ಬೀದರ್ನಲ್ಲಿ ಭೀಕರ ರಸ್ತೆ ಅಪಘಾತ; ಟ್ರಕ್-ಟಾಟಾ ಎಸ್ ಡಿಕ್ಕಿಯಾಗಿ ನಾಲ್ವರು ಸಾವು
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಐವರಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.
ಬೀದರ್, ಫೆ.28: ಇಂದು ಮುಂಜಾನೆ ಬೀದರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ. ಘಟನೆಯಲ್ಲಿ ಐದು ಜನರಿಗೆ ಗಾಯಗಳಾಗಿದ್ದು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.
ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರ್ ನಿಂದಾ ಹೈದ್ರಾಬಾದ್ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್-ಟಾಟಾ ಎಸಿ ನಡುವೆ ಡಿಕ್ಕಿಯಾಗಿದ್ದು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ದನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆಯ ಬೆದರಿಸಿ ಹಣ ಸುಲಿಗೆ ಪ್ರಕರಣ: ನಾಲ್ವರು ಸಂಚಾರಿ ಪೊಲೀಸರ ಅಮಾನತು
ರಸ್ತೆ ದಾಟುತ್ತಿದ್ದ ವೇಳೆ ಪಾದಚಾರಿಗಳಿಗೆ ಬೈಕ್ ಡಿಕ್ಕಿ, ಗಂಭೀರ ಗಾಯ
ಬೆಂಗಳೂರಿನ ಬ್ಯಾಟರಾನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿದ್ದು ಇಬ್ಬರು ಪಾದಚಾರಿಗಳಿಗೆ ಗಂಭೀರ ಗಾಯಗಳಾಗಿವೆ. ಮೈಸೂರು ರಸ್ತೆಯ ಗುಡ್ಡದಹಳ್ಳಿಯ ಗಿರಿಯಾಸ್ ಶೋರೂಮ್ ಬಳಿ ರಸ್ತೆ ದಾಟುತಿದ್ದ ಇಬ್ಬರು ಪಾದಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಇಬ್ಬರಿಗೂ ಗಾಯಗಳಾಗಿವೆ. ಘಟನೆ ಬಳಿಕ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
12 ಅಡಿ ಉದ್ದದ ಕಾಳಿಂಗ ಸರ್ಪ
ಶಿವಮೊಗ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮದಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಚಂದ್ರಶೇಖರಪ್ಪ ಅನ್ನೋರ ಮನೆಯ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದ ಹಾಗು 7.5 Kg ತೂಕವಿದ್ದ ಗಂಡು ಕಾಳಿಂಗ ಸರ್ಪವನ್ನ ಉರಗ ಸಂರಕ್ಷಕ ಬೆಳ್ಳೂರು ನಾಗರಾಜ ಅವರು ರಕ್ಷಣೆ ಮಾಡಿ, ಕಾಡಿಗೆ ಬಿಟ್ಟಿದ್ದಾರೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:21 am, Wed, 28 February 24