ಎದೆಮಟ್ಟದ ಉಗುರು ಬೆಚ್ಚಗಿನ ನೀರಲ್ಲಿಯೇ ದೇವರ ದರ್ಶನ; ಐತಿಹಾಸಿಕ ಝರಣಿ ಗುಹಾ ದೇವಾಲಯದ ಮಹಿಮೆ ಏನು ಗೊತ್ತಾ?

ನರಸಿಂಹ ಝರಣಿ ಗುಹಾ ದೇವಾಲಯಕ್ಕೆ ಸುಮಾರು 300 ಅಡಿಗಳಷ್ಟು ದೂರ ನಡೆದು ಹೋಗಿ ದೇವರ ದರ್ಶನ ಮಾಡಬೇಕು. ಗುಹೆಯ ಮಬ್ಬುಗತ್ತಲಿನಲ್ಲಿ ನೀರಿನಲ್ಲಿ ನಡೆದು ಹೋಗಲು ಮಾನಸಿಕ ಸಿದ್ಧತೆ ಇದ್ದರೆ ದರ್ಶನ ಸುಲಭ.

ಎದೆಮಟ್ಟದ ಉಗುರು ಬೆಚ್ಚಗಿನ ನೀರಲ್ಲಿಯೇ ದೇವರ ದರ್ಶನ; ಐತಿಹಾಸಿಕ ಝರಣಿ ಗುಹಾ ದೇವಾಲಯದ ಮಹಿಮೆ ಏನು ಗೊತ್ತಾ?
ಐತಿಹಾಸಿಕ ಝರಣಿ ಗುಹಾ ದೇವಾಲಯ
Follow us
| Edited By: preethi shettigar

Updated on: Sep 05, 2021 | 10:50 AM

ಬೀದರ್: ಮಬ್ಬು ಕತ್ತಲಿನ ಗುಹೆಯಲ್ಲಿ ಸದಾ ಹರಿಯುವ ನೀರಿನಲ್ಲಿ ಸುಮಾರು 300 ಅಡಿಗಳಷ್ಟು ದೂರ ಎದೆಮಟ್ಟದ ಉಗುರು ಬೆಚ್ಚಗಿನ ನೀರಲ್ಲಿ ನಡೆದು ಹೋಗಿ, ದೇವರ ದರ್ಶನ ಪಡೆಯುವುದು ಒಂದು ವಿಶಿಷ್ಟ ಅನುಭವ. ಇಂತಹ ಅನುಭವಕ್ಕೆ ಸಾಕ್ಷಿಯಾಗಿರುವುದು ಬೀದರ್ ಹೊರವಲಯದಲ್ಲಿರುವ ನರಸಿಂಹ ಝರಣಿ ಗುಹಾ ದೇವಾಲಯ. ಇದು ಕರ್ನಾಟಕದ ಅಪರೂಪದ ಯಾತ್ರಾಸ್ಥಳ. ಜತೆಗೆ ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಭಕ್ತರ ಆರಾಧ್ಯ ಕ್ಷೇತ್ರವಾಗಿದೆ.

ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರಗಳಿಂದ ಅಪಾರ ಪ್ರಮಾಣದ ಭಕ್ತರು, ನವ ವಧುವರರು ನರಸಿಂಹ ಝರಣಿಗೆ ಬಂದು ಪೂಜಿಸುವ ಸಂಪ್ರದಾಯವಿದೆ. ಮಕ್ಕಳಾಗದ ದಂಪತಿ, ಸಂತಾನ ಪ್ರಾಪ್ತಿಗಾಗಿ ನರಸಿಂಹ ದೇವರಲ್ಲಿ ಹರಕೆ ಕಟ್ಟಿಕೊಳ್ಳುತ್ತಾರೆ. ಹೆರಿಗೆಗೆ ತವರಿಗೆ ಹೋಗುವ ಮುನ್ನ ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸಿ ಹೋಗುವ ರೂಢಿಯಿದೆ. ಮಕ್ಕಳಾದ ಮೇಲೆ ಬಂದು ಮಗುವಿನ ಜಾವಳ ತೆಗೆಸುವ ಅಥವಾ ತೊಟ್ಟಿಲು ಬಿಡುವ ಹರಕೆ ಇಲ್ಲಿ ಸಲ್ಲಿಸುತ್ತಾರೆ.

ನರಸಿಂಹ ಝರಣಿ ಗುಹಾ ದೇವಾಲಯಕ್ಕೆ ಸುಮಾರು 300 ಅಡಿಗಳಷ್ಟು ದೂರ ನಡೆದು ಹೋಗಿ ದೇವರ ದರ್ಶನ ಮಾಡಬೇಕು. ಗುಹೆಯ ಮಬ್ಬುಗತ್ತಲಿನಲ್ಲಿ ನೀರಿನಲ್ಲಿ ನಡೆದು ಹೋಗಲು ಮಾನಸಿಕ ಸಿದ್ಧತೆ ಇದ್ದರೆ ದರ್ಶನ ಸುಲಭ. ಗುಹೆಯೊಳಗಿನ ನೀರು ಯಾವುದೇ ಸಂದರ್ಭದಲ್ಲೂ ಎದೆಮಟ್ಟ ಮೀರುವುದಿಲ್ಲ. ಈ ನೀರಲ್ಲಿ ಎಷ್ಟು ಸಲ ಓಡಾಡಿದರೂ ಶೀತ ಆಗುವುದಿಲ್ಲ. ಈ ನೀರಿನಲ್ಲಿ ಗಂಧಕ (ಸಲ್ಫರ್)ದ ಅಂಶವಿದೆ. ನೀರು ಚಳಿಗಾಲದಲ್ಲೂ ಬೆಚ್ಚಗಿನ ಅನುಭವ ನೀಡುತ್ತದೆ.

ಈ ನೀರಿನಲ್ಲಿ ನಡೆದರೆ ಚರ್ಮದ ರೋಗಗಳು ನಿವಾರಣೆ ಈ ದೇವಾಲಯಕ್ಕೆ ಸಾಗುವ ನೀರಿನಲ್ಲಿ ನಡೆದರೆ ಚರ್ಮದ ರೋಗಗಳು ನಿವಾರಣೆ ಆಗುತ್ತವೆ ಎಂಬ ನಂಬಿಕೆ ಇದೆ. ಗುಹೆಯೊಳಗೆ ನಡೆದು ಸ್ವಾಮಿಯ ದರ್ಶನಕ್ಕೆ ಹೋಗುವಾಗ ಧರಿಸಲು ಅಗತ್ಯ ಬಟ್ಟೆ, ಟವೆಲ್, ಲುಂಗಿ, ಮಹಿಳೆಯರಿಗೆ ಪ್ರತ್ಯೇಕ ಸೀರೆ ತರಬೇಕು. ಕೌಂಟರ್‌ನಲ್ಲಿ ಟಿಕೆಟ್ ಪಡೆದು ಸಾಲಿನಲ್ಲಿ ಗುಹೆ ಮುಂಭಾಗದಿಂದ ನರಸಿಂಹ ದೇವರ ಕಡೆಗೆ ನಡೆದು ಸಾಗಬೇಕು. ಅದಕ್ಕೂ ಮೊದಲು ಗುಹೆಯಿಂದ ಹರಿದು ಗೋಮುಖದ ಮೂಲಕ ಬರುವ ನೀರಿನಲ್ಲಿ ಮೈ ತೊಳೆದುಕೊಳ್ಳಬೇಕು.

ಗುಹೆಯೊಳಕ್ಕೆ ಹೋಗದೇ ಹಿಂದಿರುಗುವವರಿಗೆ ಇಲ್ಲಿಯೇ ಪೂಜೆ, ಮಂಗಳಾರತಿ ಮಾಡಿ ಕೊಡುವ ವ್ಯವಸ್ಥೆಯೂ ಇದೆ. ವಿಶೇಷ ಪೂಜೆ ಮಾಡಿಸುವವರು ಅರ್ಚಕರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಬೇಕು. ಸಾಮಾನ್ಯ ಪೂಜೆಗಾಗಿ ಅರ್ಚಕರೊಬ್ಬರು ಗುಹೆಯೊಳಗೆ ಇರುತ್ತಾರೆ. ನರಸಿಂಹ ಜಯಂತಿಯಂದು ಇಲ್ಲಿ ವಿಶೇಷ ಪೂಜೆ, ಹೋಮ-ಹವನಗಳು ನಡೆಯುತ್ತವೆ. ಅದನ್ನು ಬಿಟ್ಟರೆ ಇಲ್ಲಿ ವರ್ಷದಲ್ಲಿ ವಿಶೇಷ ಆಚರಣೆಗಳಿಲ್ಲ.

narasimha swamy

ನರಸಿಂಹ ಝರಣಿ

ಹರಕೆ ಹೊತ್ತವರು ಸಾಮಾನ್ಯವಾಗಿ ಮಂಗಳವಾರ ಮತ್ತು ಶನಿವಾರ ಇಲ್ಲಿಗೆ ಬರುತ್ತಾರೆ. ದೇವಸ್ಥಾನದ ಮುಂಭಾಗದಲ್ಲಿ ನೈವೇದ್ಯಕ್ಕಾಗಿ ಅಡುಗೆ ಮಾಡಲು ಬೇಕಾದ ಸೌದೆ ಮತ್ತಿತರ ವಸ್ತುಗಳು ದೊರೆಯುತ್ತವೆ. ಎರಡು ಕಣಿವೆಗಳ ನಡುವೆ ಇರುವ ಪ್ರದೇಶದಲ್ಲಿ ಕಟ್ಟಿಗೆಯ ಒಲೆ ಹೂಡಿ ಎಣ್ಣೆ ಹೋಳಿಗೆ, ಅನ್ನ ನೈವೇದ್ಯ ಮಾಡಿ ಅರ್ಪಿಸುತ್ತಾರೆ.

ದೇವಾಲಯದ ಇತಿಹಾಸ ಹಿರಣ್ಯಕಶಪುವಿನ ವಧೆಯ ಬಳಿಕ ನರಸಿಂಹನು ಶಿವ ಭಕ್ತನು ಮತ್ತು ಅಸುರನು ಆದ ಜಲಾಸುರನ ವಧೆ ಮಾಡಲು ಬರುತ್ತಾನೆ. ಯುದ್ಧದ ಬಳಿಕ ಜಲಾಸುರನು ಸೋಲನ್ನೋಪ್ಪಿ, ಸಾವನ್ನೋಪ್ಪುವಾಗ ನರಸಿಂಹನ ಕಾಲು ಹಿಡಿದು ಇಲ್ಲಿಯೇ ವಾಸಮಾಡಿ ಬಂದ ಭಕ್ತರಿಗೆ ಆಶಿರ್ವಾದ ಮಾಡುವಂತೆ ವರ ಕೇಳಿ ಕೊಳ್ಳುತ್ತಾ ನರಸಿಂಹನ ಪಾದದಿಂದ ನೀರಾಗಿ ಹರಿಯಲು ಶುರುಮಾಡುತ್ತಾನೆ. ಅವನಿಗೆ ಕೊಟ್ಟ ಮಾತಿನಂತೆ ದೇವರು ಇಲ್ಲಿನ ಗುಹೆಯೊಳಗೆ ಐಕ್ಯವಾದರೆಂದು ಪ್ರತೀತಿ.

ನರಸಿಂಹ ಝೀರ ನರಸಿಂಹನ ಪಾದದಿಂದ ನೀರು ಸತತವಾಗಿ ಸುರಿಯುವುದರಿಂದಲೇ ಈ ಸ್ಥಳಕ್ಕೆ ನರಸಿಂಹ ಝೀರ ಎಂದು ಹೆಸರಿಡಲಾಗಿದೆ. ನವೆಂಬರ್‌ನಿಂದ ಜನವರಿ ನಡುವಿನ ಅವಧಿ ದೇವಸ್ಥಾನಕ್ಕೆ ಭೇಟಿ ನೀಡುವುದಕ್ಕೆ ಪ್ರಶಸ್ತ ಕಾಲ. ನಿತ್ಯ ಬೆಳಿಗ್ಗೆ ಏಳು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಗುಹೆಯೊಳಕ್ಕೆ ಹೋಗಿ ಸ್ವಾಮಿಯ ದರ್ಶನ ಪಡೆಯಬಹುದು. ಜಂಬಿಟ್ಟಿಗೆ ನೆಲದ ಕಣಿವೆಯಲ್ಲಿ ಇರುವ ಈ ಗುಹಾಲಯದಲ್ಲಿ ವರ್ಷವಿಡೀ ನೀರು ಹರಿಯುತ್ತದೆ. ಗುಹೆಯಲ್ಲಿ ಉಸಿರಾಟಕ್ಕೆ ತೊಂದರೆ ಆಗದಂತೆ ಹೊರಗಿನಿಂದ ಗಾಳಿ ಬರುವಂತೆ ವ್ಯವಸ್ಥೆ ಮಾಡಲಾಗಿದೆ.

ಸಂಚಾರಕ್ಕೆ ವ್ಯವಸ್ಥೆ ಬೆಂಗಳೂರಿನಿಂದ ಹೈದರಾಬಾದ್​ಗೆ ವಿಮಾನದಲ್ಲಿ ಪ್ರಯಾಣಿಸಿದರೆ ಹೈದರಾಬಾರ್​ನಿಂದ ಬೀದರ್‌ಗೆ ರೈಲು ಹಾಗೂ ಬಸ್ ಸೌಕರ್ಯವಿದೆ. ಬೆಂಗಳೂರಿನಿಂದ ನಾಂದೇಡ್‌ಗೆ ಹೋಗುವ ಎಕ್ಸ್‌ಪ್ರೆಸ್ ರೈಲು ಬೀದರ್ ಮಾರ್ಗವಾಗಿ ಹೋಗುತ್ತದೆ. ಗುಲ್ಬರ್ಗ ಮತ್ತು ಹೈದರಾಬಾದ್‌ನಿಂದ ರಸ್ತೆ ಸಂಪರ್ಕವೂ ಇದೆ. ನರಸಿಂಹ ಝರಣಿ ಹೈದರಾಬಾದ್‌ನಿಂದ 120 ಕಿ.ಮೀ, ಗುಲ್ಬರ್ಗ ನಗರದಿಂದ 110 ಕಿ.ಮೀ. ದೂರದಲ್ಲಿದೆ. ಬೀದರ್ ಬಸ್ ನಿಲ್ದಾಣದಿಂದ ಝರಣಿಗೆ ನಗರ ಸಾರಿಗೆಯ ಬಸ್‌ಗಳ ಮೂಲಕ ಹೋಗಬಹುದು. ಆಟೋ ರಿಕ್ಷಾಗಳೂ ಕೂಡ ಇಲ್ಲಿ ಲಭ್ಯವಿದೆ.

ವರದಿ: ಸುರೇಶ್ ನಾಯಕ್

ಇದನ್ನೂ ಓದಿ: ಐತಿಹಾಸಿಕ ಮಹತ್ವ ಪಡೆದಿರುವ ಮಾಲತೇಶ ದೇವಸ್ಥಾನ; ದೇವರ ಕಾರ್ಣಿಕವೇ ವರ್ಷದ ಭವಿಷ್ಯವಾಣಿ

ಶಿಕ್ಷಕನ ನೆನಪಿಗಾಗಿ ದೇವಾಲಯ ನಿರ್ಮಾಣ; 96 ವರ್ಷಗಳ ಹಿಂದಿನ ದೇವಸ್ಥಾನಕ್ಕೆ ನಿತ್ಯವೂ ಪೂಜೆ ಸಲ್ಲಿಸಿ ಸ್ಮರಿಸುತ್ತಿರುವ ಗ್ರಾಮಸ್ಥರು

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ