ವಾಹನ ಮಾಲೀಕರಿಗೆ ಬಿಗ್ ರಿಲೀಫ್: ಹೆಚ್​ಎಸ್​ಆರ್​ಪಿ ಅಳವಡಿಸದ ವಾಹನ ಮಾಲೀಕರ ಮೇಲೆ ಸದ್ಯಕ್ಕಿಲ್ಲ ಕ್ರಮ

ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್​ ಪ್ಲೇಟ್ (ಹೆಚ್​ಎಸ್​ಆರ್​ಪಿ) ಅಳವಡಿಸುವ ವಿಚಾರ ಇತ್ತೀಚಿಗೆ ಸಾಕಷ್ಟು ಸುದ್ದಿ ಮಾಡಿತ್ತು. ವಾಹನ ಸವಾರರ ತಲೆನೋವಿಗೆ ಕಾರಣವಾಗಿತ್ತು. ಜೊತೆಗೆ ಅವಧಿ ಮುಗಿದರೆ ಸಾರಿಗೆ ಇಲಾಖೆಗೆ ದಂಡ ಪಾವತಿಬೇಕು ಎಂಬ ಆತಂಕವೂ ಇತ್ತು. ಆದರೆ, ಇವುಗಳಿಗೆಲ್ಲ ಸದ್ಯ ಈಗ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ‌.

ವಾಹನ ಮಾಲೀಕರಿಗೆ ಬಿಗ್ ರಿಲೀಫ್: ಹೆಚ್​ಎಸ್​ಆರ್​ಪಿ ಅಳವಡಿಸದ ವಾಹನ ಮಾಲೀಕರ ಮೇಲೆ ಸದ್ಯಕ್ಕಿಲ್ಲ ಕ್ರಮ
ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್ (ಸಾಂದರ್ಭಿಕ ಚಿತ್ರ)
Follow us
Kiran Surya
| Updated By: Ganapathi Sharma

Updated on:Dec 18, 2024 | 10:14 AM

ಬೆಂಗಳೂರು, ಡಿಸೆಂಬರ್ 18: ರಾಜ್ಯದಲ್ಲಿ ಎಷ್ಟು ಜನಸಂಖ್ಯೆ ಇದೆಯೋ ಸುಮಾರು ಅಷ್ಟೇ ವಾಹನಗಳನ್ನು ಕೂಡ ಜನ ಖರೀದಿ ಮಾಡಿದ್ದಾರೆ. ಒಂದೊಂದು ಮನೆಯಲ್ಲೂ ಕೂಡ ಮೂರ್ನಾಲ್ಕಕ್ಕಿಂತ ಹೆಚ್ಚು ವಾಹನಗಳಿವೆ. ಇತ್ತೀಚೆಗಂತೂ ಎಲ್ಲವೂ ಡಿಜಿಟಲ್ ಯುಗ ಆಗಿ ಹೋಗಿದೆ. ಇದಕ್ಕೆ ಪೂರಕವಾಗುವಂತೆ ಈಗಾಗಲೇ ಸಾರಿಗೆ ಇಲಾಖೆ 2019 ರ ಮಾರ್ಚ್ – 31 ರ ಹಿಂದಿನ ಹಳೆಯ ಎರಡು ಕೋಟಿಗೂ ಹೆಚ್ಚಿನ ವಾಹನಗಳಿಗೆ ಹೈಟೆಕ್ ಟಚ್ ಕೊಡಲು ಸಿದ್ಧವಾಗಿತ್ತು. ಆದರೆ ಯಾಕೋ ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಮಾತ್ರ ಸಿದ್ಧವಿಲ್ಲ. ಈಗಾಗಲೇ ಸಾರಿಗೆ ಇಲಾಖೆ ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31 ರವರೆಗೆ ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ ಕೂಡಲೇ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದರೆ, ಇದಕ್ಕೆ ಸದ್ಯ ಹೈಕೋರ್ಟ್ ರಿಲೀಫ್ ನೀಡಿದೆ.

ಮುಂದಿನ ಆದೇಶದ ವರೆಗೂ ವಾಹನ ಮಾಲೀಕರ ಮೇಲೆ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಈ ಬಗ್ಗೆ ಮಾತನಾಡಿದ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ, ಕೋರ್ಟ್ ಡಿಸೆಂಬರ್ 31 ರ ವರೆಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಮುಂದಿನ ಆದೇಶದ ಬಳಿಕ ಕೋರ್ಟ್ ಯಾವ ಸೂಚನೆ ನೀಡುತ್ತದೆಯೋ ಅದನ್ನು ನಾವು ಪಾಲನೆ ಮಾಡುತ್ತೇವೆ ಎಂದಿದ್ದಾರೆ.

1.44 ಕೋಟಿ ವಾಹನಗಳಿಗೆ ಇನ್ನೂ ಅಳವಡಿಕೆಯಾಗಿಲ್ಲ ಹೆಚ್ಎಸ್​ಆರ್​ಪಿ

ಕಳೆದ ಒಂದೂವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್​ಆರ್​ಪಿ ಆಳವಡಿಕೆ ಮಾಡಲಾಗಿದೆ. ಇನ್ನೂ 1.44 ಕೋಟಿ ಹಳೆಯ ವಾಹನಗಳು ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಬೇಕಿದೆ. ಇನ್ನು ಹೆಚ್ಚಿನ ವಾಹನ ಮಾಲೀಕರು ಹೆಚ್ಎಸ್​ಆರ್​ಪಿ ಆಳವಡಿಕೆಗೆ ನಿರಾಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಸಾರಿಗೆ ಇಲಾಖೆಯು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲು ಶಿಬಿರಗಳನ್ನು ಆಯೋಜನೆ ಮಾಡಲು ತೀರ್ಮಾನ ಮಾಡಿದೆ.

ಇದನ್ನೂ ಓದಿ: ಆನ್​ಲೈನ್ ಇನ್ವೆಸ್ಟ್​ಮೆಂಟ್ ಮಾಡುವ ಮುನ್ನ ಎಚ್ಚರ ಎಚ್ಚರ..ಬೆಂಗಳೂರಿನಲ್ಲಿ ನಕಲಿ ಗ್ಯಾಂಗ್​ ಪತ್ತೆ

ಒಟ್ಟಿನಲ್ಲಿ ಹೈಕೋರ್ಟ್ ನಿರ್ದೇಶನ ನೀಡುವರೆಗೆ ವಾಹನ ಮಾಲೀಕರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬಾರದು. ಜೊತೆಗೆ ದಂಡ ವಿಧಿಸಬಾರದು ಎಂದು ಸಾರಿಗೆ ಇಲಾಖೆಗೆ ಹೈಕೋರ್ಟ್ ಖಡಕ್ ಸೂಚನೆ ನೀಡಿರುವುದು ವಾಹನ ಸವಾರರನ್ನು ನಿರಾಳರನ್ನಾಗಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:50 am, Wed, 18 December 24

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು