ಬೀದರ್: ಮದುವೆಯಾದ ಮೂರನೇ ದಿನಕ್ಕೆ ಅಪಘಾತಕ್ಕೆ ಬಲಿಯಾದ ಯುವಕ

ಮದುವೆಯಾದ ಮೂರನೇ ದಿನಕ್ಕೆ ಯುವಕನೋರ್ವ ಬೈಕ್ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೀದರ್ ನಗರದಲ್ಲಿ ನಡೆದಿದೆ.

ಬೀದರ್: ಮದುವೆಯಾದ ಮೂರನೇ ದಿನಕ್ಕೆ ಅಪಘಾತಕ್ಕೆ ಬಲಿಯಾದ ಯುವಕ
ಬೈಕ್ ಅಪಘಾತದಲ್ಲಿ ಮೃತಪಟ್ಟ ಬೀದರ್​ನ ನವ ವಿವಾಹಿತ ಅರುಣ ಕಾಶಿನಾಥ ಪಡಸಾಲೆ
Follow us
ಸುರೇಶ ನಾಯಕ
| Updated By: Rakesh Nayak Manchi

Updated on: Jul 02, 2023 | 8:37 PM

ಬೀದರ್: ಮದುವೆಯಾದ ಮೂರನೇ ದಿನಕ್ಕೆ ಯುವಕನೋರ್ವ ಬೈಕ್ ಅಪಘಾತದಲ್ಲಿ (Accident) ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೀದರ್ (Bidar) ನಗರದಲ್ಲಿ ನಡೆದಿದೆ. ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ಬಳಿದ ಬಳಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ‌ಸಂಸ್ಥತೆಯ ಬಸ್ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕಮಲನಗರ ತಾಲೂಕಿನ ಬಳತ್ (ಬಿ) ಗ್ರಾಮದ ಅರುಣ ಕಾಶಿನಾಥ ಪಡಸಾಲೆ (33) ಮೃತಪಟ್ಟ ಯುವಕ.

ಕಳೆದ ಜೂ. 29 ರಂದು ಮದುವೆಯಾಗಿದ್ದ ಅರುಣ ಕಾಶಿನಾಥ, ತನ್ನ ಪತ್ನಿ ಗ್ರಾಮ ಹುಮನಾಬಾದ ತಾಲೂಕಿನ ಮುಗನೂರ್‌ನಿಂದ ನೌಬಾದ್‌ಗೆ ಬೈಕ್ ಮೇಲೆ ವಾಪಸ್ ಬರುವಾಗ ಸರ್ಕಾರಿ ಬಸ್‌ಗೆ ಡಿಕ್ಕಿ ಆಗಿದೆ. ತೀವ್ರ ರಕ್ತಸ್ರಾವವಾದ ಹಿನ್ನಲೆ ಅರುಣ ಕಾಶಿನಾಥ ಸ್ಥಳದಲ್ಲೇ ಮೃಪಟ್ಟಿದ್ದಾನೆ.

ಇದನ್ನೂ ಓದಿ: ವಿಜಯನಗರದಲ್ಲಿ ಎರಡು ಆಟೋ-ಲಾರಿ ನಡುವೆ ಅಪಘಾತ ಪ್ರಕರಣ: ಮೃತರ ಸಂಖ್ಯೆ ಎಂಟಕ್ಕೆ ಏರಿಕೆ

ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಅರುಣ ಕಾಶಿನಾಥ, ನೌಬಾದ್‌ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಈಗ ಮದುವೆಯಾದ ಎರಡು ದಿನದಲ್ಲೇ ದುರಂತ ಸಂಭವಿಸಿರುವುದು ಎರಡು ಕುಟುಂಬಗಳಿಗೆ ಆಘಾತವನ್ನುಂಟು ಮಾಡಿದೆ. ಸ್ಥಳಕ್ಕೆ ನೂತನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್