ಬೀದರ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ. ಮೌಲ್ಯದ ಬೆಳ್ಳಿ ವಶ

|

Updated on: Apr 07, 2023 | 8:17 AM

ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್​ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 43 ಸಾವಿರ ಮೌಲ್ಯದ 142 ಕೆಜಿ ಬೆಳ್ಳಿಯನ್ನ ವಶಕ್ಕೆ ಪಡೆಯಲಾಗಿದೆ.

ಬೀದರ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ. ಮೌಲ್ಯದ ಬೆಳ್ಳಿ ವಶ
ಅಕ್ರಮ ಹಣ ವಶಕ್ಕೆ
Follow us on

ಬೀದರ್: ರಾಜ್ಯ ವಿಧಾನಸಭೆ ಚುನಾವಣಾ (Karnataka Assembly Election) ಅಖಾಡ ರಂಗೇರುತ್ತಿದೆ. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರದಿಂದ ಅಪಾರ ಪ್ರಮಾಣದಲ್ಲಿ ಯಾವುದೇ ದಾಖಲೆ ಇಲ್ಲದ ಕೋಟ್ಯಂತರ ರೂಪಾಯಿ ನಗದು, ಹಾಗೂ ಬೆಳ್ಳಿ ಆಭರಣಗಳು ರಾಜ್ಯಕ್ಕೆ ಬರುತ್ತಿದೆ. ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್​ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 43 ಸಾವಿರ ಮೌಲ್ಯದ 142 ಕೆಜಿ ಬೆಳ್ಳಿಯನ್ನ ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬೆಳ್ಳಿ ಆಭರಣ ಸಾಗಿಸುತ್ತಿದ್ದಾಗ ಜಪ್ತಿ ಮಾಡಲಾಗಿದ್ದು, ಅನಿಲ್, ಗಜಾನನ, ರಾಹುಲ್ ವಿರುದ್ಧ FIR ದಾಖಲಾಗಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.93 ಲಕ್ಷ ನಗದು ವಶ

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಚುಂಚನಹಳ್ಳಿ ಗೇಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.93 ಲಕ್ಷ ನಗದು ಹಣವನ್ನ ವಶಕ್ಕೆ ಪಡೆಯಲಾಗಿದೆ. ಬೆಳ್ಳೂರೂ ಕ್ರಾಸ್ ಮಾರ್ಗವಾಗಿ ಚನ್ನರಾಯಪಟ್ಟಣಕ್ಕೆ ಸಾಗಿಸಲಾಗುತ್ತಿದ್ದ ಅಕ್ರಮ ಹಣವನ್ನ ಚುಂಚನಹಳ್ಳಿ ಗೇಟ್ ಬಳಿ ಸಾಗುವ ಮಾರ್ಗ ಮದ್ಯೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಟಿ.ಆರ್ ರಂಗಸ್ವಾಮಿ ಎಂಬುವರರನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ ಮೂವರು ಜಾರ್ಖಂಡ್ ಶಾಸಕರ ಬಂಧನ: ಅಪಾರ ಹಣ ವಶ

ಖಾಸಗಿ ಬಸ್​ನಲ್ಲಿ ಬರುತ್ತಿದ್ದ ವ್ಯಕ್ತಿಯ ಬ್ಯಾಗ್​​ನಲ್ಲಿತ್ತು 2 ಕೋಟಿ ರೂ!

ಬೆಳಗಾವಿ: ಗಡಿಯಲ್ಲಿ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಕೋಟ್ಯಂತರ ರೂಪಾಯಿ ನಗದು ಈಗಾಗಲೇ ಜಪ್ತಿ ಮಾಡಿದ್ದಾರೆ. ಅಡ್ಡ ದಾರಿ ಹಿಡಿದು ಪ್ರಯಾಣಿಕರ ಸೊಗಿನಲ್ಲಿ ಬಸ್​​ಗಳಲ್ಲಿ ಹಣ ಸಾಗಿಸುತ್ತಿರುವ ಕಿರಾತಕರಿಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ. ಅಭ್ಯರ್ಥಿಗಳು ಮತದಾರರಿಗೆ ಆಮಿಷಗಳನ್ನು ಒಡ್ಡುವುದು, ಉಡುಗೊರೆಗಳನ್ನು ನೀಡುವುದು, ಹಣ ಕೊಡುವುದನ್ನು ಮಾಡುತ್ತಾರೆ ಎಂಬ ಕಾರಣಕ್ಕೆ ಚುನಾವಣಾ ಆಯೋಗ ಹಾಗೂ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು ಚೆಕ್ ಪೋಸ್ಟ್​​ಗಳಲ್ಲಿ ತಪಾಸಣೆ ಜೋರಾಗಿ ನಡೆಸಲಾಗುತ್ತಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಅಪಾರ ಪ್ರಮಾಣದಲ್ಲಿ ನಗದು ಬರುತ್ತಿದ್ದು ಇದರ ಮೇಲೆಯೂ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಈಗಾಗಲೇ ಕೋಟ್ಯಂತರ ರೂಪಾಯಿ ಜಪ್ತಿ ಮಾಡಿಕೊಂಡಿದ್ದಾರೆ.

ಚೆಕ್​ಪೋಸ್ಟ್​​ಗಳಲ್ಲಿ ಪೊಲೀಸರ ಕಣ್ಣುತಪ್ಪಿಸಿ ನಗದು ಒಯ್ಯಲು ಖದೀಮರು ಕಳ್ಳ ದಾರಿ ಹಿಡಿದಿದ್ದಾರೆ. ಬಸ್​ಗಳಲ್ಲಿ ದಾಖಲೆ ಇಲ್ಲದ ಹಣ ಸಾಗಿಸುವ ಕೃತ್ಯ ಎಸಗುತ್ತಿದ್ದಾರೆ. ಆದರೆ, ಖದೀಮರು ಚಾಪೆ ಕೆಳಗೆ ನುಗ್ಗಿದರೆ ಪೊಲೀಸರು ರಂಗೋಲಿ ಕೆಳಗೆ ನುಗ್ಗಿ ಕಳ್ಳಾಟಕ್ಕೆ ತಡೆಯೊಡ್ಡುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಬೆಳ್ಳಿ ವಶ; ಎಲ್ಲೆಲ್ಲಿ ಎಷ್ಟೆಷ್ಟು?

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ಚೆಕ್ ಪೋಸ್ಟ್​​ನಲ್ಲಿ ಬುಧವಾರ ಬೆಳಗಿನಜಾವ ನಾಲ್ಕು ಗಂಟೆ ಸುಮಾರಿಗೆ ಪೊಲೀಸರು ಖಾಸಗಿ ಬಸ್ ತಪಾಸಣೆ ನಡೆಸಿದ್ದಾರೆ. ಮುಂಬೈನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್​​ನಲ್ಲಿ ಪ್ರಯಾಣಿಕರ ಸೊಗಿನಲ್ಲಿದ್ದ ರಾಜಸ್ಥಾನ ಮೂಲದ ಮಹೇಂದ್ರ ಕುಮಾರ್ ಎಂಬುವವರ ಬ್ಯಾಗ್ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬ್ಯಾಗ್​ನಲ್ಲಿ ಎರಡು ಕೋಟಿ ರೂ. ನಗದು ನೋಡಿ ಪೊಲೀಸರು ಶಾಕ್ ಆಗಿದ್ದಾರೆ. ಕೂಡಲೇ ಆತನನ್ನ ವಶಕ್ಕೆ ಪಡೆದು ನಗದು ಜಪ್ತಿ ಮಾಡಿ ವಿಚಾರಣೆ ನಡೆಸಿದ್ದಾರೆ. ಯಾವುದೇ ದಾಖಲೆ ಇಲ್ಲದ ಹಣವನ್ನು ಸಾಗಿಸುತ್ತಿರುವುದು ಖಚಿತವಾಗುತ್ತಿದ್ದಂತೆ ಖುದ್ದು ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಚುನಾವಣೆ ಹಿನ್ನೆಲೆ ಇಬ್ಬರು ಐಟಿ ಅಧಿಕಾರಿಗಳು ಬೆಳಗಾವಿಯಲ್ಲಿ ಠೀಕಾಣಿ ಹೂಡಿದ್ದು ಅವರಿಗೆ ಪ್ರಕರಣವನ್ನು ಹಸ್ತಾಂತರಿಸಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ