ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 12, 2024 | 10:21 PM

ಇದೇ ಮೇ.10 ರಂದು ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಮುಸ್ಲಿಂ ಧರ್ಮೀಯ ಮಹಿಳೆ ಕುಳಿತಿದ್ದರು. ಈ ವೇಳೆ ಅದೇ ಧರ್ಮದ ಕೆಲ ಯುವಕರು ಬಂದು ಹಲ್ಲೆ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣದಲ್ಲಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಮೂವರು ಅರೆಸ್ಟ್ ಆಗಿದ್ದಾರೆ.

ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ
ಬೀದರ್​ನಲ್ಲಿ ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ
Follow us on

ಬೀದರ್, ಮೇ.12: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದ್ದ ನೈತಿಕ ಪೊಲೀಸ್​ಗಿರಿ(Moral Policing) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಸವಕಲ್ಯಾಣ ಠಾಣೆ ಪೊಲೀಸರು(Basavakalyan Police Station) ಮೂವರು ಯುವಕರನ್ನು ಬಂಧಿಸಿದ್ದಾರೆ. ವಾರದ ಹಿಂದೆ ಬಸವಕಲ್ಯಾಣದ ಸಾಲುಮರದ ತಿಮ್ಮಕ್ಕ ಪಾರ್ಕ್​ನಲ್ಲಿ ಹಿಂದೂ ವ್ಯಕ್ತಿ ಜೊತೆ ಮುಸ್ಲಿಂ ಮಹಿಳೆ ಕುಳಿತಿದ್ದಕ್ಕೆ ಮುಸ್ಲಿಂ ಯುವಕರು ಸೇರಿಕೊಂಡು ಹಿಂದೂ ವ್ಯಕ್ತಿ ಹಾಗೂ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಹಲ್ಲೆ ಸಂಬಂಧ ಬಸವಕಲ್ಯಾಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು(ಮೇ.12) ಮುಸ್ಲಿಂ ಸಮುದಾಯದ ಮೂವರು ಯುವಕರನ್ನು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.

ಘಟನೆ ವಿವರ

ಇದೇ ಮೇ.10 ರಂದು ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಮುಸ್ಲಿಂ ಧರ್ಮೀಯ ಮಹಿಳೆ ಕುಳಿತಿದ್ದರು. ಈ ವೇಳೆ ಅದೇ ಧರ್ಮದ ಕೆಲ ಯುವಕರು ಬಂದು ಹಲ್ಲೆ ಮಾಡಿದ್ದರು. ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಕುರಿತು ಪ್ರಕರಣ ದಾಖಲಾಗಿದ್ದು, ಇದೀಗ ಮೂವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಹಾವೇರಿಯಲ್ಲಿ ನೈತಿಕ ಪೊಲೀಸ್​ಗಿರಿ: ಲಾಡ್ಜ್​ನಲ್ಲಿ ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿತ

ಸಿಡಿಲು ಬಡಿದು ರೈತ ಸಾವು

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಗೋಗಿ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ್ದಾನೆ. ಮಳೆಯಿಂದ ಆಶ್ರಯ ಪಡೆಯಲು ಮರದಡಿ ನಿಂತಿದ್ದಾಗ ಈ ಘಟನೆ ನಡೆದಿದೆ. ಸಿಡಿಲು ಬಡಿದು ರೈತ ಅಪ್ಪರಾಯ ಕಲಮೂಡ್(48) ಸಾವು. ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Sun, 12 May 24