ಮನೆ ಮುಂದೆ ಆಟವಾಡ್ತಿದ್ದ ಮಗು ಅಪಹರಣ; ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ ನಯಾಕಮಾನ್​ನಲ್ಲಿ ಮನೆಯ‌ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಅರವಿಂದ್ ಎಂಬ ಮಗು‌ವನ್ನು ಮಹಿಳೆಯೊಬ್ಬಳು ಅಪಹರಿಸಿಕೊಂಡು ‌ಹೋಗಿದ್ದಳು. ಇದೀಗ ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬೀದರ್(Bidar)​ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮನೆ ಮುಂದೆ ಆಟವಾಡ್ತಿದ್ದ ಮಗು ಅಪಹರಣ; ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್
ಬೀದರ್​
Follow us
ಸುರೇಶ ನಾಯಕ
| Updated By: ಕಿರಣ್ ಹನುಮಂತ್​ ಮಾದಾರ್

Updated on:May 07, 2024 | 6:46 PM

ಬೀದರ್, ಮೇ.07: ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬೀದರ್(Bidar)​ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ ನಯಾಕಮಾನ್​ನಲ್ಲಿ ಮನೆಯ‌ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಅರವಿಂದ್ ಎಂಬ ಮಗು‌ವನ್ನು ಮಹಿಳೆಯೊಬ್ಬಳು ಅಪಹರಿಸಿಕೊಂಡು ‌ಹೋಗಿದ್ದಳು. ಈ ಕುರಿತು ನಗರ ಪೊಲೀಸ್ ‌ಠಾಣೆಯಲ್ಲಿ‌ ಮೇ 4ರಂದು ಪ್ರಕರಣ ‌ದಾಖಲಾಗಿತ್ತು. ಈ ಹಿನ್ನಲೆ ತಕ್ಷಣ ‌ಎಚ್ಚೆತ್ತುಕೊಂಡ ಎಸ್ಪಿ ಚೆನ್ನಬಸವಣ್ಣ ಅವರು ಮಗು ಪತ್ತೆಗಾಗಿ 3 ಪೋಲೀಸ್ ತಂಡವನ್ನು ರಚನೆ ಮಾಡಿದ್ದರು. ಇದೀಗ ಪೊಲೀಸರು ಹೈದ್ರಾಬಾದ್​ನಲ್ಲಿ ಮಗುವನ್ನ ರಕ್ಷಣೆ ಮಾಡಿ ತಾಯಿಯ ಮಡಿಲನ್ನು ಸೇರಿಸಿದ್ದಾರೆ.

ಮತ ಹಾಕಲು ತೆರಳಿದ್ದ ವ್ಯಕ್ತಿ ರಸ್ತೆ ಅಪಘಾತದಲ್ಲಿ ಸಾವು

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದ ಬಳಿ ಮತ ಹಾಕಲು ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಭದ್ರಾವತಿ ನಿವಾಸಿ ಬೈಕ್ ಸವಾರ ಮಂಜುನಾಥ್ (32) ಮೃತ ರ್ದುದೈವಿ. ಚುರ್ಚಿಗುಂಡಿಯಿಂದ ಭದ್ರಾವತಿಗೆ ತೆರಳುವಾಗ ಖಾಸಗಿ ಬಸ್​ಗೆ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿದ್ದಾರೆ. ಈ ಕುರಿತು ಶಿಕಾರಿಪುರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ದಾವಣಗೆರೆಯಲ್ಲಿ ಕಳ್ಳತನವಾಗಿದ್ದ ಗಂಡು ಮಗುವನ್ನ ಪೊಲೀಸರ ಕೈಗೆ ನೀಡಿ, ಅಪಹರಣ ಪ್ರಕರಣ ಅಂತ್ಯ ಹಾಡಿದ ಗೌರಮ್ಮಗೆ ಸನ್ಮಾನ

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಸಾವು

ರಾಯಚೂರು: ಜಿಲ್ಲೆಯ ಅರಕೇರಾ ತಾಲೂಕಿನ ಜಾಗಿರ ಜಾಡಲದಿನ್ನಿ ಗ್ರಾಮದಲ್ಲಿ ಬಿಎಲ್​​ಒ ಆಗಿ ನಿಯೋಜನೆಗೊಂಡಿದ್ದ ಬಸವರಾಜ ಜಗ್ಲಿ(53) ಎಂಬುವವರು ಚುನಾವಣಾ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹೆಡ್​ ಮಾಸ್ಟರ್ ಆಗಿದ್ದ ಬಸವರಾಜ, ಸರ್ಕಾರಿ ಶಾಲೆಯ ಬೂತ್​ಗೆ ಬಿಎಲ್​​ಒ ಆಗಿ ನಿಯೋಜನೆಗೊಂಡಿದ್ದರು. ಮಧ್ಯಾಹ್ನ ಬಿಪಿ ಲೋ ಆಗಿ ಕುಸಿದುಬಿದ್ದಿದ್ದ ಬಸವರಾಜ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಈ ಘಟನೆ ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Tue, 7 May 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ