AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಐಡಿ ಎಡಿಜಿಪಿಯಾಗಿ ಬಿಜಯ್ ಕುಮಾರ್​ ಸಿಂಗ್ ನೇಮಕ; ಕರ್ನಾಟಕ ಸರ್ಕಾರದಿಂದ ಆದೇಶ

ಗೌರಿ ಲಂಕೇಶ್ ಹತ್ಯೆ ಕೇಸ್​ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಬಿಜಯ್ ಕುಮಾರ್​ ಸಿಂಗ್ ಅವರು ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸೇವೆಗೆ ತೆರಳಿದ್ದರು. ಇದೀಗ ಮತ್ತೆ ರಾಜ್ಯ ಸೇವೆಗೆ ಮರಳಿದ ಬಿಜಯ್ ಸಿಂಗ್ ಅವರನ್ನು ಸಿಐಡಿ ಎಡಿಜಿಪಿಯನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಸಿಐಡಿ ಎಡಿಜಿಪಿಯಾಗಿ ಬಿಜಯ್ ಕುಮಾರ್​ ಸಿಂಗ್ ನೇಮಕ; ಕರ್ನಾಟಕ ಸರ್ಕಾರದಿಂದ ಆದೇಶ
ಪ್ರಾತಿನಿಧಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on: Dec 18, 2023 | 7:17 AM

Share

ಬೆಂಗಳೂರು, ಡಿ.18: ಕೇಂದ್ರ ಸೇವೆಯಿಂದ ಮರಳಿದ ಹಿರಿಯ ಅಧಿಕಾರಿ ಬಿಜಯ್ ಕುಮಾರ್​ ಸಿಂಗ್ (B.K.Singh) ಅವರನ್ನು ಸಿಐಡಿ (CID) ಎಡಿಜಿಪಿಯನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ​ ತನಿಖಾ ತಂಡ ಎಸ್​ಐಟಿಯ ಮುಖ್ಯಸ್ಥರಾಗಿದ್ದ ಬಿಜಯ್ ಸಿಂಗ್, ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸೇವೆಗೆ ತೆರಳಿದ್ದರು. ಇದೀಗ ಮತ್ತೆ ರಾಜ್ಯ ಸೇವೆಗೆ ಮರಳಿದ ಹಿನ್ನೆಲೆ ಸಿಐಡಿ ಎಡಿಜಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ ಒಪ್ಪಿಸಿ 2019ರಲ್ಲಿ ಆದೇಶಿಸಿತ್ತು. ಬಿಜಯ್ ಸಿಂಗ್ ನೇತೃತ್ವದಲ್ಲಿ 21 ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು. ಈ ಎಲ್ಲಾ ಅಧಿಕಾರಿಗಳು ಹೊಂದಿದ್ದ ಪದವಿ, ಜವಾಬ್ದಾರಿಗಳಿಂದ ವಿಮುಕ್ತಿಗೊಳಿಸಲಾಗಿತ್ತು.

ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ಬರಹಗಳನ್ನು ಬರೆಯುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ 18 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮೋಹನ್ ನಾಯಕ್​ಗೆ ಇತ್ತೀಚೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಡೀ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆಯಾದ ಮೊದಲ ಆರೋಪಿ ಈತನಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು