AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರ್​​ ಸಂತೋಷ್ ಬಂಧನ: ಯಾರೇ ಇದ್ದರೂ ಕಾನೂನು ಕ್ರಮ ಜರುಗಿಸಲಾಗುವುದು: ಸಚಿವ ಈಶ್ವರ್ ಖಂಡ್ರೆ

ಬಿಗ್​ಬಾಸ್​​ ಸ್ಪರ್ಧಿ ವರ್ತೂರ್ ಸಂತೋಷ್​ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದಾರೆಂಬ ದೂರು ಇತ್ತು. ಆ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ವನ್ಯ ಜೀವಿಗಳ ಕಾನೂನಿನ ಆಧಾರದ ಮೇಲೆ ಅರೆಸ್ಟ್ ಮಾಡಲಾಗಿದೆ ಎಂದು ಅರಣ್ಯ ಇಲಾಖೆ  ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಇದರಲ್ಲಿ ಯಾರೇ ಇದ್ದರೂ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ವರ್ತೂರ್​​ ಸಂತೋಷ್ ಬಂಧನ: ಯಾರೇ ಇದ್ದರೂ ಕಾನೂನು ಕ್ರಮ ಜರುಗಿಸಲಾಗುವುದು: ಸಚಿವ ಈಶ್ವರ್ ಖಂಡ್ರೆ
ವರ್ತೂರ್ ಸಂತೋಷ, ಸಚಿವ ಈಶ್ವರ್ ಖಂಡ್ರೆ
ಸುರೇಶ ನಾಯಕ
| Edited By: |

Updated on:Oct 23, 2023 | 3:07 PM

Share

ಬೀದರ್​​, ಅಕ್ಟೋಬರ್​​​​ 23: ಬಿಗ್​ಬಾಸ್​​ ಸ್ಪರ್ಧಿ ವರ್ತೂರ್ ಸಂತೋಷ್ (Varthur Santhosh)​​ ಅವರ ಲಾಕೆಟ್​​ನಲ್ಲಿ ಹುಲಿಯ ಉಗುರು ಪತ್ತೆ ಆಗಿರುವುದರಿಂದ ಅವರನ್ನು ಬಂಧಿಸಲಾಗಿದೆ. ಸದ್ಯ ಈ ಕುರಿತಾಗಿ ನಗರದಲ್ಲಿ ಅರಣ್ಯ ಇಲಾಖೆ  ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದು, ಸಂತೋಷ್​ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದಾರೆಂಬ ದೂರು ಇತ್ತು. ಆ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ವನ್ಯ ಜೀವಿಗಳ ಕಾನೂನಿನ ಆಧಾರದ ಮೇಲೆ ಅರೆಸ್ಟ್ ಮಾಡಲಾಗಿದೆ. ಇದರಲ್ಲಿ ಯಾರೇ ಇದ್ದರೂ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ವನ್ಯಜೀವಿಗಳ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ. ನನಗೆ ನಮ್ಮ ಅಧಿಕಾರಿಗಳು ದೂರವಾಣಿ ಮೂಲಕ ಮಾಹಿತಿ ಕೊಟ್ಟಿದಾರೆ. ತನಿಖೆ ನಡೆಸಿ ಹುಲಿಯ ಉಗುರು ಎಂದು ಗುರುತಿಸಿದ ಮೇಲೆ ಕಾನೂನು ರೀತಿ ಕ್ರಮ ಜರುಗಿಸುತ್ತಾರೆ ಎಂದರು.

ಇದನ್ನೂ ಓದಿ: ವರ್ತೂರು ಸಂತೋಷ್ ಬಂಧನದ ಹಿಂದೆ ಇದೆ ಷಡ್ಯಂತ್ರ?

ಕಳ್ಳಬೇಟೆಗಳ ಮೂಲಕ ಈ ರೀತಿ ಮಾರಾಟ ಆಗಿರಬಹುದು. ದಾಂಡೆಲಿಯಲ್ಲಿ ಇಂತಹ ಕಳ್ಳಬೇಟೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಅರಣ್ಯ ಇಲಾಖೆ ಇಂತಹ ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ. ಅಧಿಕಾರಿಗಳಿಗೆ ಸಂಪೂರ್ಣವಾದ ಅಧಿಕಾರ ಕೊಡಲಾಗಿದೆ. ಯಾವುದೇ ರೀತಿಯ ಒತ್ತಡಕ್ಕೊಳಗಾಗದೇ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಸಂತೋಷ್ ಪರ ವಕೀಲ ನಟರಾಜ್ ಹೇಳಿದ್ದಿಷ್ಟು

ಸಂತೋಷ್ ಪರ ವಕೀಲ ನಟರಾಜ್​ ಟಿವಿ9 ಜೊತೆ ಮಾತನಾಡಿದ್ದು, ರಾತ್ರಿ 10.30ಕ್ಕೆ ನನಗೆ ಅವರ ದೊಡ್ಡಪ್ಪ ಕರೆ ಮಾಡಿ ತಿಳಿಸಿದರು. ಈ ರೀತಿ ಕಗ್ಗಲೀಪುರ ಅರಣ್ಯಾಧಿಕಾರಿಗಳು ಬಂಧನ ಮಾಡಿದ್ದಾರೆ ಅಂತ ತಿಳಿಸಿದರು. ರಾತ್ರಿಯೇ ತನಿಖಾಧಿಕಾರಿಯನ್ನು ಭೇಟಿ ಮಾಡಿದೆ. ಬೆಳಗ್ಗೆ 10.30 ಗೆ ಬನ್ನಿ ಎಂದು ಹೇಳಿದ್ದರು.

ಇದನ್ನೂ ಓದಿ: Bigg Boss Kannada: ಹುಲಿಯುಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧಿಸಿದ ಅರಣ್ಯಾಧಿಕಾರಿಗಳು

ರಾತ್ರಿ ಸಂತೋಷ್​ರನ್ನು ಭೇಟಿ ಮಾಡಿದ್ದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ನಾನ್ ಬೇಲಬಲ್ ಸೆಕ್ಷನ್ ಆಗಿದೆ. ಎರಡು ದಿನ ಕೋರ್ಟ್ ರಜೆ ಇದೆ ಹೀಗಾಗಿ ಜಡ್ಜ್ ಮನೆಗೆ ಪ್ರೊಡ್ಯೂಸ್ ಮಾಡುತ್ತಾರೆ. ಬೆಂಗಳೂರು ಎಸಿಜೆಂಎಂ ಕೋರ್ಟ್​ನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸುತ್ತಾರೆ. ನಾನು 25 ವರ್ಷದಿಂದಲೂ ಫ್ಯಾಮಿಲಿ ಫ್ರೆಂಡ್ ಕೂಡ ಹೌದು. ಹಾಜರು ಪಡಿಸಿದ ತಕ್ಷಣವೇ ನಾವು ಕೂಡ ಬೇಲ್​ಗೆ ಅಪ್ಲೈ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಂತೋಷ್​ನನ್ನು ಜಡ್ಜ್​ ನಿವಾಸಕ್ಕೆ ಕರೆದೊಯ್ದ ಅರಣ್ಯಾಧಿಕಾರಿಗಳು

ಸದ್ಯ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್​ರನ್ನು ಕೋರಮಂಗಲದ ಎನ್​ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಅರಣ್ಯಾಧಿಕಾರಿಗಳು ಕರೆದೊಯ್ದಿದ್ದಾರೆ. ಈ ವೇಳೆ ಮಾಸ್ಕ್ ಮತ್ತು ಕ್ಯಾಪ್ ಧರಿಸಿ ಅರಣ್ಯ ಇಲಾಖೆಯ ವಾಹನದಲ್ಲಿ ವರ್ತೂರು ಸಂತೋಷ್ ತೆರಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:05 pm, Mon, 23 October 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?