ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಸಿಎಂ ಪತ್ನಿ ಬರೆದ ಪತ್ರ ತಿರುಚಿದ್ರಾ ಅಧಿಕಾರಿಗಳು? ಅನುಮಾನಕ್ಕೆ ಇದೆ ಕಾರಣ

ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಬಲುದೊಡ್ಡ ಕಂಟಕವಾಗಿ ಪರಿಣಮಿಸಿದೆ. ಒಂದೆಡೆ, ಹೈಕೋರ್ಟ್​ನಲ್ಲಿ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದ್ದರೂ ಕುರ್ಚಿ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಲೇ ಇದ್ದಾರೆ. ಈ ಮಧ್ಯೆ, ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ, ಸಿಎಂ ಪತ್ನಿ ಪರ್ಯಾನ ನಿವೇಶನ ಕೋರಿ ಬರೆದಿದ್ದ ಪತ್ರವನ್ನು ತಿರುಚಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಸಿಎಂ ಪತ್ನಿ ಬರೆದ ಪತ್ರ ತಿರುಚಿದ್ರಾ ಅಧಿಕಾರಿಗಳು? ಅನುಮಾನಕ್ಕೆ ಇದೆ ಕಾರಣ
ಸಿದ್ದರಾಮಯ್ಯ
Follow us
ರಾಮ್​, ಮೈಸೂರು
| Updated By: Ganapathi Sharma

Updated on:Aug 21, 2024 | 10:46 AM

ಮೈಸೂರು, ಆಗಸ್ಟ್ 21: ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಅಧಿಕಾರಿಗಳು ದಾಖಲೆಯನ್ನು ತಿರುಚಿದ್ದಾರೆಯೇ? ಸಿಎಂ ಸಿದ್ದರಾಮಯ್ಯ ಪತ್ನಿ ತಮ್ಮ ಭೂಮಿಗೆ 50:50 ಅನುಪಾತದಲ್ಲಿ ಪರ್ಯಾಯ ನಿವೇಶನ ಕೊಡುವಂತೆ ಮನವಿ ಮಾಡಿ ಸಲ್ಲಿಸಿರುವ ಪತ್ರವನ್ನೇ ತಿರುಚಿದ್ದಾರೆಯೇ ಎಂಬ ಅನುಮಾನ ಇದೀಗ ಮೂಡಿದೆ. ಯಾವ ಸ್ಥಳದಲ್ಲಿ ಪರ್ಯಾಯ ನಿವೇಶನ ಕೊಡಬೇಕು ಎಂದು ಬರೆದ ಜಾಗಕ್ಕೆ ವೈಟ್​​ನರ್ ಹಾಕಿರುವುದು ಬೆಳಕಿಗೆ ಬಂದಿದೆ.

ವಿಜಯನಗರದ 2 ಮತ್ತು ಮೂರನೇ ಹಂತದಲ್ಲೇ ನಿವೇಶನ ಕೊಡುವಂತೆ ಸಿದ್ದರಾಮಯ್ಯ ಪತ್ನಿ ಕೇಳಿದ್ದರೇ ಎಂಬ ಪ್ರಶ್ನೆಯೂ ಈಗ ಉದ್ಭವಿಸಿದೆ. ವೈಟ್​ನರ್ ಹಾಕಿ ಅಳಿಸಿರುವುದರಿಂದ ಈ ಪ್ರಶ್ನೆ ಮೂಡಿದೆ.

ಇದೀಗ ಸಿಎಂ ಪತ್ನಿ ಬರೆದ ಪತ್ರ ಬಹಿರಂಗವಾಗಿರುವುದರಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಂತಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಿಎಂ ಪತ್ನಿ ಪಾರ್ವತಮ್ಮ ಬರೆದ ಪತ್ರ ಲಭ್ಯವಾಗಿದ್ದು, ಪ್ರಾಧಿಕಾರ ಬಡಾವಣೆ ನಿರ್ಮಿಸಿ ನಿವೇಶನ ಹಂಚಿದ ಮೇಲೆ ಆ ಜಮೀನನ್ನು ಸಿಎಂ ಪತ್ನಿಯ ಸಹೋದರ ಖರೀದಿಸಿದ್ದರೇ ಎಂಬ ಪ್ರಶ್ನೆಗೂ ಕಾರಣವಾಗಿದೆ. ಸಿಎಂ ಪತ್ನಿ ಪ್ರಾಧಿಕಾರಕ್ಕೆ ಬರೆದ ಪತ್ರದಲ್ಲಿ ಅದರ ಸ್ಪಷ್ಟ ಉಲ್ಲೇಖ.

ಇದನ್ನೂ ಓದಿ: ಸಿದ್ದರಾಮಯ್ಯ ಪರ ಕಾಂಗ್ರೆಸ್ ಹೈಕಮಾಂಡ್ ಬಳಿ ವಾದ ಮಂಡಿಸಲು ಅತ್ಯಾಪ್ತ ಸಚಿವರ ಸಿದ್ಧತೆ: ಸಿದ್ದು ಆಪ್ತರ ವಾದವೇನು?

ಸಿಎಂ ಪತ್ನಿ ಮುಡಾಗೆ ಬರೆದ ಪತ್ರದ ಪ್ರತಿ

Big Twist for MUDA scam: It is suspected that letter written by Siddaramaiah's wife was tampered after the scandal came to light

ಪತ್ರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2001 ರಲ್ಲೇ ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣ ಮಾಡಿ ನಿವೇಶನ ಹಂಚಿದೆ ಎಂದು ಪತ್ರದಲ್ಲಿ ನಮೂದಾಗಿದೆ. ಕೆಸರೆ ಗ್ರಾಮದ ಜಮೀನನ್ನು ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸ್ವಾಧೀನ ಪಡಿಸಿಕೊಂಡಿತ್ತು. ಆದರೆ, ಈ ಜಮೀನನ್ನು ಸಿಎಂ ಪತ್ನಿ ಸಹೋದರ ಖರೀದಿ ಮಾಡಿರುವುದು 2004 ರಲ್ಲಿ. ಹಾಗಾದರೆ ಸ್ವಾಧೀನ ಪಡಿಸಿಕೊಂಡು ನಿವೇಶನ ಹಂಚಿದ ಜಾಗವನ್ನು ಸಿಎಂ ಸಹೋದರ ಹೇಗೆ ಖರೀದಿ ಮಾಡಿದರು ಎಂಬ ಪ್ರಶ್ನೆಯೂ ಉದ್ಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:46 am, Wed, 21 August 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ