ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನ ಕೊಲೆ

ಔರಾದ್ ತಾಲೂಕಿನ ಕರಂಜಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಳೆದ ಏಳು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ವಿಜಯ್​ ಕುಮಾರ್​ಗೆ ಮದುವೆಯಾಗಿದ್ದು, ಗಂಡ ಹೆಂಡತಿ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಅಲ್ಲದೇ ವಿಧವಾ ವಿಚ್ಚೇದನಕ್ಕೂ ಕೂಡಾ ಇವರ ಹೆಂಡತಿ ಕೋರ್ಟ್​ನಲ್ಲಿ ಅರ್ಜಿಹಾಕಿದ್ದಾರೆ.

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನ ಕೊಲೆ
ವಿಜಯ್ ಕುಮಾರ್ ಧೋಂಡಿಬಾ ಟಿಳೇಕರ್ (49)
Follow us
TV9 Web
| Updated By: preethi shettigar

Updated on: Nov 10, 2021 | 3:17 PM

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನರಸಿಂಗ್​ಪುರ ತಾಂಡಾ ಬಳಿ ನಡೆದಿದೆ. ಮೊನ್ನೆ (ನವೆಂಬರ್ 8, ಸೋಮವಾರ) ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯ್ ಕುಮಾರ್ ಧೋಂಡಿಬಾ ಟಿಳೇಕರ್ (49) ರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇವರು ಔರಾದ್ ತಾಲೂಕಿನ ಕರಂಜಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಳೆದ ಏಳು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ವಿಜಯ್​ ಕುಮಾರ್​ಗೆ ಮದುವೆಯಾಗಿದ್ದು, ಗಂಡ ಹೆಂಡತಿ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಅಲ್ಲದೇ ವಿಧವಾ ವಿಚ್ಚೇದನಕ್ಕೂ ಕೂಡಾ ಇವರ ಹೆಂಡತಿ ಕೋರ್ಟ್​ನಲ್ಲಿ ಅರ್ಜಿಹಾಕಿದ್ದಾರೆ.

ವಿಜಯ್ ಕುಮಾರ್ ಪತ್ನಿ ಬೀದರ್​ನಲ್ಲಿಯೇ ವಾಸವಾಗಿದ್ದಾರೆ. ಆದರೆ ಕೊಲೆಯಾದ ವಿಜಯ್​ ಕುಮಾರ್ ಔರಾದ್ ಪಟ್ಟಣದ ಲಿಡ್ಕರ್ ಕಾಲೋನಿಯಲ್ಲಿ ವಾಸವಾಗಿದ್ದರು. ಇನ್ನೂ ಮೊದಲನೆಯ ಹೆಂಡತಿಗೆ ವಿಚ್ಚೇದನ ಕೊಟ್ಟು ಎರಡನೇಯ ಮದುವೆಯಾಗಲು ವಿಜಯ್​ ಕುಮಾರ್​ ತಯಾರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಅಷ್ಟರಲ್ಲಾಗಲೇ ವಿಜಯ್​ ಕುಮಾರ್ ಭೀಕರವಾಗಿ ಹತ್ಯೆಯಾಗಿದ್ದಾರೆ. ಇನ್ನೂ ಕೊಲೆಯಾದ ವಿಜಯ್​ ಕುಮಾರ್ ವಿಪರಿತವಾಗಿ ಕುಡಿಯುತ್ತಿದ್ದರು ಎಂದು ಹೇಳಲಾಗುತ್ತಿದೆ ಮತ್ತು ಕೌಟುಂಬಿಕ ಕಲಹವೇ ಇವರ ಕೊಲೆಗೆ ಕಾರಣವಾಗಿರಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಔರಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗಾರರನ್ನು ಹಿಡಿಯಲು ಪೋಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪೊಲೀಸ್ ಪೇದೆ ಮಗನ ಬರ್ಬರ ಕೊಲೆ ಪ್ರಕರಣ; 6 ಆರೋಪಿಗಳು ಅರೆಸ್ಟ್

Murder: ರಾಡ್‌ನಿಂದ ಪತಿ ಹತ್ಯೆಗೈದು ಪೊಲೀಸರ ಮುಂದೆ ಶರಣಾದ 2ನೇ ಪತ್ನಿ, ಕೊಲೆಯ ಹಿಂದೆ ಆಸ್ತಿ ಕಬಳಿಕೆ ಆರೋಪ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು