ಬೀದರ್, ಆಗಸ್ಟ್ 28: ಜಿಲ್ಲೆಯ (Bidar) ಬಸವಕಲ್ಯಾಣ ತಾಲೂಕಿನಲ್ಲಿ ಲಾರಿ ಮತ್ತು ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಶ್ರಾವಣ ಸೋಮವಾರ ಹಿನ್ನೆಲೆ ಅಮೃತಕುಂಡಕ್ಕೆ ಆಗಮಿಸಿ ವಾಪಸ್ ಆಗುತ್ತಿದ್ದಾಗ ಮನ್ನಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಈ ಅಪಘಾತ (Accident) ಸಂಭವಿಸಿದೆ.
ಶ್ರಾವಣ ಸೋಮವಾರ ಹಿನ್ನೆಲೆ ಮಹಾರಾಷ್ಟ್ರ ಮೂಲದ ಆರು ಮಂದಿ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಬಳಿ ಇರುವ ಐತಿಹಾಸಿಕ ಶ್ರೀ ಕ್ಷೇತ್ರ ಅಮೃತಕುಂಡಕ್ಕೆ ಆಗಮಿಸಿದ್ದರು. ದೇವರ ದರ್ಶನ ಪಡೆದು ಆಟೋ ಮೂಲಕ ವಾಪಸ್ ಆಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ದೇವನಹಳ್ಳಿ: ಏರ್ಪೋರ್ಟ್ ಫ್ಲೈ ಓವರ್ ಮೇಲೆ ಕಾರು, ಬೈಕ್ ಭೀಕರ ಅಪಘಾತ; ದೃಶ್ಯ ಕಾರಿನ ಕ್ಯಾಮೆರಾದಲ್ಲಿ ಸೆರೆ
ಪರಿಣಾಮ ಆಟೋದಲ್ಲಿದ್ದವರ ಪೈಕಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಉಳಿದ ಐವರನ್ನು ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಮೂವರು ದಾರಿಮಧ್ಯೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತಪಟ್ಟವರು ಮಹಾರಾಷ್ಟ್ರದ ಮುರುಮ್ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. ಪರಿಮಳಾ(35), ಸುನೀಲ್(35), ಪೂಜಾ(17), ಅನುಸುಬಾಯಿ(65) ಮೃತ ದುರ್ದೈವಿಗಳು.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಸವಕಲ್ಯಾಣ ಸಂಚಾರಿ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕರ್ನಾಟಕದಲ್ಲಿ ಅಪಘಾತ ಮತ್ತು ಅಪಘಾತದಲ್ಲಿ ಜೀವಹಾನಿಯಾಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಲೇ ಇಲ್ಲ. ಸಂಚಾರ ನಿಯಮ ಪಾಲನೆ ಮಾಡುವಂತೆ ಪೊಲೀಸ್ ಇಲಾಖೆ ಜಾಗೃತಿ ಮೂಡಿಸುತ್ತಿದ್ದರೂ ಅಪಘಾತಗಳು ಸಂಭಿವಿಸುತ್ತಲೇ ಇವೆ. ಸಂಚಾರ ನಿಯಮ ಉಲ್ಲಂಘನೆಯೇ ಸಾವುಗಳಿಗೆ ಕಾರಣ ಎಂದು ಹೇಳಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:00 pm, Mon, 28 August 23