ಪೋಕ್ಸೋ ಕೇಸ್‌ನಲ್ಲಿ ಬಿಎಸ್ವೈಗೆ ಮತ್ತೆ ಬಿಗ್ ರಿಲೀಫ್: ಮತ್ತೊಂದೆಡೆ ರೇವಣ್ಣಗೆ ಜಾಮೀನು ತೀರ್ಪು ಟೆನ್ಷನ್
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ. ಯಡಿಯೂರಪ್ಪರನ್ನು ಬಂಧಿಸದಂತೆ ನೀಡಿದ್ದ ಆದೇಶವೂ ವಿಸ್ತರಣೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣದ ರೇವಣ್ಣ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ಬೆಂಗಳೂರು, ಆಗಸ್ಟ್ 1: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧದ ಪೋಕ್ಸೋ (Pocso) ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಆಗಸ್ಟ್ 22ಕ್ಕೆ ನಿಗದಿಪಡಿಸಿ ಹೈಕೋರ್ಟ್ ಆದೇಶಿಸಿದೆ. ಅಲ್ಲಿಯವರೆಗೆ ಖುದ್ದು ಹಾಜರಾತಿಯಿಂದ ಬಿಎಸ್ ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ. ಜೊತೆಗೆ ಯಡಿಯೂರಪ್ಪರನ್ನು ಬಂಧಿಸದಂತೆ ನೀಡಿದ್ದ ಆದೇಶವನ್ನು ವಿಸ್ತರಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ.
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಕೆಯಾಗಿತ್ತು. ಸಿಐಡಿ ಪೊಲೀಸರು ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್ಗೆ ಸಲ್ಲಿಸಲಾಗಿತ್ತು. ಬಿಎಸ್ ಯಡಿಯೂರಪ್ಪ ಮಾತ್ರವಲ್ಲದೇ ಸಾಕ್ಷ್ಯ ನಾಶದ ಆರೋಪದ ಮೇಲೆ ವೈ.ಎಂ.ಅರುಣ್, ಎಂ. ರುದ್ರೇಶ್, ಜಿ.ಮರಿಸ್ವಾಮಿ ವಿರುದ್ಧವೂ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಆ.1ರಂದು ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು.
ಇದನ್ನೂ ಓದಿ: ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ಮಧ್ಯಂತರ ಜಾಮೀನು ವಿಸ್ತರಣೆ
ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಇತ್ತೀಚೆಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಜಾಮೀನು ವಿಸ್ತರಣೆ ಕೂಡ ಮಾಡಲಾಗಿತ್ತು. ಹೀಗಾಗಿ ಬಿಎಸ್ವೈ ಬಂಧನ ಭೀತಿಯಿಂದ ಪಾರಾಗಿದ್ದರು.
ರೇವಣ್ಣ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಪೂರ್ಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಮೈಸೂರು ಜಿಲ್ಲೆಯ ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ. ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿಯನ್ನು ಇತ್ತೀಚೆಗೆ ಮುಂದೂಡಲಾಗಿತ್ತು.
ಇದನ್ನೂ ಓದಿ: ಸಂಕಷ್ಟ ಪರಿಹಾರಕ್ಕಾಗಿ ದೇವರ ಮೊರೆ ಹೊಕ್ಕಿರುವ ಹೆಚ್ ಡಿ ರೇವಣ್ಣ ಮಂದಿರದ ಬಳಿ ಟಿವಿ9 ವರದಿಗಾರನಿಗೆ ಏನೂ ಕೇಳಬೇಡಿ ಅಂದರು
ಕೆಆರ್ ನಗರ ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ರೇವಣ್ಣಗೆ ಜೈಲು ಶಿಕ್ಷೆಯಾಗಿತ್ತು. ಕಿಡ್ನ್ಯಾಪ್ ಸಂತ್ರಸ್ತೆಯ ದೂರಿನ ಮೇಲೆ ರೇವಣ್ಣ ವಿರುದ್ಧ ಕೇಸ್ ದಾಖಲಾಗಿತ್ತು. 10 ದಿನ ಜೈಲು ಅನುಭವಿಸಿ ಹೊರ ಬಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.