Bidar: ಹಳ್ಳ ದಾಟುತ್ತಿದ್ದ ವೇಳೆ ಒಂದೇ ಕುಟುಂಬದ ಮೂವರು ಕೊಚ್ಚಿಹೋದ ಶಂಕೆ: ಪತ್ತೆಗಾಗಿ ಮನವಿ

|

Updated on: Apr 30, 2023 | 9:30 PM

ಹಳ್ಳ ದಾಟುತ್ತಿದ್ದ ವೇಳೆ ಒಂದೇ ಕುಟುಂಬದ ಮೂವರು ಕೊಚ್ಚಿಹೋದ ಶಂಕೆ ವ್ಯಕ್ತವಾಗಿದ್ದು, ಪತ್ತೆಗಾಗಿ ಮನವಿ ಮಾಡಿರುವಂತಹ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದ ಬಳಿ ನಡೆದಿದೆ.

Bidar: ಹಳ್ಳ ದಾಟುತ್ತಿದ್ದ ವೇಳೆ ಒಂದೇ ಕುಟುಂಬದ ಮೂವರು ಕೊಚ್ಚಿಹೋದ ಶಂಕೆ: ಪತ್ತೆಗಾಗಿ ಮನವಿ
ಹಳ್ಳ
Follow us on

ಬೀದರ್​: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ದೊಡ್ಡ ಅನಾಹುತ ಒಂದು ನಡೆದು ಹೋಗಿದೆ. ಹಳ್ಳ ದಾಟುತ್ತಿದ್ದ ವೇಳೆ ಒಂದೇ ಕುಟುಂಬದ ಮೂವರು ಕೊಚ್ಚಿಹೋದ ಶಂಕೆ (suspected) ವ್ಯಕ್ತವಾಗಿದ್ದು, ಪತ್ತೆಗಾಗಿ ಮನವಿ ಮಾಡಲಾಗಿದೆ. ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಸುನಂದಾ(48), ಐಶ್ವರ್ಯಾ(16), ಸುಮಿತ್(10) ನಾಪತ್ತೆಯಾಗಿರುವವರು. ಪತಿ ಸಂಗಪ್ಪ ಲದ್ದೆ ಜೊತೆ ಜಮೀನಿಗೆ ತೆರಳಿ ಹಿಂದಿರುಗುವಾಗ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಹಳ್ಳದಲ್ಲಿ ಏಕಾಏಕಿ ನೀರು ಹೆಚ್ಚಾಗಿದ್ದರಿಂದ ತಾಯಿ, ಮಕ್ಕಳು ಕೊಚ್ಚಿಹೋಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಅದೃಷ್ಟವಶಾತ್​ ಪ್ರಾಣಾಪಾಯದಿಂದ ಸಂಗಪ್ಪ ಲದ್ದೆ ಪಾರಾಗಿದ್ದಾರೆ.

ಮರ ಬಿದ್ದು ಸರ್ಕಾರಿ ಶಾಲಾ ಶಿಕ್ಷಕ ಸಾವು

ವಿಜಯಪುರ: ಚಲಿಸಲುತ್ತಿದ್ದ ಬೈಕ್​ ಮೇಲೆ ಮರ ಬಿದಿದ್ದು, ಸರ್ಕಾರಿ ಶಾಲಾ ಶಿಕ್ಷಕ ಸ್ಥಳದಲ್ಲಿಯೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ನಿಡಗುಂದಿ ಪಟ್ಟಣದ ಮುದ್ದಾಪುರ ಗ್ರಾಮದ ಬಳಿ ನಡೆದಿದೆ. ಪ್ರಕಾಶ ಚಲವಾದಿ ಮೃತ ಸರ್ಕಾರಿ ಶಾಲಾ ಶಿಕ್ಷಕ. ಮುದ್ದಾಪುರದಿಂದ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಕಲಬುರಗಿ: ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಕ್ರಿಕೆಟ್ ಆಡುವ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ

ಶಿವಮೊಗ್ಗ: ಕ್ರಿಕೆಟ್ ಆಡುವ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿದ್ದು, 10 ಯುವಕರ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ರಾಗಿಗುಡ್ಡದಲ್ಲಿ ನಡೆದಿದೆ. ಹಿಂದೂ ಸಮುದಾಯದ 7, ಮುಸ್ಲಿಂ ಸಮುದಾಯದ ಮೂವರಿಗೆ ಗಾಯವಾಗಿದ್ದು, ಗಾಯಗೊಂಡ ಯುವಕರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಡೆತ್​ನೋಟ್​ ಬರೆದಿಟ್ಟು 7ನೇ ಮಹಡಿದಿಂದ ಜಿಗಿದ ವಿದ್ಯಾರ್ಥಿನಿ

ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಡೆತ್​ನೋಟ್​​ ಬರೆದಿಟ್ಟು ಏಳನೇ ಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿನ್ನಿ ಮಿಲ್​ ಬಳಿಯ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ನಡೆದಿದೆ. ಬಿ.ಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಆಯಿಶಾ ಬಿ.ಆರ್ ಮೃತ ವಿದ್ಯಾರ್ಥಿನಿ. ಇಂದು(ಏ.30) ಬೆಳಗ್ಗೆ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್​ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಲ್ಲದೇ ಕೈ ಮೇಲೆ ಭೀಮೇಶ್ ಎನ್ನುವ ಹೆಸರಿನ ಜೊತೆಗೆ ಆತನ ಮೊಬೈಲ್ ನಂಬರ್ ಕೂಡ ಬರೆದುಕೊಂಡಿದ್ದಾಳೆ. ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ

ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಕಲಬುರಗಿ: ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ವಿಶ್ವವಿದ್ಯಾಲಯ ಆವರಣದ ಪಾಳು ಬಿದ್ದ ಗೋಡಾನ್‌ನಲ್ಲಿ ನಡೆದಿದೆ. ಜ್ಯೋತಿಬಾ ಪುಲೆ ಬಡಾವಣೆಯ ನಿವಾಸಿ ಶಶಾಂಕ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಆನ್‌ಲೈನ್ ಎನಿಮೇಶನ್ ಕೆಲಸ ಮಾಡುತ್ತಿದ್ದ ಮೃತ ಶಶಾಂಕ್, ಕೆಲಸದಲ್ಲಿ ಬಹಳಷ್ಟು ಒತ್ತಡ ಹಾಕಿಕೊಂಡಿದ್ದ. ಇದೀಗ ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:29 pm, Sun, 30 April 23