ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿದ ವಿಶೇಷ ಕೋರ್ಟ್

ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್‌ನ ಚಾರ್ಜ್‌ ಶೀಟ್ ಇತ್ತೀಗೆಚೆ ಸಲ್ಲಿಕೆಯಾಗಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿದ ವಿಶೇಷ ಕೋರ್ಟ್
ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿದ ವಿಶೇಷ ಕೋರ್ಟ್
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Sep 04, 2024 | 10:06 PM

ಬೆಂಗಳೂರು, ಸೆಪ್ಟೆಂಬರ್​ 04: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ.

ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್​ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಗಲೂ ವಿಚಾರಣೆ ಮಾಡಿದ್ದ ಜಡ್ಜ್ ಸಂತೋಷ್ ಗಜಾನನ ಭಟ್​ ಅರ್ಜಿಯನ್ನು ವಜಾಗೊಳಿಸಿದ್ದರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ: 2 ಸಾವಿರ ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್‌ನ ಚಾರ್ಜ್‌ ಶೀಟ್ ಸಲ್ಲಿಕೆಯಾಗಿದೆ. ಆರೋಪ ಕೇಳಿಬರ್ತಿದ್ದಂತೆ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ನಂತ್ರ ಎಸ್‌ಐಟಿ ಮುಂದೆ ವಿಚಾರಣೆ ಎದುರಿಸಿದ್ದರು. ಬಳಿಕ ಪ್ರಜ್ವಲ್‌ನ ಕರ್ಮಕಾಂಡಗಳು ಚಾರ್ಜ್‌ಶೀಟ್ ಮೂಲಕ ಬಯಲಾಗಿವೆ. ತನಿಖೆ ಕೈಗೆತ್ತಿಕೊಂಡು ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸುವ ಮೂಲಕ ಸುಮಾರು 2 ಸಾವಿರ ಪುಟಗಳ ಚಾರ್ಜ್​ಶೀಟ್​ನ್ನು ಅಧಿಕಾರಿಗಳು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ: ಎಸ್​ಐಟಿ

ಬಸವನಗುಡಿ ಮನೆಯಲ್ಲಿ ಪ್ರಜ್ವಲ್ ಅತ್ಯಾಚಾರ ಎಸಗಿದ್ದ. ಮನೆ ಕ್ಲೀನ್ ಮಾಡಲು ಬಂದಿದ್ದಾಕೆ ಮೇಲೆ ಎರಗಿದ್ದ. ಕ್ಲೀನ್ ಮಾಡಲೆಂದು ಮನೆಗೆ ಬಂದಿದ್ದ ಮಹಿಳೆ ಮೇಲೆ, ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಾಗ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರ ಬಳಿಕ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದರಂತೆ. ಯಾರಿಗಾದ್ರೂ ಹೇಳಿದ್ರೆ ನಿನ್ನ ಪತಿಯನ್ನು ಜೈಲಿಗೆ ಕಳಿಸುವುದಾಗಿ ಬೆದರಿಸಿದ್ದರಂತೆ, ಇಷ್ಟೆ ಅಲ್ಲದೆ ಪ್ರಜ್ವಲ್, ಸಂತ್ರಸ್ತೆ ಮಗಳಿಗೂ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ಕೊಟ್ಟಿದ್ದ ಅನ್ನೋದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:50 pm, Wed, 4 September 24

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ