Humnabad News: ಶಾಲಾ ಆವರಣಕ್ಕೆ ಮಳೆ ನೀರು; ವಿದ್ಯಾರ್ಥಿಗಳು ಪರದಾಟ, ಪೋಷಕರ ಆಕ್ರೋಶ

ಕಳೆದ ಹದಿನೈದು ದಿನದಿಂದ ಶಾಲಾ ಆವರಣದಲ್ಲಿ ನೀರು ನಿಂತುಕೊಂಡಿದ್ದು, ಅದನ್ನ ಕ್ಲೀನ್ ಮಾಡುವ ಗೋಜಿಗೆ ಯಾರು ಹೋಗಿಲ್ಲ. ಇದು ಮಕ್ಕಳು, ಪಾಲಕರ ಜೊತೆಗೆ ಶಿಕ್ಷಕರಿಗೂ ಕೂಡಾ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Humnabad News: ಶಾಲಾ ಆವರಣಕ್ಕೆ ಮಳೆ ನೀರು; ವಿದ್ಯಾರ್ಥಿಗಳು ಪರದಾಟ, ಪೋಷಕರ ಆಕ್ರೋಶ
ಶಾಲಾ ಆವರಣದಲ್ಲಿ ನೀರು.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 23, 2022 | 1:54 PM

ಬೀದರ್: ವಾರದ ಹಿಂದೆ ಸುರಿದ ಭಾರಿ ಮಳೆ (Rain) ಯಿಂದಾಗಿ ಇಡೀ ಶಾಲೆಯ ಆವರಣದಲ್ಲಿ ನೀರು ನಿಂತ್ತುಕೊಂಡಿದ್ದು, ಮಕ್ಕಳು ಶಾಲೆಗೆ ಹೋಗಲಾಗದೆ ಪರದಾಡಿರುವಂತಹ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಸಿಂದಬಂದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (Government School) ಯಲ್ಲಿ ನಡೆದಿದೆ. ಮಕ್ಕಳು ಪ್ರತಿದಿನವೂ ಆತಂಕದಲ್ಲೇ ಶಾಲೆಗೆ ಬರುವಂತ್ತಾಗಿದ್ದು, ಇಡೀ ಶಾಲೆಯ ಆವರಣದ ತುಂಬೆಲ್ಲ ನೀರು ತುಂಬಿಕೊಂಡಿದೆ. ಶಾಲೆಯ ಒಳಗಡೆ ಹೋಗಲಾಗದ್ದಕ್ಕೆ ಶಿಕ್ಷಕರು ಐದು ದಿನ ಶಾಲೆಗೆ ರಜೆ ನೀಡಿದ್ದಾರೆ. ಸೋರುತ್ತಿರುವ ಕಟ್ಟಡದಲ್ಲಿಯೇ ಶಿಕ್ಷಕರು ಮಕ್ಕಳಿಗೆ ಪಾಠ ಮಾಡುತ್ತಿದ್ದು, ಭಯದಲ್ಲಿಯೇ ಪಾಠ ಕೇಳಬೇಕಾದ ಸ್ಥಿತಿ ಬಂದಿದೆ. ಈ ಶಾಲೆಯಲ್ಲಿ ಇನ್ನೂರಕ್ಕೂ ಹೆಚ್ಚು ಮಕ್ಕಳಿದ್ದು, ಒಂದರಿಂದ ಏಳನೇಯ ತರಗತಿಯವರೆಗೆ ಮಕ್ಕಳು ಓದಲು ಇಲ್ಲಿ ಅವಕಾಶವಿದೆ. ಆದರೆ ಮಕ್ಕಳು ಶಾಲೆಗೆ ಬರಲು ಹಿಂದೆಟು ಹಾಕುವಂತ ಸ್ಥಿತಿ ಎದುರಾಗಿದೆ.

ಪಾಲಕರ ಆಕ್ರೋಶ:

ಮಳೆಗಾಲ ಆಗಿರುವುದರಿಂದ ಪದೆ ಪದೆ ಮಳೆಯಾಗುತ್ತದೆ. ಹೀಗಾಗಿ ಶಾಲೆಯ ಆವರಣದಲ್ಲಿ ನೀರು ಬಂದು ನಿಲ್ಲುತ್ತದೆ. ಹಾಗಂತ ಪದೇ ಪದೇ ಶಾಲೆಗೆ ರಜೆ ಕೊಟ್ಟರೆ ಮಕ್ಕಳ ಶಿಕ್ಷಣದ ಮೇಲೆ ಹೊಡೆತ ಕೊಡುತ್ತದೆಂದು ಮಕ್ಕಳ ಪಾಲಕರು ಕಳವಳ ವ್ಯಕ್ತ ಪಡಿಸುತ್ತಿದ್ದಾರೆ. ಇನ್ನೂ ಶಾಲೆಯ ಕೊಠಡಿಗಳು ಸಹ ಬಿರುಕು ಬಿಟ್ಟಿದ್ದು, ಮಳೆಯಾದರೆ ಕೊಠಡಿಗಳು ಸೊರುತ್ತಿವೆ. ಹೀಗಾಗಿ ಮಕ್ಕಳು ಅಂತಹ ಶಾಲಾ ಕೊಠಡಿಯಲ್ಲಿ ಕುಳಿತು ಪಾಠ ಕೆಳಲು ಭಯ ಪಡುವ ವಾತಾವರಣ ನಿರ್ಮಾಣವಾಗಿದೆ. ಜೊತೆಗೆ ಶಿಕ್ಷಕರ ಕೊರತೆಯೂ ಕೂಡಾ ಶಾಲೆಯಲ್ಲಿದೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿಲ್ಲ, ಆದರೆ ಈ ಶಾಲೆಯಲ್ಲಿ ಹತ್ತಾರು ಸಮಸ್ಯೆಗಳು ಮಕ್ಕಳನ್ನ ಕಾಡತೊಡಗಿವೆ. ಕಳೆದ ಹದಿನೈದು ದಿನದಿಂದ ಶಾಲಾ ಆವರಣದಲ್ಲಿ ನೀರು ನಿಂತುಕೊಂಡಿದ್ದು ಅದನ್ನ ಕ್ಲೀನ್ ಮಾಡುವ ಗೋಜಿಗೆ ಯಾರು ಹೋಗಿಲ್ಲ. ಇದು ಮಕ್ಕಳನ್ನ, ಪಾಲಕರನ್ನ ಜೊತೆಗೆ ಶಿಕ್ಷಕರಿಗೂ ಕೂಡಾ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ನಮ್ಮ ಸಮಸ್ಯೆಗೆ ಅಧಿಕಾರಿಗಳು ಸ್ಪಂದನೆ ನೀಡಿ ಎಂದು ಮಕ್ಕಳ ಪಾಲಕರು ವಿನಂತಿಸುತ್ತಿದ್ದಾರೆ.

ಸಮಸ್ಯೆಗೆ ಸ್ಪಂದಿಸದ ಶಿಕ್ಷಣ ಇಲಾಖೆ

ಇನ್ನು ಎಷ್ಟೋ ಸಲ ನೀರಿನಲ್ಲಿ ನಡೆದುಕೊಂಡು ಹೋಗುವಾಗ ಬಿದ್ದು ಬಟ್ಟೆ ಗಲೀಜು ಮಾಡಿಕೊಂಡು ಮಕ್ಕಳು ಶಾಲೆಗೆ ಹೋಗದೆ, ಮನೆಗೆ ಹೋಗಿರುವಂತಹ ಘಟನೆಗಳು ಸಹ ನಡೆದಿವೆ. ಈ ಸಮಸ್ಯೆ ಕುರಿತಾಗಿ ಪಂಚಾಯತ್​ನವರಾಗಿರಬಹುದು, ಶಿಕ್ಷಣ ಇಲಾಖೆಯವರು ಶಾಲಾ ಆವರಣದಲ್ಲಿ ನಿಂತಿರುವ ನೀರು ಹೊರ ಹೋಗಲು ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಈ ಸಮಸ್ಯೆ ಮಳೆಗಾಲ ಮುಗಿಯುವವರೆಗೂ ಇದೆ ರೀತಿಯಾಗಿ ನೀರು ನಿಂತುಕೊಂಡರೆ ಮಕ್ಕಳು ಶಾಲೆಗೆ ಬರೋದು ಹೇಗೆ, ಶಾಲೆಯಿಂದ ಮನೆಗೆ ಹೋಗುವುದು ಹೇಗೆಂದು ಮಕ್ಕಳ ಪಾಲಕರು ಪ್ರಶ್ನಿಸುತ್ತಿದ್ದಾರೆ.

ಸರಕಾರಿ ಶಾಲೆಗೆ ಹೋಗುವ ಮಕ್ಕಳಿಗೆ ಸರಕಾರ ಮೂಲಭೂತ ಸೌಲಭ್ಯಗಳನ್ನ ಕೊಡುತ್ತಿಲ್ಲ. ಸರಕಾರದಿಂದಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದಲೇ ಮಕ್ಕಳ ಹಕ್ಕುಗಳ ಉಲ್ಲಘನೆಯಾಗುತ್ತಿದ್ದರು ಯಾರು ಇದರ ಬಗ್ಗೆ ಮಾತನಾಡುತ್ತಿಲ್ಲ. ಇನ್ನು ಶಾಲೆಯ ಆವರಣದಲ್ಲಿ ನೀರು ಪದೇ ಪದೇ ನುಗ್ಗತ್ತಲಿದ್ದು, ಇದರಿಂದಾಗಿ ಮಕ್ಕಳಿಗೆ ಸಮಸ್ಯೆ ಆಗುತ್ತಲೇ ಇರುತ್ತದೆ. ಇದರಿಂದಾಗಿ ಮಕ್ಕಳಿಗೆ ಆ ಸಮಸ್ಯೆಯಿಂದ ಶಿಕ್ಷಣ ಇಲಾಕೆ ಮುಕ್ತಿ ಕೊಡಬೇಕಾಗಿದೆ.

ವರದಿ: ಸುರೇಶ್ ನಾಯಕ್, ಟಿವಿ 9, ಬೀದರ್

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?