ಸಚಿನ್ ಆತ್ಮಹತ್ಯೆ ಕೇಸ್​: ಇಬ್ಬರಿಗೆ ಜಾಮೀನು, ಐವರಿಗೆ 14 ದಿನ ನ್ಯಾಯಾಂಗ ಬಂಧನ

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಾರಾಷ್ಟ್ರದ ರೌಡಿಶೀಟರ್ ಪ್ರತಾಪ್ ಧೀರ್ ಪಾಟೀಲ್ ಮತ್ತು ಸೊಲ್ಲಾಪುರ ಜಿಲ್ಲಾ ಶಿವಸೇನಾ ಅಧ್ಯಕ್ಷ ಮನೋಜ್ ಸೇಜವಾಲ್‌ಗೆ ಬೀದರ್ JMFC ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಆರೋಪಿ ರಾಜು ಕಪನೂರ್ ಮತ್ತು ಗ್ಯಾಂಗ್​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಸಚಿನ್ ಆತ್ಮಹತ್ಯೆ ಕೇಸ್​: ಇಬ್ಬರಿಗೆ ಜಾಮೀನು, ಐವರಿಗೆ 14 ದಿನ ನ್ಯಾಯಾಂಗ ಬಂಧನ
ಸಚಿನ್ ಆತ್ಮಹತ್ಯೆ ಕೇಸ್​: ಇಬ್ಬರಿಗೆ ಜಾಮೀನು, ಐವರಿಗೆ 14 ದಿನ ನ್ಯಾಯಾಂಗ ಬಂಧನ
Edited By:

Updated on: Jan 18, 2025 | 7:32 PM

ಬೀದರ್​, ಜನವರಿ 18: ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ್ (Sachin Panchal) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮಹಾರಾಷ್ಟ್ರದ ರೌಡಿಶೀಟರ್ ಪ್ರತಾಪ್ ಧೀರ್ ಪಾಟೀಲ್ ಮತ್ತು ಸೊಲ್ಲಾಪುರ ಜಿಲ್ಲಾ ಶಿವಸೇನೆ ಅಧ್ಯಕ್ಷ ಮನೋಜ್ ಸೇಜವಾಲ್​​ಗೆ ಜೆಎಂಎಫ್​ಸಿ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಆರೋಪಿ ರಾಜು ಕಪನೂರ್ & ಗ್ಯಾಂಗ್​ಗೆ 14 ದಿನ ನ್ಯಾಯಾಂಗ ಬಂಧನ

ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದ್ದ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಕ್ಲೈಮಾಕ್ಸ್ ಹಂತಕ್ಕೆ ತಲುಪಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಪಾಲಿಕೆ ಮಾಜಿ ಸದಸ್ಯ ರಾಜು ಕಪನೂರ್ ಸೇರಿ ಐವರು ಬೀದರ್​ನ ಜೈಲು ಸೇರಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್​: ಪ್ರಿಯಾಂಕ್​ ಖರ್ಗೆ ಆಪ್ತ 5 ದಿನ ಸಿಐಡಿ ಕಸ್ಟಡಿಗೆ

ಪ್ರಕರಣದ ಪ್ರಮುಖ ಆರೋಪಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂ‌ರ್ ಅವರಲ್ಲದೆ ಕಲಬುರಗಿ ಕಾಂಗ್ರೆಸ್ ಮುಖಂಡ ನಂದಕುಮಾರ ನಾಗಭುಜಂಗೆ, ಕಲಬುರಗಿ ಜಿಪಂ ಮಾಜಿ ಉಪಾಧ್ಯಕ್ಷ ಗೋರಖನಾಥ್ ಸಜ್ಜನ್, ಆರ್.ಕೆ.ಪಾಟೀಲ್ ಹಾಗೂ ಸತೀಶ ರತ್ನಾಕ‌ರ್ ದುಬಲಗುಂಡಿ ಅವರನ್ನು ಸಿಐಡಿ ತಂಡ ಎಂಟು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡು ತೀವ್ರ ವಿಚಾರಣೆ ಮಾಡಿತ್ತು.

ಸಿಐಡಿಯವರು ಎಲ್ಲಾ ವಿಚಾರಣೆ ಪೂರ್ಣಗೊಂಡಿದೆ ಎಂದು ಕೋರ್ಟ್ ಹೇಳಿದ ಕಾರಣ ಎಲ್ಲಾ ಐದು ಆರೋಪಿಗಳನ್ನ ಬೀದರ್ ಜೆಎಂಎಫ್​ಸಿ ಕೋರ್ಟ್ ಜಡ್ಜ್ ರಾಮಮೂರ್ತಿ ಎನ್. ಅವರು 14 ದಿನಗಳ ಕಾಲ ನ್ಯಾಯಾಂಗ್ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನೂ ಐದು ಜನರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ರಾಜ ಕಪನೂರ್ ಪರ ವಕೀಲ ಅರುಣಕುಮಾರ ಕಿನ್ನಿ, ಇಂದೆ ನಾವು ಕೋರ್ಟ್​ಗೆ ಬೇಲ್ ಅರ್ಜಿಯನ್ನ ಸಲ್ಲಿಸುತ್ತೇವೆ, ಕೋರ್ಟ್ ಯಾವಾಗ ದಿನಾಂಕ್ ಕೊಡುತ್ತದೆಯೋ ಅವತ್ತು ಬೇಲ್ ಬಗ್ಗೆ ವಾದ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗಾಗಿ ಪ್ರಧಾನಿಯವರಿಗೆ ಪತ್ರ ಬರೆಯುತ್ತೇವೆ: ಸಚಿನ್ ಸಹೋದರಿ

ಕಳೆದ ಡಿ.26ರಂದು ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಟೆಂಡ‌ರ್ ನೀಡುವಲ್ಲಿ ದೋಖಾ, ಪರ್ಸೆಂಟೇಜ್ ಅಕ್ರಮ, ಹಣದ ಬೇಡಿಕೆ, ಕೊಲೆ ಬೆದರಿಕೆ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ರಾಜು ಕಪನೂರ್ ಸೇರಿ 8 ಜನರು ಇದಕ್ಕೆ ಕಾರಣ ಎಂದು ಸಚಿನ್ ಡೆತ್‌ ನೋಟ್‌ನಲ್ಲಿ ಬರೆದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us