ಪ್ರಜ್ವಲ್ ರೇವಣ್ಣ​ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ವಕೀಲ ದೇವರಾಜೇಗೌಡಗೆ ಬಿಗ್​ ರಿಲೀಫ್​

ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಸೋಮವಾರ ಜಾಮೀನು ಮಂಜೂರು ಮಾಡಿ ನ್ಯಾ.ಎಂ.ಜಿ.ಉಮಾರಿದ್ದ ಪೀಠ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ರಿಲೀಫ್ ಸಿಕ್ಕಿದೆ. ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ​ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ವಕೀಲ ದೇವರಾಜೇಗೌಡಗೆ ಬಿಗ್​ ರಿಲೀಫ್​
ಪ್ರಜ್ವಲ್ ರೇವಣ್ಣ​ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ವಕೀಲ ದೇವರಾಜೇಗೌಡಗೆ ಬಿಗ್​ ರಿಲೀಫ್​
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Jul 01, 2024 | 3:53 PM

ಬೆಂಗಳೂರು, ಜುಲೈ 01: ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ (Devarajegowda) ಚಿಇಂದು ಹೈಕೋರ್ಟ್ (High Court) ಏಕಸದಸ್ಯ ಪೀಠದಿಂದ ಜಾಮೀನು ಮಂಜೂರು ಮಾಡಿ ನ್ಯಾ.ಎಂ.ಜಿ. ಉಮಾರಿದ್ದ ಪೀಠ ಆದೇಶ ಹೊರಡಿಸಿದೆ. 29 ಡಿಸೆಂಬರ್​  2023ರಂದು ಅತ್ಯಾಚಾರವೆಂದು 01 ಏಪ್ರಿಲ್ 2024ರಂದು ದೂರು ನೀಡಿದ್ದಾರೆ. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ಮಾರ್ಚ್​​ 28 ರಂದು ಮತ್ತು ಮಾರ್ಚ್​ 29ರಂದು ಸಂತ್ರಸ್ತೆ ಪತಿ ದೂರು ನೀಡಿದ್ದರು. ಆದರೆ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ ಎಂದು ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ.

ಆ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಘಟನೆಯ ಬಳಿಕ 90 ದಿನ ವಿಳಂಬವಾಗಿ ದೂರು ದಾಖಲಿಸಿದ್ದಾರೆ. ವಿಡಿಯೋ ಕರೆಗಳನ್ನು ಏಕೆ ಸ್ವೀಕರಿಸಿದ್ದರೆಂಬುದಕ್ಕೆ ಸಮರ್ಥನೆ ಕಂಡುಬರುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಕೀಲ ದೇವರಾಜೇಗೌಡಗೆ ಸಂಕಷ್ಟ; ಒಂದು ದಿನ ಎಸ್​ಐಟಿ ಕಸ್ಟಡಿಗೆ ನೀಡಿದ ಕೋರ್ಟ್​

ಹಳೇ ಕೇಸ್​ಗಳೇ ದೇವರಾಜೇಗೌಡಗೆ  ಉರುಳಾಗಿದ್ದರು. ಒಂದೊಂದೇ ಕೇಸ್​ಗಳು ದಾಖಲಾಗಿದ್ದವು. ಅತ್ಯಾಚಾರ, ಜಾತಿ ನಿಂದನೆ ಕೇಸ್​ ಬಳಿಕ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಕೂಡ ದೂರು ದಾಖಲಾಗಿತ್ತು. ಹಾಸನದಲ್ಲಿ ಮಾರ್ಚ್​ 14ರಂದು ದೇವರಾಜೇಗೌಡ ವಿರುದ್ಧ ಡಿಸಿ ದೂರು ನೀಡಿದ್ದರು. ಡಿಸಿ ದೂರು ಆಧರಿಸಿ ಹಾಸನ ನಗರ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡ ಪೊಲೀಸರಿಗೆ ಸಿಕ್ಕಿದ್ದು ಹೇಗೆ? ಇಲ್ಲಿದೆ ಓದಿ

ಸಂತ್ರಸ್ತೆ ದೂರಿನ ಮೇಲೆ ಅತ್ಯಾಚಾರ ಕೇಸ್​ನಲ್ಲಿ ವಕೀಲ ದೇವರಾಜೇಗೌಡ ಲಾಕ್ ಆಗಿದ್ದರು. ಮೇ 24ರವರೆಗೂ ನ್ಯಾಯಾಂಗ ಬಂಧನ ಆದೇಶ ಹೊರಡಿಸಲಾಗಿತ್ತು. 14 ದಿನಗಳ ಕಾಲ ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್​ ಮಾಡಲಾಗಿತ್ತು. ಈ ವೇಳೆ ಇನ್ನು ಎಂಟು ದಿನಗಳಲ್ಲಿ ಜೈಲಿನಿಂದ ಹೊರಗೆ ಬರ್ತೀನಿ, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತೆ ಎಂದು ದೇವರಾಜೇಗೌಡ ಹೇಳಿದ್ದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಕೈವಾಡವಿದೆ ಎಂದು ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದರು.

ಸೂರಜ್ ರೇವಣ್ಣಗೆ 2 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧನವಾಗಿರುವ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಇನ್ನೆರೆಡು ದಿನ ಪೊಲೀಸ್ ಕಸ್ಟಡಿ ವಿಸ್ತರಣೆಯಾಗಿದೆ. 5 ದಿನ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಆದ್ರೆ, 42ನೇ ಎಸಿಎಂಎಂ ಕೋರ್ಟ್, ಸೂರಜ್​ಗೆ​ ಎರಡು ದಿನ ಪೊಲೀಸ್ ಕಸ್ಟಡಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:49 pm, Mon, 1 July 24

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ