AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಸ್ಟಾರ್ ಗ್ರೇಡ್ ಹೊಂದಿರುವ ಬೀದರ್ ಪಶು ವಿವಿಗೆ ಸಿಬ್ಬಂದಿಗಳೇ ಇಲ್ಲ, 2 ಸಾವಿರ ಹುದ್ದೆಗಳು ಖಾಲಿ, ಆದರೂ ವಿಶ್ವವಿದ್ಯಾಲಯ ರನ್​ ಆಗ್ತಿದೆ!

ಗಡಿ ಜಿಲ್ಲೆ ಬೀದರ್ ನಲ್ಲಿರುವ ರಾಜ್ಯದ ಏಕೈಕ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಈಗ ಅನಾಥ ಪ್ರಜ್ಞೆ ಕಾಡತೊಡಗಿದೆ. ಈ ವಿಶ್ವವಿದ್ಯಾಲಯ ಆರಂಭವಾದಾಗಿನಿಂದಲೂ ಇಲ್ಲಿ ವಿವಿಧ ಹುದ್ದೆಗಳನ್ನ ಭರ್ತಿ ಮಾಡಿಲ್ಲ. ಇಲ್ಲಿ ಆಫೀಸರ್ಸ್, ಟೀಚಿಂಗ್‌, ಟೆಕ್ನಿಕಲ್‌, ನಾನ್‌ ಟಿಚೀಂಗ್‌ ಹುದ್ದೆಗಳು ಸೇರಿ 2 ಸಾವಿರ ಹುದ್ದೆಗಳು ಖಾಲಿ ಇವೆ. ಹೀಗಾಗಿ ಎಲ್ಲಾ ಕೆಲಸವನ್ನೂ ಕೂಡಾ ಇರುವ ಸಿಬ್ಬಂದಿಯಿಂದಲೇ ಮಾಡಿಸಬೇಕಾಗಿರುವುದರಿಂದ ಕೆಲಸದ ಒತ್ತಡ ಜಾಸ್ತಿಯಾಗಿದ್ದು ಸಮಸ್ಯೆಯಾಗುತ್ತಿದೆ ಎಂದು ಕುಲಪತಿ ಹೇಳುತ್ತಾರೆ.

5 ಸ್ಟಾರ್ ಗ್ರೇಡ್ ಹೊಂದಿರುವ ಬೀದರ್ ಪಶು ವಿವಿಗೆ ಸಿಬ್ಬಂದಿಗಳೇ ಇಲ್ಲ, 2 ಸಾವಿರ ಹುದ್ದೆಗಳು ಖಾಲಿ, ಆದರೂ ವಿಶ್ವವಿದ್ಯಾಲಯ ರನ್​ ಆಗ್ತಿದೆ!
ಬೀದರ್ ಪಶು ವಿವಿಗೆ ಸಿಬ್ಬಂದಿಗಳೇ ಇಲ್ಲ, 2 ಸಾವಿರ ಹುದ್ದೆಗಳು ಖಾಲಿ, ಆದರೂ ವಿಶ್ವವಿದ್ಯಾಲಯ ರನ್​ ಆಗ್ತಿದೆ!
ಸುರೇಶ ನಾಯಕ
| Updated By: ಸಾಧು ಶ್ರೀನಾಥ್​|

Updated on:Oct 18, 2023 | 1:40 PM

Share

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸಿಬ್ಬಂದಿಯ ಕೊರತೆ ಕಾಡುತ್ತಿದೆ. ವಿಶ್ವವಿದ್ಯಾಲಯದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇರುವ ಪರಿಣಾಮವಾಗಿ ವ್ಯವಸ್ಥೆ ಹಳ್ಳಹಿಡಿಯುತ್ತಿದೆ. ದೇಶದಲ್ಲಿಯೇ ಅತ್ಯುತ್ತಮ 5 ಸ್ಟಾರ್ ಗ್ರೇಡ್ ಹೊಂದಿರು ವಿಶ್ವವಿದ್ಯಾಲಯಕ್ಕೆ ಸಿಬ್ಬಂದಿಗಳೇ ಇಲ್ಲದಿರುವುದು ಸಾರ್ವಜನಿಕರಿಗೆ ಅಶ್ಚರ್ಯವನ್ನುಂಟುಮಾಡಿದೆ… ಪಶು ವಿವಿನಲ್ಲಿ ಬೋಧಕ ಬೋಧಕೇತರ 1648 ಹುದ್ದೆಗಳು ಖಾಲಿ… ಭೊಧನೆ, ಇನ್ನಿತರೆ ಚಟುವಟಿಕೆಗಳಿಗೆ ತೊಂದರೆ… ಈ ಹುದ್ದೆಗಳು ತುಂಬದೆ ಹೋದರೆ ನಾನಾ ಚಟುವೆಟಿಗಳಿಗೆ ತೊಂದರೆ…ವಿಶ್ವವಿದ್ಯಾಲಯದ ಮಾನ್ಯತೆ ರದ್ದಾಗುವ ಸಾಧ್ಯತೆ.. ಹೌದು ಗಡಿ ಜಿಲ್ಲೆ ಬೀದರ್ ನಲ್ಲಿರುವ ರಾಜ್ಯದ ಏಕೈಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಜಾನಿಗಳ ವಿಶ್ವವಿದ್ಯಾಲಯಕ್ಕೆ ಈಗ ಅನಾಥಪ್ರಜ್ಞೆ ಕಾಡತೊಡಗಿದೆ.

ಈ ವಿಶ್ವವಿದ್ಯಾಲಯ ಆರಂಭವಾದಾಗಿನಿಂದಲೂ ಇಲ್ಲಿ ವಿವಿಧ ಹುದ್ದೆಗಳನ್ನ ಭರ್ತಿ ಮಾಡಿಲ್ಲ. ಹೀಗಾಗಿ ವಿಶ್ವವಿದ್ಯಾಲಯದಲ್ಲಿ ಸುಮಾರು 1648 ಹುದ್ದೆಗಳು ಖಾಲಿಯಿದ್ದು ಇಲ್ಲಿನ ಕೆಲಸ ಕಾರ್ಯಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಐದು ಕಡೆಗಳಲ್ಲಿ ಪಶುವೈದ್ಯಕೀಯ ಕಾಲೇಜುಗಳಿವೆ. ಅಥಣಿ ಮತ್ತು ಪುತ್ತೂರಗಳಲ್ಲಿ ಈಗ ಹೊಸದಾಗಿ ಪಶು ವೈದ್ಯಕೀಯ ಕಾಲೇಜುಗಳು ಆರಂಭವಾಗಿವೆ. ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಈಗ ನೂರಾರು ಸಂಖ್ಯೆಯಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು, ಪಿಎಚ್‌ಡಿ ಓದುತ್ತಿರುವವರು, ಡಿಪ್ಲೋಮಾ ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಹಾವೇರಿ, ಹಾಸನ ಸೇರಿದಂತೆ ರಾಜ್ಯದ ಐದು ಕಡೆಗಳಲ್ಲಿ ಪಾಲಿಟೆಕ್ನಿಕ್‌ ಕೇಂದ್ರಗಳಿವೆ. ಮಂಗಳೂರಿನಲ್ಲಿ ಹೈನುಗಾರಿಕಾ ವಿಜ್ಞಾನ ಮಹಾವಿದ್ಯಾಲಯವಿದೆ. ಈ ವಿಶ್ವವಿದ್ಯಾಲಯದಲ್ಲಿ ಆಫೀಸರ್ಸ್, ಟೀಚಿಂಗ್‌, ಟೆಕ್ನಿಕಲ್‌, ನಾನ್‌ ಟಿಚೀಂಗ್‌ ಹುದ್ದೆಗಳು ಸೇರಿ ಒಟ್ಟು 1648 ಖಾಲಿ ಇವೆ. ಹೀಗಾಗಿ ಎಲ್ಲಾ ಕೆಲಸವನ್ನೂ ಕೂಡಾ ಇರುವ ಸಿಬ್ಬಂದಿಯಿಂದಲೇ ಮಾಡಿಸಬೇಕಾಗಿರುವುದರಿಂದ ಕೆಲಸದ ಒತ್ತಡ ಜಾಸ್ತಿಯಾಗಿದ್ದು ಸಮಸ್ಯೆಯಾಗುತ್ತಿದೆ ಎಂದು ಕುಲಪತಿ ಹೇಳುತ್ತಿದ್ದಾರೆ.

ಬೀದರ್ ನಂದಿನಗರದಲ್ಲಿರುವ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಜಾನಿಗಳ ವಿಶ್ವವಿದ್ಯಾಲಯ ದೇಶದಲ್ಲಿಯೇ 12 ನೇ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆ ಇದರದ್ದಾಗಿದೆ. ಇಲ್ಲಿ ಓದಿದ ಹಲವಾರು ವಿದ್ಯಾರ್ಥಿ ವಿದ್ಯಾರ್ಥಿನೀಯರು ರಾಜ್ಯದಲ್ಲಿ ಮೂಲೇ ಮೂಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಜ್ಜಾನಿಗಳೂ ಕೂಡಾ ಆಗಿದ್ದಾರೆ. ಆದರೆ ಇಂತಹ ವಿವಿಯಲ್ಲಿ ಸಾವಿರಾರು ಹುದ್ದೆಗಳು ಖಾಲಿಯಿದ್ದು ಆಡಳಿತ ಯಂತ್ರವೇ ಇಲ್ಲಿ ಕುಸಿಯುತ್ತಿದೆ. ಇದರ ಜೊತೆಗೆ ಜಿಲ್ಲೆಯಲ್ಲಿರುವ ಪಶು ಸಂಗೋಪನಾ ಇಲಾಖೆಯಲ್ಲಿಯೂ ಕೂಡಾ ಸಿಬ್ಬಂದಿಯ ಕೊರತೆಯಿದೆ. ನೂರಕ್ಕೂ ಹೆಚ್ಚು ಹುದ್ದೆಗಳು ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿಯಿವೆ.

ಹೀಗಾಗಿ ರೈತರು ತಾವು ಚಿಕಿತ್ಸೆಗೆ ತಂದ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆಯೇ ಸಿಗುತ್ತಿಲ್ಲ. ಸಾಮಾನ್ಯವಾಗಿ ಬೇಸಿಗೆಕಾಲ, ಮಳೆಗಾಲದಲ್ಲಿ ಜಾನುವಾರುಗಳಿಗೆ ನಾನಾ ರೋಗಗಳು ಕಾಣಿಸಿಕೊಳ್ಳುತ್ತವೆ. ಅವುಗಳ ಆರೈಕೆ ಮತ್ತು ಚಿಕಿತ್ಸೆಗೆ ಪಶು ಇಲಾಖೆ ಪಾತ್ರ ಬಹಳ ಮುಖ್ಯವಾಗಿದೆ. ಆದರೆ 114 ಆಸ್ಪತ್ರೆಗಳ ಪೈಕಿ ಒಬ್ಬೊಬ್ಬ ವೈದ್ಯರು ತಲಾ ಎರಡು ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ. ಎಮ್ಮೆ, ಆಕಳು, ಕುರಿ, ಮೇಕೆ ಸೇರಿದಂತೆ ಲಕ್ಷಾಂತರ ಜಾನುವಾರುಗಳಿವೆ. ಅವುಗಳ ಚಿಕಿತ್ಸೆಗೆ ತೊಂದರೆಯಾಗುತ್ತಿದೆ.

ಇದರ ಜೊತೆಗೆ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಪಶು ಸಂಗೋಪನಾ ಇಲಾಖೆ ಜಾರಿಗೆ ತರುತ್ತಿರುವ ನಾನಾ ಯೋಜನೆಗಳ ಅನುಷ್ಠಾನ ಕೂಡ ಕಷ್ಟಕರವಾಗುತ್ತಿದೆ. ಇನ್ನು ವಿಶ್ವ ವಿದ್ಯಾಲಯದಲ್ಲಿ ಬೀದರ್ ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಟೀಚಿಂಗ್ ಹುದ್ದೆಗಳೇ ಇಲ್ಲಿ ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ಪಾಠಕ್ಕೂ ಕೂಡಾ ತೊಂದರೆಯಾಗುತ್ತಿದೆ. ಹೀಗಾಗಿ ಖಾಲಿ ಇರುವ ಹುದ್ದೆಗಳನ್ನ ಬೇಗ ಭರ್ತಿ ಮಾಡಿ ಎಂದು ಇಲ್ಲಿನ ಜನರು ಸರಕಾರಕ್ಕೆ ವಿನಂತಿಸುತ್ತಿದ್ದಾರೆ.

ಸಿಬ್ಬಂದಿಯ ಕೊರತೆಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ನಾನಾ ಯೋಜನೆಗಳ ಅನುಷ್ಠಾನಕ್ಕೂ ಕೂಡ ಹಿನ್ನಡೆಯಾಗುತ್ತಿದೆ. ವೈದ್ಯರು ಮತ್ತು ಸಿಬ್ಬಂದಿ ಇಲ್ಲದೇ ಬಹುತೇಕ ಚಿಕಿತ್ಸಾಲಯಗಳಿಗೆ ಬೀಗ ಹಾಕಲಾಗಿದೆ. ವಿಶ್ವ ವಿದ್ಯಾಲಯ ಹಾಗೂ ಪಶು ಇಲಾಖೆಯಲ್ಲಿ ಅಗತ್ಯ ವೈದ್ಯರು ಹಾಗೂ ಸಿಬ್ಬಂದಿ ನೇಮಕವಾದರೆ ಇಲಾಖೆ ಕೆಲಸಗಳು ಸರಾಗವಾಗಿ ನಡೆಯಲು ಸಾಧ್ಯವಾಗುತ್ತದೆ.

Published On - 1:39 pm, Wed, 18 October 23

4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ