ಕೋವಿಡ್ ನಿಯಮ ಮೀರಿ ಮೇಕೆದಾಟು ಪಾದಯಾತ್ರೆ; ಡಿಸಿಎಂ ಡಿಕೆ ಶಿವಕುಮಾರ್‌ಗೆ ಹೈಕೋರ್ಟಲ್ಲಿ ರಿಲೀಫ್

|

Updated on: Jun 09, 2023 | 6:11 PM

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​​ ಪಕ್ಷವು 2022 ರ ಜನವರಿ 9 ರಿಂದ 10 ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ರಾಮನಗರ ತಹಶೀಲ್ದಾರ್‌ ಜನವರಿ 13 ರಂದು ರಾಮನಗರ ಗ್ರಾಮೀಣ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಕೋವಿಡ್ ನಿಯಮ ಮೀರಿ ಮೇಕೆದಾಟು ಪಾದಯಾತ್ರೆ; ಡಿಸಿಎಂ ಡಿಕೆ ಶಿವಕುಮಾರ್‌ಗೆ ಹೈಕೋರ್ಟಲ್ಲಿ ರಿಲೀಫ್
ಡಿಕೆ ಶಿವಕುಮಾರ್
Follow us on

ಬೆಂಗಳೂರು: ಕೋವಿಡ್ ನಿಯಮ ಮೀರಿ ಮೇಕೆದಾಟು ಪಾದಯಾತ್ರೆ (Mekedatu) ನಡೆಸಿದ್ದಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ, ಅಂದಿನ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ (DK Shivakumar) ಮತ್ತು ಇತರ ಕೆಲವರ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳ ಪೈಕಿ ಒಂದು ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ (Karnataka High Court) ಶುಕ್ರವಾರ ರದ್ದುಗೊಳಿಸಿದೆ. ಇದರಿಂದ ಡಿಕೆ ಶಿವಕುಮಾರ್‌ಗೆ ನಿರಾಳತೆ ಒದಗಿದಂತಾಗಿದೆ. ಇನ್ನೆರಡು ಪ್ರಕರಣಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಡಿಕೆ ಶಿವಕುಮಾರ್ ಸೇರಿ ಕಾಂಗ್ರೆಸ್​ನ 13 ನಾಯಕರ ಮೇಲೆ ಪ್ರಕರಣ ದಾಖಲಾಗಿತ್ತು.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​​ ಪಕ್ಷವು 2022 ರ ಜನವರಿ 9 ರಿಂದ 10 ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ರಾಮನಗರ ತಹಶೀಲ್ದಾರ್‌ ಜನವರಿ 13 ರಂದು ರಾಮನಗರ ಗ್ರಾಮೀಣ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ಪೊಲೀಸರು, ಫೆಬ್ರುವರಿ 9 ರಂದು ವಿಚಾರಣಾ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ: ವೀಕೆಂಡ್ ವಿತ್ ರಮೇಶ್​: ಸಂಸ್ಕೃತದಲ್ಲಿ ಶ್ಲೋಕ ಹೇಳಿ ಗಮನ ಸೆಳೆದ ಡಿಕೆ ಶಿವಕುಮಾರ್

ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕ್ರಮ ಪ್ರಶ್ನಿಸಿ ಡಿಕೆ ಶಿವಕುಮಾರ್ ಮತ್ತಿತರ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಸುನಿಲ್ ದತ್ ಯಾದವ್ ಅವರನ್ನು ಒಳಗೊಂಡ ಏಕಸದಸ್ಯಪೀಠವು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿತ್ತು. ಅಷ್ಟೇ ಅಲ್ಲ ಅವರ ಜೊತೆ ಕಾಂಗ್ರೆಸ್‌ನ 13 ನಾಯಕರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ದೊರೆತಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ