ಬೈಕ್​​ಗೆ ಸಾರಿಗೆ ಬಸ್​​ ಡಿಕ್ಕಿ: ಹುಮನಾಬಾದ್​​ನಲ್ಲಿ ದುರಂತ ಅಂತ್ಯ ಕಂಡ ಮಗ, ಚಿಕ್ಕಮ್ಮ

ಬೀದರ್ ಜಿಲ್ಲೆಯ ಕಬಿರಾಬಾದ್ ವಾಡಿ ಕ್ರಾಸ್ ಬಳಿ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಚಿಕ್ಕಮ್ಮ ಮತ್ತು ಮಗ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಇತ್ತ ಮುಂಡಗೋಡ ಬಳಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿಯ ಕಿಮ್ಸ್​​ಗೆ ರವಾನಿಸಲಾಗಿದೆ.

ಬೈಕ್​​ಗೆ ಸಾರಿಗೆ ಬಸ್​​ ಡಿಕ್ಕಿ: ಹುಮನಾಬಾದ್​​ನಲ್ಲಿ ದುರಂತ ಅಂತ್ಯ ಕಂಡ ಮಗ, ಚಿಕ್ಕಮ್ಮ
ಬಸ್​​-ಬೈಕ್​​ ನಡುವಿನ ಅಪಘಾತದಲ್ಲಿ ಮೃತ ಮಗ ಮತ್ತು ಚಿಕ್ಕಮ್ಮ
Image Credit source: Tv9 Kannada
Edited By:

Updated on: Jul 12, 2026 | 2:39 PM

ಮುಖ್ಯಾಂಶಗಳು

  • ಬೀದರ್​​ನ ಹುಮನಾಬಾದ್​​ನಲ್ಲಿ ಭೀಕರ ರಸ್ತೆ ಅಪಘಾತ
  • ಔಷಧಿ ಪಡೆದು ಹಿಂತಿರುಗುತ್ತಿದ್ದ ಚಿಕ್ಕಮ, ಮಗ ಸಾವು
  • ಮುಂಡಗೋಡ ಬಳಿ ಬಸ್​​-ಲಾರಿ ಡಿಕ್ಕಿ: ಐವರು ಗಂಭೀರ

ಬೀದರ್​/ ಮುಂಡಗೋಡ, ಜುಲೈ 12: ಸರ್ಕಾರಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್​​ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿರುವ ಘಟನೆ ಬೀದರ್​ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಬಿರಾಬಾದ್ ವಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ. ಮೃತರನ್ನು ದುಬಲಗುಂಡಿ ಗ್ರಾಮದ ಸವಾರ ಪವನ್(22) ಮತ್ತು ಅವರ ಚಿಕ್ಕಮ್ಮ ನರಸಮ್ಮ ಎಂದು ಗುರಿತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪವನ್‌ನ ತಲೆಗೆ ಭಾರಿ ಪ್ರಮಾಣದ ಗಾಯವಾಗಿರೋದು ಕಂಡುಬಂದಿದ್ದರೆ, ಹಿಂದೆ ಕುಳಿತಿದ್ದ ನರಸಮ್ಮ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಾಟಿಮದ್ದು ಹಾಕಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಅಪಘಾತ

ಕಾಮಾಲೆ ರೋಗಕ್ಕೆ ಔಷಧಿ ತೆಗೆದುಕೊಳ್ಳಲೆಂದು ಮನ್ನಾಏಖೇಳ್ಳಿ ಗ್ರಾಮಕ್ಕೆ ಹೋಗಿದ್ದ ಮಗ, ಚಿಕ್ಕಮ್ಮ ನಾಟಿಮದ್ದು ಹಾಕಿಸಿಕೊಂಡು ಹಿಂತಿರುಗುತ್ತಿದ್ದ ವೇಳೆ ಬೀದರ್-ಕಲಬುರಗಿ ಮಾರ್ಗದ ತಡೆರಹಿತ ಸಾರಿಗೆ ಬಸ್ ಬೈಕ್​​ಗೆ​ ಡಿಕ್ಕಿಯಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಹಳ್ಳಿಖೇಡ್‌ ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೀದರ್ ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ: ಕಂತೆ-ಕಂತೆ ಹಣ ನೋಡಿ ಉಪ ಲೋಕಾಯುಕ್ತರು ಶಾಕ್

ಬಸ್​-ಲಾರಿ ಡಿಕ್ಕಿ: ಐವರು ಗಂಭೀರ

Mundagod Bus Lorry Accident

ಬಸ್​-ಲಾರಿ ಮುಖಾಮುಖಿ ಡಿಕ್ಕಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಬಳಿ ಬಸ್​​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಬಸ್​ನಲ್ಲಿದ್ದ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಮುಂಡಗೋಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ರವಾನಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್​ನಿಂದ ಮುಂಡಗೋಡಿಗೆ ಹೊರಟಿದ್ದ ಬಸ್ ಮತ್ತು ಮುಂಡಗೋಡಿನಿಂದ ಶಿರಸಿ ಕಡೆ ತೆರಳುತ್ತಿದ್ದ ಲಾರಿ ನಡುವೆ ಅಪಘಾತ ನಡೆದಿದೆ. ಈ ಸಂಬಂಧ ಮುಂಡಗೋಡ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Published On - 2:09 pm, Sun, 12 July 26

ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Loading...
Unable to load recommendations.
Follow Us