AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿಯುತ್ತಿದೆ ಕಾರಂಜಾ ಜಲಾಶಯದ ನೀರಿನ ಮಟ್ಟ: ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಭೀತಿ

ಬೀದರ್ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯದಲ್ಲಿ ನೀರಿನ ಸಂಗ್ರಹ 3.305 ಟಿಎಂಸಿಗೆ ಕುಸಿದಿದ್ದು, ಮಳೆ ಕೊರತೆ ಮತ್ತು ಕಾಲುವೆ ಸೋರಿಕೆಯಿಂದಾಗಿ ಮುಂದಿನ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಎದುರಾಗುವ ಆತಂಕ ಸೃಷ್ಟಿಯಾಗಿದೆ. 7.691 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ ಕೇವಲ 3.305 ಟಿಎಂಸಿ ನೀರು ಮಾತ್ರ ಉಳಿದಿದೆ.

ಕುಸಿಯುತ್ತಿದೆ ಕಾರಂಜಾ ಜಲಾಶಯದ ನೀರಿನ ಮಟ್ಟ: ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಭೀತಿ
ಬರಿದಾಗುತ್ತಿರುವ ಕಾರಂಜಾ ಜಲಾಶಯ
ಸುರೇಶ್ ನಾಯಕ್
| Edited By: |

Updated on: Nov 20, 2026 | 5:19 PM

Share

ಬೀದರ್​​, ನವೆಂಬರ್​​ 20: ಬೀದರ್​​ ಜಿಲ್ಲೆಯ ಜನರಿಗೆ ನೀರಿನ ಪ್ರಮುಖ ಆಸರೆಯಾಗಿರುವ ಕಾರಂಜಾ ಜಲಾಶಯದಲ್ಲಿ ನೀರಿನ ಸಂಗ್ರಹ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಒಟ್ಟು 7.691 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ ಕೇವಲ 3.305 ಟಿಎಂಸಿ ನೀರು ಮಾತ್ರ ಉಳಿದಿದೆ. ಅಂದರೆ ಜಲಾಶಯದ ಅರ್ಧಕ್ಕಿಂತಲೂ ಕಡಿಮೆ ಪ್ರಮಾಣದ ನೀರು ಮಾತ್ರ ಸಂಗ್ರಹವಿದೆ. ಹೀಗಾಗಿ ಅಧಿಕಾರಿಗಳು ಈಗಲೇ ಎಚ್ಚೆತ್ತುಕೊಂಡು ನೀರಿನ ಸಂರಕ್ಷಣೆಗೆ ಕ್ರಮ ಕೈಗೊಳ್ಳದಿದ್ದರೆ ಬೇಸಿಗೆಯಲ್ಲಿ ಜನರು ಹನಿ ನೀರಿಗೂ ಪರದಾಡುವ ಪರಿಸ್ಥಿತಿ ಬರಬಹುದೆಂಬ ಆತಂಕ ಎದುರಾಗಿದೆ.

ನೀರಿನ ಮಟ್ಟ ಕುಸಿತಕ್ಕೆ ಕಾರಣಗಳು

ಈ ವರ್ಷ ಬೀದರ್ ಜಿಲ್ಲೆಯಲ್ಲಿ ಮಳೆ ಕೈಕೊಟ್ಟಿರುವುದು ನೀರಿನ ಮಟ್ಟ ಇಳಿಕೆಗೆ ಪ್ರಮುಖ ಕಾರಣ. ಜಲಾಶಯಕ್ಕೆ ಹೊಸ ಒಳಹರಿವು ಇಲ್ಲದೆ, ಸಂಗ್ರಹಗೊಂಡ ನೀರನ್ನು ಮಾತ್ರ ಅವಲಂಬಿಸಬೇಕಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಗೆ ಕಾರಂಜಾ ಜಲಾಶಯದಿಂದಲೇ ಕುಡಿಯುವ ನೀರನ್ನು ಪಂಪ್ ಮಾಡಲಾಗುತ್ತಿದೆ. ಇದು ನೀರಿನ ಮಟ್ಟ ಇಳಿಕೆಗೆ ಇನ್ನೊಂದು ಕಾರಣ. ಇದಲ್ಲದೆ, ಜಲಾಶಯದಿಂದ ರೈತರಿಗೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಆದರೆ, ನೀರಿನ ಮಟ್ಟ ತೀವ್ರವಾಗಿ ಕುಸಿದಿರುವುದರಿಂದ ಕಳೆದ ಒಂದು ತಿಂಗಳಿನಿಂದ ರೈತರ ಜಮೀನುಗಳಿಗೆ ನೀರು ಬಿಡುವುದನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ದುರದೃಷ್ಟವಶಾತ್, ನೀರು ಪೂರೈಕೆ ನಿಲ್ಲಿಸಿದ್ದರೂ ಕೂಡ, ಕಾಲುವೆಗಳ ಮೂಲಕ ಪ್ರತಿನಿತ್ಯ ಸಾವಿರಾರು ಲೀಟರ್ ನೀರು ಸೋರಿಕೆಯಾಗಿ ವ್ಯರ್ಥವಾಗಿ ಹರಿದು ಹೋಗುತ್ತಿದೆ. ಇನ್ನು, ಜಲಾಶಯದ ಹಿನ್ನೀರಿನಲ್ಲಿ ಸಾವಿರಾರು ರೈತರು ಪಂಪ್ ಸೆಟ್‌ಗಳ ಮೂಲಕ ತಮ್ಮ ಜಮೀನುಗಳಿಗೆ ನೀರನ್ನು ಹಾಯಿಸಿಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ಬೀದರ್ ಜಿಲ್ಲೆಯಲ್ಲಿ ಚಳಿಗಾಲದಲ್ಲೂ ಕೂಡ ಅನಿರೀಕ್ಷಿತವಾಗಿ ಬಿಸಿಲಿನ ತಾಪಮಾನ ಹೆಚ್ಚಿದೆ. ಇದರ ಪರಿಣಾಮವಾಗಿ ಜಲಾಶಯದಲ್ಲಿರುವ ನೀರು ಆವಿಯಾಗಿ ನಷ್ಟವಾಗುತ್ತಿದೆ. ಈ ಎಲ್ಲಾ ಅಂಶಗಳು ಒಟ್ಟಾಗಿ ನೀರಿನ ಪ್ರಮಾಣ ದಿನೇ ದಿನೇ ಕುಸಿಯಲು ಕಾರಣವಾಗಿವೆ.

ಇದನ್ನೂ ಓದಿ:  ಸೌಲಭ್ಯಗಳ ಮಹಾಪೂರ, ಸಾಧನೆಯ ಶಿಖರ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಘೋಡಂಪಳ್ಳಿ ಸರ್ಕಾರಿ ಶಾಲೆ

ಕುಡಿಯುವ ನೀರಿಗಾಗಿಯೇ ಸುಮಾರು 1.5 ಟಿಎಂಸಿ ಬಳಕೆ

ಕಳೆದ ವರ್ಷ ಇದೇ ಅವಧಿಯಲ್ಲಿ ಕಾರಂಜಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿತ್ತು. ಡ್ಯಾಂ ಭರ್ತಿಯಾಗಿದ್ದರಿಂದ ಕಾಲುವೆಗಳು ಮತ್ತು ಗೇಟ್‌ಗಳ ಮೂಲಕ ಲಕ್ಷಾಂತರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿತ್ತು. ಆದರೆ, ಈ ವರ್ಷ ಪರಿಸ್ಥಿತಿ ತದ್ವಿರುದ್ಧವಾಗಿದೆ. ಕಳೆದ ವರ್ಷ ತುಂಬಿ ತುಳುಕುತ್ತಿದ್ದ ಡ್ಯಾಂ ಈ ವರ್ಷ ಖಾಲಿಯಾಗುವ ಸ್ಥಿತಿಗೆ ತಲುಪಿದೆ. ಬೀದರ್ ಜಿಲ್ಲೆಯು ಪ್ರತಿ ವರ್ಷ ಕುಡಿಯುವ ನೀರಿಗಾಗಿ ಸುಮಾರು 1.5 ಟಿಎಂಸಿ ನೀರನ್ನು ಬಳಸುತ್ತದೆ. ಇದಲ್ಲದೆ, ಜಲಾಶಯದಲ್ಲಿ ಡೆಡ್ ಸ್ಟೋರೇಜ್ ಆಗಿ ಕನಿಷ್ಠ 1 ರಿಂದ 1.5 ಟಿಎಂಸಿ ನೀರು ಇರುತ್ತದೆ. ಈ ನೀರನ್ನು ಯಾವುದೇ ಕಾರಣಕ್ಕೂ ಬಳಸಲು ಸಾಧ್ಯವಿಲ್ಲ, ಏಕೆಂದರೆ ಅದು ಜಲಚರಗಳು, ಪಕ್ಷಿಗಳು ಮತ್ತು ಪರಿಸರ ವ್ಯವಸ್ಥೆಗೆ ಅನಿವಾರ್ಯ. ಹೀಗಾಗಿ ಕಾರಂಜಾ ಜಲಾಶಯದಲ್ಲಿನ ನೀರಿನ ಮಟ್ಟ ಕುಸಿತವು ಬೀದರ್ ಜಿಲ್ಲೆಯ ಜನರಿಗೆ ಮಾತ್ರವಲ್ಲದೆ, ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೂ ತೀವ್ರ ಆತಂಕವನ್ನು ಸೃಷ್ಟಿಸಿದೆ. ಮುಂದಿನ ದಿನಗಳಲ್ಲಿ ನೀರಿನ ನಿರ್ವಹಣೆ ಮತ್ತು ಪರ್ಯಾಯ ವ್ಯವಸ್ಥೆಗಳ ಬಗ್ಗೆ ಗಂಭೀರ ಚಿಂತನೆ ನಡೆಸುವ ತುರ್ತು ಅನಿವಾರ್ಯತೆ ಎದುರಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸುರೇಶ್ ನಾಯಕ್
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!
ಗೋಣಿಚೀಲ ಹೊದ್ದು ತಹಶೀಲ್ದಾರ್ ಕಚೇರಿ ಗೇಟ್ ಬಳಿಯೇ ಮಲಗಿದ ರೈತ!
ರಂಭಾಪುರಿ ಪೀಠದ  ಬಗ್ಗೆಯೂ ‘ಬಸವ ಮಂಟಪ’ ಪುಸ್ತಕದಲ್ಲಿ ವಿವಾದಾತ್ಮಕ ಉಲ್ಲೇಖ!
ರಂಭಾಪುರಿ ಪೀಠದ  ಬಗ್ಗೆಯೂ ‘ಬಸವ ಮಂಟಪ’ ಪುಸ್ತಕದಲ್ಲಿ ವಿವಾದಾತ್ಮಕ ಉಲ್ಲೇಖ!
ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಅದ್ದೂರಿ ಚಾಲನೆ
ಟಿವಿ9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಅದ್ದೂರಿ ಚಾಲನೆ
ಕ್ಯಾಪ್ಟನ್ ಆದ ಮೊದಲ ಹೆಜ್ಜೆಯಲ್ಲೇ ಎಡವಿದ ಗಾನವಿ: ವಿಡಿಯೋ
ಕ್ಯಾಪ್ಟನ್ ಆದ ಮೊದಲ ಹೆಜ್ಜೆಯಲ್ಲೇ ಎಡವಿದ ಗಾನವಿ: ವಿಡಿಯೋ
‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್ ಕ್ಷಮೆಯಾಚನೆ
‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್ ಕ್ಷಮೆಯಾಚನೆ