Bidar: ಹಾಸ್ಟೆಲ್​ ಕಟ್ಟಡದಿಂದ ಜಿಗಿದು MBBS ವಿದ್ಯಾರ್ಥಿ ಶ್ರೀರಾಮ್ ಆತ್ಮಹತ್ಯೆ

ಇನ್ನೇನು ಓದು ಮುಗಿದು ವೈದ್ಯನಾಗಬೇಕು ಎನ್ನುವಷ್ಟರಲ್ಲೇ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಸಾವಿನ ಮನೆ ಸೇರಿದ್ದಾನೆ.

Bidar: ಹಾಸ್ಟೆಲ್​ ಕಟ್ಟಡದಿಂದ ಜಿಗಿದು MBBS ವಿದ್ಯಾರ್ಥಿ ಶ್ರೀರಾಮ್ ಆತ್ಮಹತ್ಯೆ
Edited By:

Updated on: Feb 28, 2023 | 9:13 AM

ಬೀದರ್: ಇನ್ನೇನು ಓದು ಮುಗಿದು ವೈದ್ಯನಾಗಬೇಕು ಎನ್ನುವಷ್ಟರಲ್ಲೇ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಸಾವಿನ ಮನೆ ಸೇರಿದ್ದಾನೆ. ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ (MBBS Student) ಶ್ರೀರಾಮ್ ಹಾಸ್ಟೆಲ್​ ಕಟ್ಟಡದಿಂದ ಜಿಗಿದು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾನೆ. ಈ ಘಟನೆ ಇಂದು (ಫೆಬ್ರುವರಿ 28) ಬೀದರ್​ನ(Bidar) ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಇದನ್ನೂ ಓದಿ: ಬೀದರ್: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಬೆಂಗಳೂರು: ನಗರದ ನಾಯಂಡಹಳ್ಳಿ ಪೆಟ್ರೊಲ್ ಬಂಕ್ ಬಳಿಯ ಮನೆಯಲ್ಲಿಯೊಂದರಲ್ಲಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಣಕಾಸಿನ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಲಿಯಾಖತ್ ಅಲಿಖಾನ್​ನನ್ನು( 44) ಕೊಚ್ಚಿ ಕೊಲೆಗೈದಿದ್ದಾರೆ. ಸ್ನೇಹಿತರಾದ ವಾಸೀಂ ಮತ್ತು ಜೋಹರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಲೇಔಟ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಗಳ ಕೊಲೆಯಲ್ಲಿ ಅಂತ್ಯ

ಬೀದರ್: ಹಳೆಯ ದ್ವೇಷಕ್ಕೆ ಯುವಕನನ್ನು ಕತ್ತಿಯಿಂದ ಹಿರಿದು ಬರ್ಬರವಾಗಿ ಕೊಲೆ (Murder) ಮಾಡಿದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ತ್ರಿಪುರಾಂತ ಬಳಿ ನಡೆದಿದೆ. ಆನಂದ್‌ ಪುಲೆ (26) ಭೀಕರವಾಗಿ ಕೊಲೆಯಾದ ದುರ್ದೈವಿ. ಇಬ್ಬರು ಯುವಕರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಉದಯ್ ಹಾಗೂ ಆತನ ಗುಂಪು ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.