ಬೀದರ್: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ತ್ರಿಪುರಾಂತ ಮುಖ್ಯ ರಸ್ತೆಯಲ್ಲಿ ಆನಂದ ಹಾಗೂ ದಿಗಂಬರ ದಾಸೊರೆ ಎನ್ನುವರಿಬ್ಬರ ನಡುವೆ ಜಗಳವಾಗಿದ್ದು ಅದು ಅತಿರೇಕಕ್ಕೆ ತಿರುಗಿ ಇಬ್ಬರು ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ.

ಬೀದರ್: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ
ನಡು ರಸ್ತೆಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ
Follow us
TV9 Web
| Updated By: ಆಯೇಷಾ ಬಾನು

Updated on:Feb 28, 2023 | 9:46 AM

ಬೀದರ್: ಕ್ಷುಲ್ಲಕ ವಿಚಾರಕ್ಕೆ ಶುರುವಾಗಿದ್ದ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದ ತ್ರಿಪುರಾಂತ ಬಳಿ ನಡೆದಿದೆ. ಮಾರಕಾಸ್ತ್ರದಿಂದ ಕೊಚ್ಚಿ ಆನಂದ ಫುಲೆ(26) ಬರ್ಬರ ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಜಿದ್ದಿನಲ್ಲಿದ್ದ ಯುವಕರ ನಡುವೆ ಪರಸ್ಪರ ಹೊಡೆದಾಟವಾಗಿದ್ದು ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಉದಯ್ ಹಾಗೂ ಆತನ ಗುಂಪು ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ತ್ರಿಪುರಾಂತ ಮುಖ್ಯ ರಸ್ತೆಯಲ್ಲಿ ಆನಂದ ಹಾಗೂ ದಿಗಂಬರ ದಾಸೊರೆ ಎನ್ನುವರಿಬ್ಬರ ನಡುವೆ ಜಗಳವಾಗಿದ್ದು ಅದು ಅತಿರೇಕಕ್ಕೆ ತಿರುಗಿ ಇಬ್ಬರು ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಆನಂದ ಪುಲೆಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರದ ಉಮ್ಮರಗಾ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಬಸವಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕೊಲೆ ಯತ್ನ ಆರೋಪ: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸೋದರಿ ಸೇರಿ ಐವರ ವಿರುದ್ಧ ಎಫ್​ಐಆರ್

ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಬೆಂಗಳೂರು: ನಗರದ ನಾಯಂಡಹಳ್ಳಿ ಪೆಟ್ರೊಲ್ ಬಂಕ್ ಬಳಿಯ ಮನೆಯಲ್ಲಿಯೊಂದರಲ್ಲಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಣಕಾಸಿನ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಲಿಯಾಖತ್ ಅಲಿಖಾನ್​ನನ್ನು( 44) ಕೊಚ್ಚಿ ಕೊಲೆಗೈದಿದ್ದಾರೆ. ಸ್ನೇಹಿತರಾದ ವಾಸೀಂ ಮತ್ತು ಜೋಹರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಲೇಔಟ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹಾಸ್ಟೆಲ್​ ಕಟ್ಟಡದಿಂದ ಜಿಗಿದು MBBS ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ಇನ್ನೇನು ಓದು ಮುಗಿದು ವೈದ್ಯನಾಗಬೇಕು ಎನ್ನುವಷ್ಟರಲ್ಲೇ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಸಾವಿನ ಮನೆ ಸೇರಿದ್ದಾನೆ. ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ (MBBS Student) ಶ್ರೀರಾಮ್ ಹಾಸ್ಟೆಲ್​ ಕಟ್ಟಡದಿಂದ ಜಿಗಿದು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾನೆ. ಈ ಘಟನೆ ಇಂದು (ಫೆಬ್ರುವರಿ 28) ಬೀದರ್​ನ(Bidar) ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:21 am, Tue, 28 February 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ