ಬೀದರ್: ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ ಆರೋಪ, ಖಾಸಗಿ ಶಾಲೆ ಶಿಕ್ಷಕ ಅರೆಸ್ಟ್

ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರೆಂಬ ನೆಪವೊಡ್ಡಿ ಶಿಕ್ಷಕ ವಿದ್ಯಾರ್ಥಿಗಳ ಮೇಳೆ ಹಲ್ಲೆ ಮಾಡಿದ್ದರು ಎಂದು ಆರೋಪಿಸಿ ಶಿಕ್ಷಕನ ವಿರುದ್ಧ ಹುಮ್ನಾಬಾದ್​ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ಪೋಷಕರ ದೂರು ಆಧರಿಸಿ ಶಿಕ್ಷಕನನ್ನು ಬಂಧಿಸಲಾಗಿದೆ.

ಬೀದರ್: ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ ಆರೋಪ, ಖಾಸಗಿ ಶಾಲೆ ಶಿಕ್ಷಕ ಅರೆಸ್ಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 19, 2023 | 12:02 PM

ಬೀದರ್, ಡಿ.19: ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ (Assault) ಮಾಡಿದ ಆರೋಪದ ಮೇಲೆ ಶಿಕ್ಷಕನನ್ನು (Teacher) ಅರೆಸ್ಟ್ ಮಾಡಲಾಗಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್​ ಖಾಸಗಿ ಶಾಲೆ ಶಿಕ್ಷಕನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರೆಂಬ ನೆಪವೊಡ್ಡಿ ಶಿಕ್ಷಕ ವಿದ್ಯಾರ್ಥಿಗಳ ಮೇಳೆ ಹಲ್ಲೆ ಮಾಡಿದ್ದರು ಎಂದು ಆರೋಪಿಸಿ ಶಿಕ್ಷಕನ ವಿರುದ್ಧ ಹುಮ್ನಾಬಾದ್​ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ಪೋಷಕರ ದೂರು ಆಧರಿಸಿ ಶಿಕ್ಷಕನನ್ನು ಬಂಧಿಸಲಾಗಿದೆ.

ಹುಮ್ನಾಬಾದ್ ಗ್ರಾಮದ ನಗರೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದೈಹಿಕ ಶಿಕ್ಷಕರಾದ ರಮೇಶ್ ಎಂಬುವವರು 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹೊಡೆದಿದ್ದರು. ಮಕ್ಕಳು ಗಲಾಟೆ ಮಾಡುತ್ತಿದ್ದಾರೆ ಎಂದು ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದರು. ಅಲ್ಲದೆ ಯಾರಿಗಾದರು ಈ ವಿಚಾರ ಹೇಳಿದರೆ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಕೂಡ ಹಾಕಿದ್ದರು. ಮಕ್ಕಳಿಗೆ ಆದ ಗಾಯಗಳನ್ನು ಗಮನಿಸಿ ಪೋಷಕರು ಠಾಣೆಯಲ್ಲಿ ದೂರು ದಾಖಲಿಸಿದ್ದು ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ.

ಪತ್ನಿ ಅಕ್ರಮ ಸಂಬಂಧ, ಪತಿ ಆತ್ಮಹತ್ಯೆ

ಪತ್ನಿ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದಾನೆ. ಬೆಂಗಳೂರಿನ ಸೋಲದೇವನ ಹಳ್ಳಿ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತ್ನಿ ಶಿಲ್ಪಾ, ಬಾಯ್​ಫ್ರೆಂಡ್ ಸಂಜು ಜೊತೆಗಿದ್ದ ಫೋಟೋ, ಡೆತ್​ನೋಟ್ ಸ್ಟೇಟಸ್​ ಹಾಕಿ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. 18 ವರ್ಷಗಳ ಹಿಂದೆ ರಮೇಶ್, ಶಿಲ್ಪಾ ವಿವಾಹವಾಗಿದ್ದರು. ದಂಪತಿಗೆ ಸಂಜು ಫ್ಯಾಮಿಲಿ ಫ್ರೆಂಡ್ ಆಗಿದ್ದು, ಹೀಗಾಗಿ ಶಿಲ್ಪಾ ಜೊತೆ ಸಲುಗೆಯಿಂದ ಇದ್ದ ಎನ್ನಲಾಗಿದೆ. ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ಆತ್ಮಹತ್ಯೆ ಶರಣಾಗಿದ್ದಾನೆ. ಸದ್ಯ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಇದನ್ನೂ ಓದಿ: ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಜಯಂತಿ; ಅರ್ಚಕ ಸೇರಿದಂತೆ ಐವರಿಗೆ ಅಂಗರಕ್ಷಕರ ನೇಮಕ

ಅಕ್ರಮ ಗೋಮಾಂಸ ಸಂಗ್ರಹ, ಆಕ್ರೋಶ

ಅಕ್ರಮ ಗೋಮಾಂಸ ಹಾಗೂ ಮೂಳೆಗಳ ಸಂಗ್ರಹಕ್ಕೆ ಹಿಂದೂ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಮಂಡ್ಯದ ಗ್ರಾಮಾಂತರ ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, FIR ದಾಖಲಿಸಿಕೊಳ್ಳದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಕಿಡಿಕಾರಿದ್ರು. ಹೋರಾಟ ವಿಕೋಪಕ್ಕೆ ಹೋಗ್ತಿದ್ದಂತೆ ಪೊಲೀಸರು FIR ದಾಖಲಿಸಲು ಸಮ್ಮತಿ ನೀಡಿದ್ರು. ನಂತರ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಕೈಬಿಟ್ಟರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ