AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಭೂಮಿ ಪೂಜೆ ಮಾಡಿ ಹೋಗಿದ್ದ ಸ್ಥಳವೀಗ ಹಾಳುಕೊಂಪೆ; ಸರ್ದಾರ್ ವಲ್ಲಭಭಾಯಿ ಪಟೇಲ್ ಅಭಿಮಾನಿಗಳ ಆಕ್ರೋಶ

ಪಾಳುಬಿದ್ದರೆ ಮಹಾನ್ ನಾಯಕರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಕೆಲಸವನ್ನು ಬೇಗ ಮುಗಿಸಬೇಕು. ಇಲ್ಲದಿದ್ದರೆ ಬಿಜೆಪಿ ನಾಯಕರಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸುತ್ತದೆ ಅಂತ ಸ್ಥಳೀಯರು ಹೇಳುತ್ತಿದ್ದಾರೆ.

ಅಮಿತ್ ಶಾ ಭೂಮಿ ಪೂಜೆ ಮಾಡಿ ಹೋಗಿದ್ದ ಸ್ಥಳವೀಗ ಹಾಳುಕೊಂಪೆ; ಸರ್ದಾರ್ ವಲ್ಲಭಭಾಯಿ ಪಟೇಲ್ ಅಭಿಮಾನಿಗಳ ಆಕ್ರೋಶ
ಆರು ವರ್ಷಗಳಿಂದ ಅರ್ಧಕ್ಕೆ ನಿಂತಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಮಾರಕ
TV9 Web
| Updated By: sandhya thejappa|

Updated on:Sep 29, 2021 | 5:02 PM

Share

ಬೀದರ್: ಲಕ್ಷಾಂತರ ವೆಚ್ಚದಲ್ಲಿ ನಿರ್ಮಾಣವಾಗಿ ಮೆರಗು ತರಬೇಕಿದ್ದ ಸ್ಮಾರಕ ಹಾಳು ಕೊಂಪೆಯಾಗಿದೆ. ಕೇಂದ್ರದ ಬಿಜೆಪಿ ಚಾಣಕ್ಯನ ಭರವಸೆ ಭರವಸೆಯಾಗಿಯೇ ಉಳಿದಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಂದು ಅಮಿತ್ ಶಾ (Amit Shah) ಮಹಾನ್ ನಾಯಕನ ಸ್ಮಾರಕ ನಿರ್ಮಾಣ ಮಾಡುವ ಭರವಸೆ ನೀಡಿ ಹೋಗಿದ್ದರು. ಹೋರಾಟದಲ್ಲಿ ಹುತಾತ್ಮರಾದವರ ನೆನಪಿಗೆ ಸ್ಮಾರಕ ನಿರ್ಮಿಸುವುದು ಹುತಾತ್ಮರಿಗೆ ಸಲ್ಲಿಸುವ ಶ್ರದ್ಧಾಂಜಲಿಯಷ್ಟೇ ಅಲ್ಲ, ಯುವ ಮತ್ತು ಮುಂದಿನ ಪೀಳಿಗೆಗೆ ಇತಿಹಾಸವನ್ನು ತಿಳಿಸಿಕೊಡುವ ಪ್ರಯತ್ನ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಆದರೆ ಆರು ವರ್ಷಗಳು ಗತಿಸಿದ್ದರೂ ಅರ್ಧಕ್ಕೆ ನಿಂತ ಸ್ಮಾರಕ ಈಗ ಹಾಳು ಕೊಂಪೆಯಾಗಿ ಮಾರ್ಪಟ್ಟಿದೆ.

ಆರು ವರ್ಷದಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ (Sardar Vallabhbhai Patel) ಸ್ಮಾರಕ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋರ್ಟಾ ಗ್ರಾಮದಲ್ಲಿ ಅರ್ಧಕ್ಕೆ ನಿಂತು ಪಾಳು ಬಿದ್ದಿದೆ. 2014ರಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದಂದು ಹುತಾತ್ಮರ ಸ್ಮಾರಕ ನಿರ್ಮಾಣ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಪ್ರಧಾನಿ ನರೇಂದ್ರ ಮೋದಿಯವರಿಂದ 2015ಕ್ಕೆ ಉದ್ಘಾಟನೆ ಮಾಡಿಸಲಾಗುತ್ತದೆ ಅಂತ ಹೇಳಿದ್ದರು. ಆದರೆ ಸ್ಮಾರಕ ನಿರ್ಮಾಣದ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಅರ್ಧಕ್ಕೆ ನಿಂತು ಉಕ್ಕಿನ ಮನುಷ್ಯನ ಸ್ಮಾರಕ ಅನಾಥವಾದಂತೆ ಕಾಣುತ್ತಿದೆ. ಇದು ಸರ್ದಾರ್ ವಲ್ಲಭಭಾಯಿ ಪಟೇಲ್​ರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ರೀತಿ ಪಾಳುಬಿದ್ದರೆ ಮಹಾನ್ ನಾಯಕರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಕೆಲಸವನ್ನು ಬೇಗ ಮುಗಿಸಬೇಕು. ಇಲ್ಲದಿದ್ದರೆ ಬಿಜೆಪಿ ನಾಯಕರಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸುತ್ತದೆ ಅಂತ ಸ್ಥಳೀಯರು ಹೇಳುತ್ತಿದ್ದಾರೆ.

ನಿಜಾಮರ ಆಡಳಿತದ ಪರ ಇದ್ದ ರಜಾಕಾರರ ವಿರುದ್ಧ ಹೋರಾಡಿ ಗೋರ್ಟಾ ಗ್ರಾಮದಲ್ಲಿ ಅನೇಕರು ಹುತಾತ್ಮರಾದರು. ಈ ಭಾಗದಲ್ಲಿ ಅಂದು ಕೋಮು ದಳ್ಳುರಿ ಭುಗಿಲೆದ್ದಿತ್ತು. ಸರ್ದಾರ್ ವಲ್ಲಭಭಾಯಿ ಪಟೇಲ್​ರವರು ಅಂಥಹ ಪರಿಸ್ಥಿತಿಯನ್ನು ನಿಯಂತ್ರಿಸಿ ಈ ಭಾಗಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಆದರೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮೆರಗು ತರಬೇಕಿದ್ದ ಉಕ್ಕಿನ ಮನುಷ್ಯನ ಸ್ಮಾರಕ ಅರ್ಧಕ್ಕೆ ನಿಂತು ಹಾಳಾಗುತ್ತಿದೆ. ಕಳೆದ ಆರು ವರ್ಷಗಳಿಂದ ಸ್ಮಾರಕದ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ತಕ್ಕ ಮಟ್ಟಿಗೆ ಮಾಡಿದ್ದ ಕೆಲಸವೂ ಹಾಳಾಗಿದ್ದು, ಗಿಡಗಳು ಬೆಳೆದುಕೊಂಡಿವೆ.

ಪಟೇಲರ ಸ್ಮಾರಕದ ಕನಸು ಅಭಿಮಾನಿಗಳಲ್ಲಿ ಕನಸಾಗಿಯೇ ಉಳಿಯುತ್ತಾ ನಿರಾಸೆ ಮೂಡಿಸಿದೆ. ಭರವಸೆಯನ್ನು ನೀಡಿದ್ದ ರಾಜಕೀಯ ನಾಯಕರು ಕೂಡ ಸರ್ದಾರ್ ವಲ್ಲಭಭಾಯಿ ಪಟೇಲ್​ರನ್ನು ಮರೆತರಾ? ಅಮಿತ್ ಶಾ ಕೇವಲ ರಾಜಕೀಯಕ್ಕೆ ಭರವಸೆಯನ್ನು ನೀಡಿದ್ರಾ? ಅಂತ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಅಫ್ಘಾನ್- ಭಾರತದ ನಡುವೆ ವಿಮಾನ ಸಂಚಾರ ಆರಂಭಿಸಿ; ಸರ್ಕಾರಕ್ಕೆ ಪತ್ರ ಬರೆದ ತಾಲಿಬಾನ್

ಸರ್ಕಾರದ ಮತ್ತೊಂದು ಕಂಪನಿ ಷೇರುಪೇಟೆಗೆ: ಐಪಿಒ ಬಿಡುಗಡೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

(Sardar Vallabhbhai Patel Monument work struck in bidar from six years)

Published On - 4:56 pm, Wed, 29 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ