ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ, ಭೌತಶಾಸ್ತ್ರ ಕಡ್ಡಾಯವಲ್ಲ -AICTE

BE - AICTE | ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ ಪದವಿಪೂರ್ವ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜುಗಳಿಗೆ ಪ್ರವೇಶಪಡೆಯಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊಂದಿರಬೇಕಿಲ್ಲ.

ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ, ಭೌತಶಾಸ್ತ್ರ ಕಡ್ಡಾಯವಲ್ಲ -AICTE
ಪ್ರಾತಿನಿಧಿಕ ಚಿತ್ರ
Follow us
| Updated By: ಸಾಧು ಶ್ರೀನಾಥ್​

Updated on: Mar 12, 2021 | 12:28 PM

ಬೆಂಗಳೂರು: ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳ ವ್ಯಾಸಂಗ ಕಡ್ಡಾಯವಲ್ಲ. ಈ ಹಿಂದೆ ಎಂಜಿನಿಯರಿಂಗ್ ಪ್ರವೇಶಕ್ಕೆ ಗಣಿತಶಾಸ್ತ್ರ, ರಸಾಯನಶಾಸ್ತ್ರ & ಭೌತಶಾಸ್ತ್ರ ಕಡ್ಡಾಯವಾಗಿತ್ತು. ಆದ್ರೆ ಈಗ AICTE (All India Council For Technical Education) ಆ ನಿಯಮವನ್ನ ಸಡಿಲ ಮಾಡಿದೆ. ಹೀಗಾಗಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಿದ್ದ ನಿಯಮ ಸಡಿಲಗೊಂಡಿದೆ. ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಗಣಿತಶಾಸ್ತ್ರ, ರಸಾಯನಶಾಸ್ತ್ರ ಕಡ್ಡಾಯವಲ್ಲ. ಜೊತೆಗೆ ಬೇರೆ ವಿಭಾಗದಲ್ಲಿ ವ್ಯಾಸಂಗ ಮಾಡಿದವರಿಗೂ ನಿಯಮ ಸಡಿಲ ಮಾಡಿ ಅವಕಾಶ ನೀಡಲಾಗಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ ಪದವಿ ಪೂರ್ವ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜುಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊಂದಿರಬೇಕಿಲ್ಲ. 2021-22ರ ಶೈಕ್ಷಣಿಕ ವರ್ಷದಿಂದ ಗಣಿತ ಮತ್ತು ಭೌತಶಾಸ್ತ್ರ ಈ ಎರಡೂ ವಿಷಯಗಳನ್ನು ವ್ಯಾಸಂಗ ಮಾಡದೇ ಇದ್ದರೂ ನಾಲ್ಕು ವರ್ಷದ ಬಿಇ ವ್ಯಾಸಂಗ ಮಾಡಬಹುದು. ಸದ್ಯ ಈಗ ಎಐಸಿಟಿಇ 14 ವಿಷಯಗಳ ಪಟ್ಟಿ ಬಿಡುಗಡೆ ಮಾಡಿದೆ. 14 ವಿಷಯಗಳಲ್ಲಿ 3 ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಠ 45ರಷ್ಟು ಅಂಕ ಗಳಿಸಿದವರಿಗೆ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತೆ.

ಆ 14 ವಿಷಯಗಳ ಪಟ್ಟಿ ಹೀಗಿದೆ ಗಣಿತಶಾಸ್ತ್ರ, ರಸಾಯನಶಾಸ್ತ್ರ, ಭೌತಶಾಸ್ತ್ರ, ಎಲೆಕ್ಟ್ರಾನಿಕ್, ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ, ಜೀವಶಾಸ್ತ್ರ, ಇನ್ಫೋಮ್ಯಾಟಿಕ್ ಪ್ರಾಕ್ಟೀಸಸ್, ಬಯೋ ಟೆಕ್ನಾಲಜಿ, ಟೆಕ್ನಿಕಲ್ ವೆಕೇಷನಲ್ ಸಬ್ಜೆಕ್ಟ್, ಇಂಜಿನಿಯರಿಂಗ್ ಗ್ರಾಫಿಕ್ಸ್, ವ್ಯವಹಾರ ಅಧ್ಯಯನ, ಉದ್ಯಮಶೀಲತೆ ವ್ಯಾಸಂಗ. ಈ ಪೈಕಿ 3 ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಠ 45ರಷ್ಟು ಅಂಕ ಗಳಿಸಿದವರಿಗೆ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತೆ. NEP ಆಧಾರದಡಿ 2021-22ನೇ ಸಾಲಿನಿಂದಲೇ ಹೊಸ ನಿಯಮ ಅನ್ವಯ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Ragging | ಇಂಜಿನಿಯರಿಂಗ್ ಕಾಲೇಜ್​ನಲ್ಲಿ ರ‍್ಯಾಗಿಂಗ್ ಭೂತ.. ನಾಲ್ವರು ಅರೆಸ್ಟ್

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?