂದ್ರಗಳಲ್ಲಿ ಮತ ಎಣಿಕೆ ಶುರುವಾಗಿದೆ.

ಇದನ್ನೂ ಓದಿ: Karnataka MLC Election Results 2021: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣಗೆ ಭರ್ಜರಿ ಗೆಲುವು

ಇಂದು ಹೊರ ಬೀಳಲಿದೆ ವಿಧಾನ ಪರಿಷತ್ ಚುನಾವಣೆ ಫಲಿತಾಂಶ, ಅಭ್ಯರ್ಥಿಗಳಿಗೆ ಢವ ಢವ! ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 12:10 pm, Tue, 14 December 21