ಬೀದರ್: ಸಂತಪುರ ಪೊಲೀಸರಿಂದ 592 ಕೆಜಿ ಗಾಂಜಾ ಜಪ್ತಿ, ನಾಲ್ವರ ಬಂಧನ

ಮುಟ್ಟುಗೋಲು ಹಾಕಿಕೊಂಡಿರುವ ಗಾಂಜಾದ ಮೌಲ್ಯ ₹ 59.20 ಲಕ್ಷ ಎಂದು ಅಂದಾಜಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಿಕ್ಕಿದ್ದು ಈ ವರ್ಷದ ದಾಖಲೆ ಎನಿಸಿದೆ.

ಬೀದರ್: ಸಂತಪುರ ಪೊಲೀಸರಿಂದ 592 ಕೆಜಿ ಗಾಂಜಾ ಜಪ್ತಿ, ನಾಲ್ವರ ಬಂಧನ
ಸಂತಪುರ ಠಾಣೆ ಪೊಲೀಸರು ವಶಪಡಿಸಿಕೊಂಡಿರುವ ಗಾಂಜಾ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 08, 2021 | 6:58 PM

ಬೀದರ್: ಅಕ್ರಮವಾಗಿ ಸಾಗಿಸುತ್ತಿದ್ದ 592 ಗಾಂಜಾ ಜಪ್ತಿ ಮಾಡಿರುವ ಬೀದರ್ ಜಿಲ್ಲೆ ಔರಾದ್ ತಾಲ್ಲೂಕಿನ ಸಂತಪುರ ಠಾಣೆ ಪೊಲೀಸರು ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳು ಹೈದರಾಬಾದ್​ನಿಂದ ಕಮಲನಗರ ಕಡೆಗೆ ಗಾಂಜಾ ಸಾಗಿಸುತ್ತಿದ್ದರು.

ಮುಟ್ಟುಗೋಲು ಹಾಕಿಕೊಂಡಿರುವ ಗಾಂಜಾದ ಮೌಲ್ಯ ₹ 59.20 ಲಕ್ಷ ಎಂದು ಅಂದಾಜಿಸಲಾಗಿದೆ. ಬಂಧಿತರನ್ನು ಓಂಕಾರ್, ಅನಿಲ್​ಕುಮಾರ್, ಹಾಜಿಪಾಶಾ, ಅಸ್ಲಾಂ ಬಂಧಿತರು. ಇಷ್ಟು ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಿಕ್ಕಿದ್ದು ಈ ವರ್ಷದ ದಾಖಲೆ ಎನಿಸಿದೆ. ತಲೆಮರೆಸಿಕೊಂಡಿರುವ ಇತರ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಗಾಂಜಾ ಜಪ್ತಿ ಮಾಹಿತಿ ನೀಡುತ್ತಿರುವ ಪೊಲೀಸರು.

ಗಾಂಜಾ ನಶೆಯಲ್ಲಿ ರಸ್ತೆ ಬದಿ ನಿಂತಿದ್ದ ವಾಹನಗಳ ಗಾಜು ಪುಡಿ ಪುಡಿ ಕಳೆದ ಕೆಲ ದಿನಗಳ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡನೋರ್ವನ ಅಟ್ಟಹಾಸಕ್ಕೆ 5 ವಾಹನಗಳು ಜಖಂ ಆಗಿದ್ದ ಘಟನೆ ನಡೆದಿತ್ತು. ಹುಡುಗಿ ಕೈ ಕೊಟ್ಳು ಅಂತ ಕುಡಿದ ಮತ್ತಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಗಾಜನ್ನು ಪುಡಿ ಪುಡಿ ಮಾಡಿ ಯುವಕನೋರ್ವ ವಿಕೃತಿ ಮೆರೆದಿದ್ದ. ಅದರಂತೆ ಮತ್ತೊಂದು ಘಟನೆ ನಡೆದಿದೆ. ಗಾಂಜಾ ನಶೆಯಲ್ಲಿದ್ದ ಪುಂಡರು ಬೆಂಗಳೂರಿನಲ್ಲಿ ಅಟ್ಟಹಾಸ ಮೆರೆದಿದ್ದಾರೆ.

ನಗರದ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ತಡರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ 5ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿ ಪುಡಿ ಮಾಡಿ ಎಸ್ಕೇಪ್ ಆಗಿದ್ದಾರೆ. ಇದೇ ಏರಿಯಾದ ಮೂವರು ಪುಂಡರು ಗಾಂಜಾ ನಶೆಯಲ್ಲಿ ವಾಹನಗಳ ಗಾಜನ್ನು ಪುಡಿ ಪುಡಿ ಮಾಡಿದ್ದಾರೆ. ಸ್ಥಳೀಯರ ವಿರೋಧ ಹಿನ್ನೆಲೆ ಕಲ್ಲುತೂರಿ ಪುಂಡರು ಪರಾರಿಯಾಗಿದ್ದಾರೆ. ಪುಂಡರ ಅಟ್ಟಹಾಸದ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಸಿ ಟಿವಿ ದೃಶ್ಯಾವಳಿ ವಶಕ್ಕೆ ಪಡೆದು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

(Police seized 592 kg ganja in santapur of Aurad)

ಇದನ್ನೂ ಓದಿ: ಬೀದರ್: ಸಮಗ್ರ ಕೃಷಿಯ ಜತೆಗೆ ವಿವಿಧ ಬಗೆಯ ಸಸಿಗಳನ್ನು ಬೆಳೆಸಿದ ರೈತ; ತಿಂಗಳಿಗೆ ಲಕ್ಷ ರೂಪಾಯಿ ಸಂಪಾದನೆ

ಇದನ್ನೂ ಓದಿ: ಬೀದರ್: 15 ಲಕ್ಷ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಲೇಡಿ ತಹಶೀಲ್ದಾರ್!

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ